ಹುಬ್ಬಳ್ಳಿ: ವಿದ್ಯಾರ್ಥಿಗಳಿಂದ ಶ್ರಮದಾನದ ಮೂಲಕ ಬಯಲು ಶೌಚಾಲಯಮುಕ್ತಗೊಳಿಸಲು ಪಣ

Source: so english | By Arshad Koppa | Published on 21st September 2017, 1:38 PM | State News |

ಇಲ್ಲೊಂದು ಗ್ರಾಮವನ್ನು ಬಯಲು ಶೌಚಾಲಯ ಮುಕ್ತ ಮಾಡಲು ವಿದ್ಯಾರ್ಥಿಗಳು ಪಣ ತೊಟ್ಟಿದ್ದಾರೆ. ಶ್ರಮದಾನ ಮಾಡುವ ಮೂಲಕ ತಾವೇ ಕಲ್ಲು ಹೊತ್ತು ಶೌಚಾಲಯಗಳನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ ಸ್ಚಚ್ಚತೆಯಿಂದ ಕೂಡಿದ ಗ್ರಾಮ ಗ್ರಾಮ ಮಾಡುವ ಸಂಕಲ್ಪ ತೊಟ್ಟಿದ್ದಾರೆ. 
ಹೌದು. ಇಂತ ಒಂದು ಮಹತ್ ಕಾರ್ಯಕ್ಕೆ  ಕಲಘಟಗಿಯ ಗುಡ್ ನ್ಯೂಸ್ ಕಾಲೇಜ್  ವಿದ್ಯಾರ್ಥಿಗಳು ಕೈಜೋಡಿಸಿದ್ದು ಬಯಲು ಶೌಚ ಮುಕ್ತ ಗ್ರಾಮ ಮಾಡಲು ಶ್ರಮಿಸುತ್ತಿದ್ದಾರೆ. ಹಳ್ಳಿಗಳ ಉದ್ದಾರ ಆಗದೇ ದೇಶದ ಏಳಿಗೆ ಸಾದ್ಯವಿಲ್ಲ . ಸರ್ಕಾರ ಗ್ರಾಮೀಣ ಬದುಕನ್ನು ಹಸನ ಮಾಡಲು ಹಲವಾರು ಯೋಜನೆಯನ್ನು ರೂಪಿಸುತ್ತೆ. ಮಾಹಿತಿ ಮತ್ತು ಇಚ್ಚಾ ಶಕ್ತಿಯ ಕೊರತೆಯಿಂದ ಬಹುತೇಕ ಕಾರ್ಯಕ್ರಮಗಳು ಗ್ರಾಮಗಳನ್ನು ತಲುಪುವದೇ ಇಲ್ಲಾ. ಇಂತಾ ಸಂದರ್ಭದಲ್ಲಿ ಗ್ರಾಮವನ್ನು ಬಯಲು ಶೌಚದಿಂದ ಮುಕ್ತಗೊಳಿಸಲು ಕಲಘಟಗಿಯ ಗುಡ್ ನ್ಯೂಸ್ ಕಾಲೇಜ್  ವಿದ್ಯಾರ್ಥಿಗಳು ಮನೆಗೊಂದು ಶೌಚಾಲಯ ನಿರ್ಮಿಸುವ ಸಂಕಲ್ಪ ಮಾಡಿ ಕಾರ್ಯಪ್ರವೃತರಾಗಿದ್ದಾರೆ‌. ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮವನ್ನು ಧಾರವಾಡ ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯ್ಕೆ ಮಾಡಿಕೊಂಡು ಶೌಚಾಲಯ ಕಟ್ಟುವ ಕೆಲಸ ಪ್ರಾರಂಭಿಸಿದ್ದಾರೆ. 
ಸುಮಾರು 4 ಸಾವಿರ ಜನ ಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಈ ಮೊದಲು ಬೆರಳೆಣಿಕೆಯಷ್ಟು ಶೌಚಾಲಯಗಳು ಇದ್ದವು. ಹೀಗಾಗಿ ಇಲ್ಲಿ ವಿದ್ಯಾರ್ಥಿಗಳು ಈ ಗ್ರಾಮವನ್ನು ಆಯ್ಕೆ ಮಾಡಿಕೊಂಡು  ಸುಮಾರು 200 ಕ್ಕೂ ಹೆಚ್ಚು ಶೌಚಾಲಯ ನಿರ್ಮಾಣದ ಹೊಣೆ ಹೊತ್ತಿದ್ದಾರೆ . ಒಟ್ಟು 70 ವಿದ್ಯಾರ್ಥಿಗಳು 10 ಗುಂಪುಗಳಲ್ಲಿ ಮುಂಜಾನೆ 8 ಗಂಟೆಯಿಂದ ಸಂಜೆ 4 ರ ವರೆಗೆ ಕೆಲಸ ಮಾಡಿ ದಿನಕ್ಕೆ 10 ರಿಂದ 15 ಶೌಚಾಲಯ ನಿರ್ಮಾಣ ಮಾಡುತಿದ್ದಾರೆ. ಒಂದು ವಾರದಲ್ಲಿ 130 ಕ್ಕೂ ಹೆಚ್ಚು ಶೌಚಾಲಯಗಳ ನಿರ್ಮಾಣದ ಗುರಿ ಹೊಂದಲಾಗಿದೆ. ವಿದ್ಯಾರ್ಥಿಗಳ ಶ್ರಮದಾನದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದಾರೆ. ವಿದ್ಯಾರ್ಥಿಗಳ ಜೊತೆ ತಾವು ಶ್ರಮದಾನ ಮಾಡುವ ಮೂಲಕ ಶೌಚಾಲಯ ನಿರ್ಮಾಣಕ್ಕೆ ಕೈ ಜೋಡಿಸುತ್ತಿದ್ದಾರೆ.


ಶೌಚಾಲಯ ನಿರ್ಮಾಣಕ್ಕೆ ಪಂಚಾಯಿತಿಯಿಂದ ಸುಮಾರು 12ರಂದ 15 ಸಾವಿರ ರೂ ಸಹಾಯಧನ  ನೀಡಲಾಗುತ್ತದೆ. ಇದೇ ಹಣದಿಂದ ಶೌಚಾಲಯಕ್ಕೆ ಬೇಕಾದ ಸಿಮೆಂಟ್, ಇಟ್ಟಿಗೆ ಸೇರಿದಂತೆ ಪರಿಕರಗಳನ್ನು ಜಿಲ್ಲಾ ಪಂಚಾಯಿತಿ ಒದಗಿಸಿದೆ. ಇವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಶೌಚಾಲ ನಿರ್ಮಾಣ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ವಿದ್ಯಾರ್ಥಿಗಳ ಶ್ರಮದಾನ ಗ್ರಾಮಸ್ಥರ ಪ್ರಶಂಸೆಗೆ ಪಾತ್ರವಾಗಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...