ಹುಬ್ಬಳ್ಳಿ:ಕಳಸಾ ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

Source: so english | By Arshad Koppa | Published on 19th August 2017, 8:26 AM | State News | Guest Editorial |

ಹುಬ್ಬಳ್ಳಿ, ಆ ೧೭: ಕಳಸಾ ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಆಗ್ರಹಿಸಿ ಕಳೆದ 770 ದಿನಗಳ ಕಾಲ ನಿರಂತರ ಧರಣಿ ಹಾಗೂ ಪ್ರತಿಭಟನೆಯನ್ನು ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಮಾಡುತ್ತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆಯುವ ಯತ್ನ ಮಾಡುತ್ತಿವೆ. ಆದ್ರೆ ಇಲ್ಲಿಯವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೋಜನೆ ಜಾರಿಗೆ ಪ್ರಯತ್ನ ಮಾಡುತ್ತಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಯೋಜನೆ ಅನುಷ್ಠಾನ ವಿಚಾರದಲ್ಲಿ ರಾಜಕೀಯ ಮಾಡುತ್ತ ಬಂದಿವೆ. ಹೀಗಾಗಿ ಕೂಡಲೇ  ಭಾಗದ ಸಂಸದರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮದ್ಯಸ್ಥಿಕೆ ವಹಿಸುವಂತೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...