ಹುಬ್ಬಳ್ಳಿ: ನಿಷೇದಾಜ್ಞೆಯ ಹೊರತಾಗಿಯೂ ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ನ ಗಣಪತಿ ವಿಗ್ರಹ-23 ಜನರಿಗೆ ನೋಟಿಸ್ 

Source: so english | By Arshad Koppa | Published on 27th August 2017, 9:40 AM | State News | Guest Editorial |

ಹುಬ್ಬಳ್ಳಿ, ಆ ೨೬: ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಆದೇಶವನ್ನು ದಿಕ್ಕರಿಸಿ ನಗರದ ವಿವಿಧ ಕಡೆ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣೇಶ ಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದ 16 ಗಣೇಶ ಮೂರ್ತಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 


ಜಿಲ್ಲಾಧಿಕಾರಿಗಳು ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಹಾಗೂ ತಯಾರಿಸುವವ ಮೇಲೆ ಕ್ರಮ ಕೈಗೊಳ್ಳಲು ಎರಡು ತಂಡಗಳನ್ನು ರಚನೆ ಮಾಡಿದ್ದರು. ಹೀಗಾಗಿ ಧಾರವಾಡ ಶ್ರೀನಗರ ಸರ್ಕಲ್ ನಲ್ಲಿ ಅಕ್ರಮವಾಗಿ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವಾಗ 16 ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಅಕ್ರಮವಾಗಿ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸಿದ ಹಾಗೂ ಮಾರಾಟ ಮಾಡಿದ ಆರೋಪದ ಮೇಲೆ 23 ಜನರಿಗೆ ನೋಟಿಸ್ ನೀಡಲಾಗಿದೆ. 
ಅಲ್ಲದೆ ನಗರದ ವಿವಿಧ ಕಡೆ ಸುಮಾರು 50 ಕ್ಕೂ ಹೆಚ್ಚು ದೊಡ್ಡ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಿರುವದು ಬೆಳಕಿಗೆ ಬಂದಿದ್ದು, ಅಂತ ಗಣೇಶ ಮಂಡಳಿಗೂ ನೋಟಿಸ್ ನೀಡಲು ಚಿಂತನೆ ನಡೆದಿದೆ ಎಂದು ಮಹಾನಗರ ಪಾಲಿಕೆ ಪರಸರ ಅಭಿಯಂತರ ಶ್ರೀಧರ ಟಿ ಎನ್ ತಿಳಿಸಿದ್ದಾರೆ.

Read These Next

ಜಲಶಕ್ತಿ ಅಭಿಯಾನವನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿ -ಜೆ.ಮಂಜುನಾಥ್

ಇಂದು ಕೋಲಾರ ತಾಲ್ಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ...

ಜಿಲ್ಲಾಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್  ಖಜಾಂಚಿಯಾಗಿ ವಿಜಯ್, ರಾಜ್ಯಪರಿಷತ್‍ಗೆ ಡಿ.ಸುರೇಶ್‍ಬಾಬು ಆಯ್ಕೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್ ಹಾಗೂ ಖಜಾಂಚಿಯಾಗಿ ಕೆ.ವಿಜಯ್, ರಾಜ್ಯಪರಿಷತ್ ಸದಸ್ಯರಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...