ಹುಬ್ಬಳ್ಳಿ ತಾಲೂಕ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಜನ ಜಾಗೃತಿ ಧರ್ಮ ಸಮಾವೇಶ

Source: balanagoudra | By Arshad Koppa | Published on 24th March 2017, 9:22 PM | State News |

ರಂಭಾಪುರಿ ಪೀಠ / ಹುಬ್ಬಳ್ಳಿ - ಮಾರ್ಚ 23. 
     ಹುಬ್ಬಳ್ಳಿ ತಾಲೂಕ ತಿರುಮಲಕೊಪ್ಪದ (ತಡಸ್ ಕ್ರಾಸ್) ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ, ಶ್ರೀ ರಂಭಾಪುರಿ ಜಗದ್ಗುರುಗಳವರ ಪೀಠಾರೋಹಣದ ರಜತ ಮಹೋತ್ಸವದ ಅಂಗವಾಗಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ದಿನಾಂಕ 29-3-2017 ಬುಧವಾರದಂದು ಸಂಜೆ 5.00 ಘಂಟೆಗೆ ಜನ ಜಾಗೃತಿ ಧರ್ಮ ಸಮಾವೇಶ ಜರುಗಲಿದೆ. 
    ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರಾದ ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸುವ ಸಮಾರಂಭದಲ್ಲಿ ಕಲಘಟಗಿಯ ರೇವಣಸಿದ್ಧ ಶಿವಾಚಾರ್ಯ ಸ್ವಾಮಿಗಳು, ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಮಳಲಿಯ ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು, ಕುಂದಗೋಳದ ಶಿತಿಕಂಠೇಶ್ವರ ಶಿವಾಚಾರ್ಯ ಸ್ವಾಮಿಗಳು, ಬಂಕಾಪುರದ ರೇವಣಸಿದ್ಧ ಶಿವಾಚಾರ್ಯ ಸ್ವಾಮಿಗಳು, ಕುಮಾರಪಟ್ಟಣಂ ಜಗದೀಶ್ವರ ಸ್ವಾಮಿಗಳು ಉಪದೇಶಾಮೃತ ನೀಡುವರು.


    ಮುಖ್ಯ ಅತಿಥಿಗಳಾಗಿ ಸಂಸದ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಾಸಕ ಸಿ.ಎಸ್. ಶಿವಳ್ಳಿ, ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರ, ಮಾಜಿ ಸಂಸದ ಎಂ.ಸಿ.ಕುನ್ನೂರ, ಮಾಜಿ ಶಾಸಕರಾದ ಎಸ್.ಐ. ಚಿಕ್ಕನಗೌಡ್ರ, ಎಮ್.ಎಸ್. ಅಕ್ಕಿ ಜಿ.ಪಂ. ಸದಸ್ಯರಾದ ಚನ್ನವ್ವ ಶಿವನಗೌಡರ, ಸುರೇಶಗೌಡ್ರ ಪಾಟೀಲ, ಭರಮಪ್ಪ ಮುಗಳಿ ಮತ್ತು ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ, ಎಮ್.ಆರ್. ಪಾಟೀಲ, ಈಶ್ವರಯ್ಯ ನಾವಳ್ಳಿಮಠ, ಎನ್.ಬಿ. ಹಿರೇಮಠ, ಅರವಿಂದ ಕಟಗಿ, ಶಂಕರಗೌಡ ಸಿದ್ಧನಗೌಡ್ರ, ಎನ್.ಎಸ್. ಪಾಟೀಲ, ಎಸ್.ಎಸ್.ಪಾಟೀಲ, ಶ್ರೀಕಂಠಗೌಡ್ರ ಹಿರೇಗೌಡ್ರ, ವೀರೇಶ ಪಾಟೀಲ, ಪ್ರಕಾಶ ಬೆಂಡಿಗೇರಿ, ಟಿ.ಜಿ. ಬಾಲಣ್ಣವರ, ಶಂಕರಯ್ಯ ಅಂದಾನಿಮಠ, ಮಂಜುನಾಥ ಮುರಳ್ಳಿ, ಸಿ.ವಾಯ್. ಹಿರೇಗೌಡ್ರ, ಮಂಜುನಗೌಡ ಪಾಟೀಲ, ಶಂಕರಣ್ಣ ಬಿಜವಾಡ, ದೊಡ್ಡೇಶಪ್ಪ ನಲವಡಿ, ಬಿ.ಎಂ. ಮೊರಬದ, ಬಸವರಾಜ ಹೊಸಕಟ್ಟಿ ಸೇರಿದಂತೆ ಅನೇಕ ಗಣ್ಯರು, ಸುತ್ತ ಮುತ್ತಲ ಗ್ರಾಮಗಳ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಭಾಗವಹಿಸುವರು. ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗುವವು. ಸಮಾರಂಭದ ಪೂರ್ವದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವ ಜರುಗುವುದು. ಪ್ರಾತÀ:ಕಾಲದಲ್ಲಿ ಶಿವದೀಕ್ಷೆ ಕಾರ್ಯಕ್ರಮ ಜರುಗಲಿದೆ. ದಿನಾಂಕ 28-3-2017ರ ಪ್ರಾತ:ಕಾಲ ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಮಂಗಲ ಮೂರ್ತಿಗೆ ರುದ್ರಾಭಿಷೇಕ, ದಿನಾಂಕ 30-3-2017ರ ಸಂಜೆ ಪಾರ್ವತಿ ರಥೋತ್ಸವ, ಕಡುಬಿನ ಕಾಳಗ ಮತ್ತು ಧರ್ಮ ಸಭೆ ನಡೆಯುವುದು. ಆಗಮಿಸುವ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಇರುತ್ತದೆ. 
    ಈ ಎಲ್ಲ ಕಾರ್ಯಕ್ರಮಗಳಲ್ಲಿ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶ್ರೀ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ವಿನಂತಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...