ಹುಬ್ಬಳ್ಳಿ:ಎಸ್.ಎಂ. ಕೃಷ್ಣ ಅಳಿಯ ಸಿದ್ದಾರ್ಥ ಮನೆ ಮೇಲಿನ ಧಾಳಿ ಆದಾಯ ತೆರಿಗೆ ಇಲಾಖೆಯ ನಿರ್ಧಾರ-ಶೆಟ್ಟರ್

Source: so english | By Arshad Koppa | Published on 21st September 2017, 1:58 PM | State News |

ಹುಬ್ಬಳ್ಳಿ: ಎಸ್.ಎಂ.ಕೃಷ್ಣ ಅಳಿಯ ಸಿದ್ದಾರ್ಥ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ. ಐಟಿ ಒಂದು ಸ್ವತಂತ್ರ್ಯ ಇಲಾಖೆ. ಅವರದ್ದೇ ಮೂಲಗಳಿಂದು ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ, ವಿಪಕ್ಷನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿದ ಅವರು, ನಾನು ಈ ಹಿಂದೆಯೂ ಹೇಳಿದಂತೆ ನಮ್ಮ ಅಂದ್ರೆ ಬಿಜೆಪಿ ನಾಯಕರ ಮನೆ ಮೇಲೂ ಐಟಿ ದಾಳಿಗಳಾಗಿವೆ. ತಪ್ಪು ಮಾಡಿರದಿದ್ರೆ ಐಟಿ ದಾಳಿಗೆ ಹೆದರೊ ಅವಶ್ಯಕತೆ ಇಲ್ಲ. ತಮ್ಮ ತಪ್ಪನ್ನ ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು, ಇದು ರಾಜಕೀಯ ಪ್ರೇರಿತ ಅಂತ ಹೇಳ್ತಿದ್ದಾರೆ. ಒಟ್ಟು ಕಾಂಗ್ರೆಸ್ ನವರದ್ದು ಜನರ ದಾರಿ ತಪ್ಪಿಸುವ ವಿಚಾರ ಎಂದು ಕುಟುಕಿದರು. ಇನ್ನು ಕ್ಷೇತ್ರ ಬದಲಾವಣೆ ವಿಚಾರವಾಗಿ ಮಾತನಾಡಿದ ಶೆಟ್ಟರ್, ಬಿ.ಎಸ್.ವೈ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಬಾಗಲಕೋಟೆ ಜಿಲ್ಲೆಯ ನಾಯಕರು ಅಪೇಕ್ಷಿಸಿದ್ದಾರೆ. ಯಡಿಯೂರಪ್ಪನವರೂ ಇದಕ್ಕೆ ಸಮ್ಮತಿ ನೀಡಿದ್ದಾರೆ. ಆದ್ರೆ, ನಾವು ಸ್ಪರ್ಥಿಸುವ ಕ್ಷೇತ್ರದ ಬಗ್ಗೆ ಪಕ್ಷದ ಕೋರ್ ಕಮೀಟಿ ಸಭೆಯಲ್ಲಿ ಚರ್ಚೆ ಆಗುತ್ತೆ. ಹೈ ಕಮಾಂಡ ನಿರ್ಧಾರಕ್ಕೆ ನಾನು ಬದ್ಧ ಅಂತ ಹೇಳಿದ್ರು. ಇನ್ನು ಗೌರಿ ಲಂಕೇಶ ಹತ್ಯೆ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಸಿಎಂ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಗೌರಿ ಲಂಕೇಶ್, ಎಂ.ಎಂ. ಕಲಬುರಗಿ ಹಾಗೂ ಡಿವೈಎಸ್ಪಿ ಗಣಪತಿ ಅವರ ಸಾವು ಪ್ರಕರಣವನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಿದ್ದರಾಮಯ್ಯ, ಪ್ರಕರಣವನ್ನ ಸಿಬಿಐ ಗೆ ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಅಲ್ದೆ, ರಾಜ್ಯದಲ್ಲಿನ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಕೈಕಟ್ಟಿ ಕುಳಿತಿದ್ದಾರೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಮುಂದಾದ್ರೆ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದಕ್ಕೆ ಕೆಂಪಯ್ಯನವರೇ ಕಾರಣ. ಗಣಪತಿ ಆತ್ಮಹತ್ಯೆ ಪ್ರಕರಣವನ್ನ ಸಿಬಿಐ ತನಿಖೆಯಾದ್ರೆ ಕೆಂಪಯ್ಯ ಮತ್ತು ಕೆ.ಜೆ. ಜಾರ್ಜ್ ಅವರ ಮಖವಾಡ ಕಳಚುತ್ತೆ ಅಂತ ಆಕ್ರೋಶ ವ್ಯಕ್ತಪಡಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...