ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಹಿನ್ನೆಲೆ; ಪೊಲೀಸರಿಂದ ರೌಡಿಗಳ ಪರೇಡ್

Source: sonews | By Staff Correspondent | Published on 23rd March 2018, 10:48 PM | State News | Don't Miss |

ಹುಬ್ಬಳ್ಳಿ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ರೌಡಿಗಳ ಪರೇಡ್ ನಡೆಯಿತು. ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ರೌಡಿಗಳ ಪರೇಡ್ ಮಾಡಿಸಿದ ಹುಬ್ಬಳ್ಳಿ ಧಾರವಾಡ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ. ಎನ್. ನಾಗರಾಜ್, ಡಿಸಿಪಿಗಳಾದ ರೇಣುಕಾ ಸುಕುಮಾರನ್, ಬಿ.ಎಸ್. ನ್ಯಾಮಗೌಡ ನೇತೃತ್ವದಲ್ಲಿ ಪರೇಡ್ ನಡೆಸಿ, ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಅವಳಿ ನಗರದ ರೌಡಿ ಶೀಟರ್ ಗಳಿಗೆ ಸೂಚನೆ ನೀಡಿದರು. ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಗುಡುಗಿದ ಅವರು ಸುಮಾರು 200 ಕ್ಕೂ ಅಧಿಕ ರೌಡಿಗಳ ಪರೇಡ್ ತೆಗೆದುಕೊಂಡ ಪೊಲೀಸ್ ಆಯುಕ್ತರು ರೌಡಿಗಳಿಗೆ ವಾರ್ನ್ ಮಾಡಿದರು. ಚುನಾವಣಾ ಸಂದರ್ಭದಲ್ಲಿನ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆ ಮಾಡದೆ ಶಾಂತಿಯುತವಾಗಿ ಚುನಾವಣೆ ಯಲ್ಲಿ ಭಾಗವಹಿಸಬೇಕೆಂದು ಸೂಚನೆ ನೀಡಿದರು. ಅಲ್ಲದೆ, ನೀವು ಮತದಾನ ಮಾಡಿ, ಆದರೆ ಇನ್ನೊಬ್ಬರಿಗೆ ತೊಂದರೆ ಕೊಡಬೇಡಿ. ಅಪರಾಧಗಳ ಆಧಾರದ ಮೇಲೆ ವೈಯಕ್ತಿಕ ಬಾಂಡ್ ನೀಡುವಂತೆ ಸೂಚನೆ ನೀಡಿದರು. ಲಕ್ಷ ದಿಂದ ಲಕ್ಷ ರೂಪಾಯಿಗಳ ವರೆಗೂ ಬಾಂಡ್ನೀಡಿ ನಾವು ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗ ವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು ಎಂದು ತಾಕೀತು ಮಾಡಿದರು.

ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಅವರ ಸೂಚನೆಯಿಂದ ರೌಡಿ ಶಿಟರ್ ಗಳಿಗೆ ನಡುಕ ಉಂಟಾಗಿದ್ದು, ರಾಜಕೀಯ ವಲಯದಲ್ಲಿ ಇದು ಯಾವ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...