ಯೋಗಿಶ್ ಹತ್ಯೆ ಪ್ರಕರಣ; ಸಿಬಿಐ ತನಿಖೆ ಇಲ್ಲ-ಸಿದ್ದರಾಮಯ್ಯ

Source: sonews | By sub editor | Published on 2nd December 2017, 12:00 AM | State News | Don't Miss |

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹೆಬ್ಬಳ್ಳಿ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ವಿನಯ ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ. ಆದರೆ, ಅವರಿಗೆ ಆಗದವರು ಸುಳ್ಳು ವಿಚಾರಗಳನ್ನು ಮುಂದಿಟ್ಟುಕೊಂಡು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೆ ಈಗ ಜ್ಞಾನೋದಯವಾಗಿದ್ದು, ಹದಿನೈದು ದಿನಗಳಲ್ಲಿ ಮಹಾದಾಯಿ ವಿವಾದ ಬಗೆಹರಿಸುವೆ ಎಂದು ಹೇಳಿದ್ದಾರೆ. ಮೂರು ವರ್ಷಗಳಿಂದ ಅವರೇನು ಮಾಡುತ್ತಿದ್ದರು ಎಂಬುದನ್ನು ಹೇಳಬೇಕೆಂದ ಸಿಎಂ, ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

‘ನನ್ನನ್ನು ರಾಜಕೀಯವಾಗಿ ಬಚ್ಚಾ’ ಎಂದ ಯಡಿಯೂರಪ್ಪ ತಾವೇನೆಂದು ಪ್ರಶ್ನಿಸಿಕೊಳ್ಳಲಿ. ಅವರ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ ಜೈಲಿಗೆ ಹೋಗಿ ಬಂದಿದ್ದು, ಇಂತಹವರು ನಮಗೇನು ಬುದ್ಧಿ ಹೇಳುತ್ತಾರೆ. ಅವರಿಗೆ ಯಾವ ಸಿದ್ಧಾಂತವಿದೆ ಎಂದು ಲೇವಡಿ ಮಾಡಿದರು.

Read These Next

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...