38 ವರ್ಷದ ಅತ್ಯುತ್ತಮ ಸೇವೆಗಾಗಿ ಇಬ್ರಾಹೀಮ್‍ಸಾಬ್ ಗೆ ಸನ್ಮಾನ

Source: sonews | By Staff Correspondent | Published on 22nd December 2018, 7:08 PM | Coastal News | Don't Miss |

ಭಟ್ಕಳ: ಹೆಬಳೆ ಗ್ರಾಮಪಂಚಾಯತ್ ವ್ಯಾಪ್ತಿಯ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಳೆದ 38 ವರ್ಷಗಳಿಂದ ಅಟೆಂಡರ್ ರಾಗಿ  ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಇಬ್ರಾಹಿಮ್ ಸಾಬ್ ರಿಗೆ ಸಂಸ್ಥೆಯ ಆಡಳಿತ ಮಂಡಳಿ ಸನ್ಮಾನಿಸಿ ಗೌರವಿಸಿದೆ.

ಶನಿವಾರ ಸೈಯ್ಯದ್ ಅಲಿ ಕ್ಯಾಂಪಸ್ ನಲ್ಲಿ ಜರಗಿದ 47ನೇ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ.ಒವೇಸ್ ಕ್ವಾಜಾ ರುಕ್ನುದ್ದೀನ್ ಶಾಲು ಹಾಕಿ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿದರು. 

ಈ ಸಂದರ್ಭದಲ್ಲಿ ಸಂಸ್ಥೇಯ ಉಪಾಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್ ಖಾಝಿ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಸಲಾಹುದ್ದೀನ್ ಎಸ್.ಕೆ. ಸ್ಕೂಲ್ ಬೋರ್ಡ್ ಚೇರ್ಮನ್ ಕಾದಿರ್ ಮೀರಾ ಪಟೇಲ್, ಪಿಆರ್‍ಒ ಕಾರ್ಯದರ್ಶಿ ಮೌಲಾನ ಅಝೀಝುರ್ರಹ್ಮಾನ್ ನದ್ವಿ ರುಕ್ನುದ್ದೀನ್, ಮೌಲ್ವಿ ಹಾಫೀಝ್ ಅಬ್ದುಲ್ ಗನಿ, ಸೈಯ್ಯದ್ ಶಕೀಲ್ ಎಸ್.ಎಂ. ಸೈಯ್ಯದ್ ಯೂಸೂಫ್ ರೈಯ್ಯಾನ್ ಬರ್ಮಾವರ್, ಬಿಲಾಲ್ ರುಕ್ನುದ್ದೀನ್, ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಶಮ್ಸ್ ಹಳೆ ವಿದ್ಯಾರ್ಥಿಗಳ ಸಂಘದ ಮುಹಮ್ಮದ್ ನೂಹ್ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಮುಹಮ್ಮದ್ ರಝಾ ಮಾನ್ವಿ ಮತ್ತಿತರರು ಉಪಸ್ಥಿತರಿದ್ದರು. 


 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...