ಪಾನಮತ್ತ ಯುವಕರ ತಂಡದಿಂದ  ಪೊಲೀಸರ ಮೇಲೆ ದಾಳಿ 

Source: S.O. News Service | By MV Bhatkal | Published on 1st October 2018, 2:50 PM | Coastal News | Don't Miss |

ಪುತ್ತೂರು: ಪಾನಮತ್ತ ಯುವಕರು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದಾಂಧಲೆ ನಡೆಸಿದ ಘಟನೆ ಕಡಬದಲ್ಲಿ ನಡೆದಿದೆ.
ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರೀಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೊಗೀಶ್, ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಪಾನಮತ್ತರಾಗಿ ಬಂದ ಯುವಕರ ತಂಡವನ್ನು ಪೊಲೀಸರು ತಡೆದು ತಪಾಸಣೆಗೆ ಮುಂದಾದ ವೇಳೆ ಪಾನಮತ್ತರಾದ ಯುವಕರ ತಂಡ ಏಕಾಏಕಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಪಾನಮತ್ತ ಯುವಕರು ಪೊಲೀಸ್ ವಾಹನದ ಗಾಜನ್ನು ಪುಡಿಗೈದು ಹಾನಿಗೊಳಿಸಿದ್ದು, ಮದ್ಯಪಾನ ತಪಾಸಣೆಯ ಸಲಕರಣೆಯನ್ನೂ ಧ್ವಂಸಗೈದಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಪುಟ್ಟಸ್ವಾಮಿಯವರ ಹಲ್ಲು ಹಾಗೂ ಶ್ರೀಶೈಲ ಅವರ ಹಣೆಗೆ ಏಟಾಗಿದ್ದು, ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆಸಿದ ನೂಜಿಬಾಳ್ತಿಲ ನಿವಾಸಿಗಳಾದ ರತ್ನಾಕರ, ಹರೀಶ, ದಿನೇಶ, ಪ್ರಶಾಂತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೂಜಿಬಾಳ್ತಿಲ ನಿವಾಸಿಗಳಾದ ರತ್ನಾಕರ, ಹರೀಶ ಇಬ್ಬರು ಸೈನಿಕರಾಗಿದ್ದು, ರಜೆ ನಿಮಿತ್ತ ಮನೆಗೆ ಮರಳಿದ್ದರು. ನಿನ್ನೆ ಸಂಜೆ ಸ್ನೇಹಿತರಾದ ದಿನೇಶ್ ಹಾಗೂ ಪ್ರಶಾಂತ ಸೇರಿದಂತೆ ಮತ್ತಿತರ ರೊಂದಿಗೆ ಬಾರ್‌ಗೆ ತೆರಳಿ ಮದ್ಯಪಾನ ಮಾಡಿದ್ದಾರೆ. ನಂತರ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿಕೊಂಡು ಬಂದ ಇವರನ್ನು ಪೊಲೀಸರು ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕುಪಿತರಾದ ಸೈನಿಕರಾದ ರತ್ನಾಕರ ಹಾಗೂ ಹರೀಶ ಸೇರಿದಂತೆ ಮತ್ತಿತರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...