ಕಾರವಾರ: 21ರಂದು ಬಾಡ ಗುರು ಮಠದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Source: S.O. News Service | By Mohammed Ismail | Published on 19th June 2018, 11:55 AM | Coastal News | Don't Miss |

ಕಾರವಾರ: ದಿನಾಂಕ 21-06-2018 ರಂದು ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ಅಂದುಬೆಳಿಗ್ಗೆ 6.30ಕ್ಕೆ ಜಿಲ್ಲಾ ಮಟ್ಟದಸಾಮೂಹಿಕ ಯೋಗಕಾರ್ಯಕ್ರಮವನ್ನುನಗರದಗುರುಮಠ ಬಾಡಕಾರವಾರಇಲ್ಲಿ ನಡೆಯಲಿದೆ.

 ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆಯುಷ್ ಇಲಾಖೆ, ಪತಂಜಲಿ ಯೋಗ ಸಮಿತಿಕಾರವಾರ, ಶಿಕ್ಷಣ ಮತ್ತುಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮವನ್ನುಕಂದಾಯ ಮತ್ತು ಕೌಸಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಉದ್ಘಾಟಿಸಲಿದ್ದಾರೆ.
ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಗೌರವ ಉಪಸ್ಥಿತರಿದ್ದು ಶಾಸಕಿ ರೂಪಾಲಿ ನಾಯ್ಕ್‍ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯಎಲ್ಲ ಶಾಸಕರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಯೋಗಾಸಕ್ತ  ಪ್ರೌಢಶಾಲಾ ವಿದ್ಯಾರ್ಥಿಗಳು, ಎನ್.ಸಿ.ಸಿ. ಕೆಡೆಟಗಳು, ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳು ಮತ್ತು ಯೋಗಾಸಕ್ತ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಈ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ದಿನಾಂಕ 20-06-2018 ರಂದುಮಧ್ಯಾಹ್ನ 2-30 ಘಂಟೆಗೆಯೋಗ ನಡಿಗೆಕಾರ್ಯಕ್ರಮವನ್ನುಜಿಲ್ಲಾಆಯುಷ್ ಅಧಿಕಾರಿಗಳ ಕಛೇರಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ನಡೆಯಲಿದ್ದು ಈ ಯೋಗ ನಡಿಗೆಯಲ್ಲಿ ವಿವಿಧಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಿಲ್ಲಾಆಯುಷ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಸಿ.ಸಿ. ಕೆಡೆಟಗಳು, ಆಶಾಕಾರ್ಯಕರ್ತರು, ಶಾಲಾ ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಯೋಗಪಟುಗಳು ಯೋಗಮ್ಯಾಟನ್ನುತರುವಂತೆ ಸಂಘಟಕರುಕೋರಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...