ಸೆ.8 ರಂದು ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

Source: sonews | By sub editor | Published on 7th September 2018, 11:39 PM | Coastal News | Don't Miss |

ಕಾರವಾರ  : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ , ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಹೊನ್ನಾವರ  ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 8 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾವರದ ಮಾರಥೋಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುವುದು..
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ದಿನಕರ ಕೆ.  ಶೆಟ್ಟಿ ಅದ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೋಗೇರ ಹಾಗೂ ಇನ್ನಿತರ ಗಣ್ಯ ವ್ಕ್ಯಕ್ತಿಗಳು ಭಾಗವಹಿಸಲಿದ್ದಾರೆ.

Read These Next