ಮ0ಗಳೂರು:ಜೂನ್ 23: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿ ಸನ್ಮಾನ

Source: so news | By MV Bhatkal | Published on 19th June 2018, 9:19 PM | Coastal News |

ಮ0ಗಳೂರು :- ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಿದೆ. ಪ್ರಥಮ ಚಾವಡಿ ಸನ್ಮಾನ ಜೂನ್ 23 ರಂದು ನಡೆಯಲಿದ್ದು ತುಳು ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದ ಮೇರು ಕಲಾವಿದ ಶ್ರೀ ಲಕ್ಷ್ಮಣ ಕುಮಾರ್ ಮಲ್ಲೂರುರವರನ್ನು ಸನ್ಮಾನಿಸಲಾಗುವುದು. 
ಕಳೆದ 4 ದಶಕಗಳಿಂದ ತುಳುರಂಗಭೂಮಿಯಲ್ಲಿ ನಟರಾಗಿ, ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಇವರು ಹಲವಾರು ತುಳು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ನಾಟಕ ಕಲಾವಿದರ ಒಕ್ಕೂಟದ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಇವರು ತುಳುರಂಗಭೂಮಿ ಚಲನಚಿತ್ರ ಕ್ಷೇತ್ರದಲ್ಲಿ ಹಲವಾರು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಉತ್ತಮವಾದ ವಾಗ್ಮಿಯಾಗಿಯೂ ಗುರುತಿಸಿದ್ದಾರೆ. ಚಾವಡಿ ಸನ್ಮಾನ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ಅಧ್ಯಕ್ಷತೆವಹಿಸಲಿದ್ದು ಖ್ಯಾತ ತುಳು ಚಲನಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಲ್‍ಬೈಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 
ಸಾರ್ವಜನಿಕರು ಹಾಗೂ ರಂಗಕಲಾವಿದರು ಈ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಇವರ ಪ್ರಕಟಣೆ ತಿಳಿಸಿದೆ.

 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...