ಕಲ್ಬುರ್ಗಿ ಹತ್ಯೆ ತನಿಖೆ ಎಸ್‌ಐಟಿ ಹೆಗಲಿಗೆ

Source: so news | By Manju Naik | Published on 16th June 2018, 6:01 PM | State News | Don't Miss |

ಬೆಂಗಳೂರು-ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಖ್ಯಾತ ಸಂಶೋಧಕ ಎಂಎಂ ಕಲ್ಬುರ್ಗಿ ಹತ್ಯೆಯ ಪ್ರಕರಣವನ್ನು ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಗೌರಿ ಹತ್ಯೆ ಪ್ರಕರಣದ ತನಿಖೆಯು ಪೂರ್ಣಗೊಂಡು ಆರೋಪಪಟ್ಟಿ ಸಲ್ಲಿಸಿದ ನಂತರ ಎಂಎಂ ಕಲ್ಬುರ್ಗಿ ಹತ್ಯೆಯ ಪ್ರಕರಣವನ್ನು ವಹಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ಸಂಬಂಧ ಒಂದೆರಡು ವಾರಗಳಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿವೆ.
ಎಂಎಂ ಕಲ್ಬುರ್ಗಿ ಹತ್ಯೆಯ ನಡೆದು ವರ್ಷಗಳೆ ಕಳೆದಿರುವುದರಿಂದ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವುದು ಸಾಧ್ಯವಾಗಲಿದೆಯೇ ಇಲ್ಲವೇ ಎನ್ನುವುದರ ಪರಾಮರ್ಶೆ ನಡೆಸಲಾಗುತ್ತಿದೆ ಅಲ್ಲದೇ ಗೌರಿ ಹತ್ಯೆ ಪತ್ತೆಗೆ ರಚಿಸಲಾಗಿದ್ದ ಎಸ್‌ಐಟಿ ತಂಡದ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಗೃಹ ಇಲಾಖೆ ಮುಂದಾಗಿದೆ
ಈ ನಡುವೆ ಗೌರಿ ಹತ್ಯೆಯಂತೆ ಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣವನ್ನು ಭೇದಿಸುವುದು ಕಷ್ಟಕರ ಏಕೆಂದರೆ ಮೂರು ವರ್ಷಗಳ ಹಿಂದೆ ನಡೆದಿರುವ ಎಂಎಂ ಕಲ್ಬುರ್ಗಿ ಹತ್ಯೆಯ ಸಂಬಂಧ ಆ ಪ್ರದೇಶದ ದೂರವಾಣಿ ಕರೆಗಳನ್ನು ಪರಿಶೀಲನೆ ನಡೆಸುವುದು ಆಸಾಧ್ಯ ಗೌರಿ ಹತ್ಯೆಯ ಸಂಬಂಧ ಕೇವಲ ೫ ತಿಂಗಳಲ್ಲಿ ೧.೫ ಕೋಟಿಗೆ ಹೆಚ್ಚು ಕರೆಗಳ ವಿವರಗಳನ್ನು ದಾಖಲಿಸಿದ್ದೇವೆ ಎಂದು ಎಸ್‌ಐಟಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಗೌರಿ ಹತ್ಯೆಗೆ ಬಳಸಿದ ಮಾಧರಿಯ ಪಿಸ್ತೂಲನ್ನು ಎಂಎಂ ಕಲ್ಬುರ್ಗಿ ಹತ್ಯೆಗೂ ಬಳಸಿದ್ದಾರೆ ಎನ್ನುವ ಮಾಹಿತಿ ಇದ್ದರೂ ಅದನ್ನು ಆಧರಿಸಿ ಹಂತಕರನ್ನು ಪತ್ತೆಹಚ್ಚುವುದು ಆಸಾಧ್ಯ ಇದಲ್ಲದೇ ಗೌರಿ ಹತ್ಯೆ ಸಂಬಂಧ ಬಂಧಿತರಾಗಿರುವ ಪರಶುರಾಮ್ ವಾಘ್ಮೋರೆ ಅಮೋಲ್ ಕಾಳೆ ಸೇರಿದಂತೆ ಐವರು ನಮಗೆ ಎಂಎಂ ಕಲ್ಬುರ್ಗಿಯ ಹತ್ಯೆ ಸಂಬಂಧ ಯಾವುದೇ ಮಾಹಿತಿ ನೀಡಿಲ್ಲ ವಿಚಾರಣೆಯಲ್ಲಿ ಅವರ ಕೈವಾಡವಿಲ್ಲದಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.
ಗೌರಿ ಹತ್ಯೆಯ ನಂತ ವಿಚಾರವಾದಿ ಕೆ,ಎಸ್ ಭಗವಾನ್ ಕೊಲೆಗೆ ಬಂಧಿತ ಆರೋಪಿಗಳು ಸಂಚು ರೂಪಿಸಿದ್ದರು ಇವರ ಹಿಟ್‌ಲಿಸ್ಟ್‌ನಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಕೂಡಾ ಇರುವುದು ತನಿಖೆಯಲ್ಲಿ ಕಂಡುಬಂದಿದೆ ಆರೋಪಿಗಳು ಹಿಂದೂ ವಿರೋಧಿಗಳನ್ನು ಹತ್ಯೆಗೈಯುವುದನ್ನು ಗುರಿಯಾಗಿಸಿಕೊಂಡಿದ್ದರು ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

Read These Next

ಜಲಶಕ್ತಿ ಅಭಿಯಾನವನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿ -ಜೆ.ಮಂಜುನಾಥ್

ಇಂದು ಕೋಲಾರ ತಾಲ್ಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ...

ಜಿಲ್ಲಾಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್  ಖಜಾಂಚಿಯಾಗಿ ವಿಜಯ್, ರಾಜ್ಯಪರಿಷತ್‍ಗೆ ಡಿ.ಸುರೇಶ್‍ಬಾಬು ಆಯ್ಕೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್ ಹಾಗೂ ಖಜಾಂಚಿಯಾಗಿ ಕೆ.ವಿಜಯ್, ರಾಜ್ಯಪರಿಷತ್ ಸದಸ್ಯರಾಗಿ ...

ಮೋದಿ ಸರ್ಕಾರ ಅವಧಿಯಲ್ಲಿ ’ಬೀಫ್’ ರಪ್ತು ಪ್ರಮಾಣದಲ್ಲಿ ಗರಿಷ್ಠ ಏರಿಕೆ; 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ಬೀಫ್ ರಫ್ತು

2014ರಲ್ಲಿ ಮೋದಿ ಸರಕಾರ ಅಧಿಕಾರ ವಹಿಸಿದಂದಿನಿಂದ ಎಮ್ಮೆ ಮಾಂಸದ ರಫ್ತು ಗಣನೀಯಾಗಿ ಹೆಚ್ಚಾಗಿದೆ. 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ...