ಭಟ್ಕಳ ಕಸಾಪ ಆಶ್ರಯದಲ್ಲಿ ರಸಪ್ರಶ್ನೆ ಸ್ಪರ್ಧೆ

Source: S O News service | By V. D. Bhatkal | Published on 1st September 2018, 8:52 PM | Coastal News |

ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಆನಂದಾಶ್ರಮ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಕನ್ನಡ ಸಾಡು ನುಡಿ ಸಾಹಿತ್ಯ ಸಂಸ್ಕøತಿಗೆ ಸಂಬಂಧಿಸಿದ ಥಟ್ ಅಂತ ಹೇಳಿ ರಸಪ್ರಶ್ನೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. 

ಕಾರ್ಯಕ್ರಮವನ್ನು ಉದ್ಘಾಟಿಸಿದ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್.ನರಸಿಂಹ ಮೂರ್ತಿ ಮಾತನಾಡಿ, ಮಕ್ಕಳನ್ನು ನಾಡು ನುಡಿ ಸಾಹಿತ್ಯದೆಡೆಗೆ ಸೆಳೆಯಲು ವ್ಯವಸ್ಥಿತವಾಗಿ ಆಯೋಜಿಸಿರುವ ಕಾರ್ಯಕ್ರಮವು ಅಭಿನಂದನಾರ್ಹ ಎಂದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ ಮುಖ್ಯ ಅತಿಥಿಗಳಾಗಿ, ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಆನಂದಾಶ್ರಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಸರಿತಾ ಥೋರಸ್, ಆನಂದಾಶ್ರಮ ಕಾನ್ವೆಂಟ್‍ನ ಸುಪೀರಿಯರ್ ಸಿಸ್ಟರ್ ಆರೋಗ್ಯಮ್ಮ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಎಮ್.ಪಿ.ಭಂಡಾರಿ ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಪ್ರೌಢಶಾಲೆಗಳ ಹನ್ನೊಂದು ತಂಡಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಶ್ರೀವಲಿ ಪ್ರೌಢಶಾಲೆ ಚಿತ್ರಾಪುರ ಪ್ರಥಮ, ಜನತಾ ವಿದ್ಯಾಲಯ ಮುರ್ಡೇಶ್ವರ ದ್ವಿತೀಯ, ಜನತಾ ವಿದ್ಯಾಲಯ ಶಿರಾಲಿ ಹಾಗೂ ಆನಂದಾಶ್ರಮ ಪ್ರೌಢಶಾಲೆ ವಿದ್ಯಾರ್ಥಿಗಳು ತೃತೀಯ ಬಹುಮಾನ ಪಡೆದುಕೊಂಡರು. ಭಾಗವಹಿಸಿದ ಎಲ್ಲ ಶಾಲೆಯ ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು. ಶಬ್ದ ಬಂಢಾರ, ನುಡಿಗಟ್ಟುಗಳು, ಗಾದೆಯ ಮಾತುಗಳು, ಕನ್ನಡ ನಾಡಿನ ಸಾಧಕರು, ಪದಬಂಧ, ಸಾಹಿತಿಗಳು ಹಾಗೂ ಕನ್ನಡದ ಕೃತಿಗಳ ಕುರಿತಾದ ಪ್ರಶ್ನೆಗಳನ್ನು ಎಂಟು ಸುತ್ತುಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಪ್ರೊಜೆಕ್ಟರ್ ಮೂಲಕ ಆನಂದಾಶ್ರಮ ಪ್ರೌಢಶಾಲೆಯ ಶಿಕ್ಷಕ ಹಾಗೂ ಕಸಾಪ ಸಂಘಟನಾ ಸಮಿತಿ ಸದಸ್ಯ ಪೆಟ್ರಿಕ್ ಟೆಲ್ಲಿಸ್ ನಿರೂಪಿಸಿದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಎಮ್.ಪಿ.ಬಂಢಾರಿ ಸ್ವಾಗತಿಸಿದರು. 

Read These Next