ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಖ್ಯಾತ ಸಾಹಿತಿ ಕೋ.ಚೆನ್ನಬಸ್ಸಪ್ಪನವರು ಇನ್ನಿಲ್ಲ

Source: sonews | By Staff Correspondent | Published on 23rd February 2019, 6:10 PM | State News | Don't Miss |

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ನ್ಯಾಯಾಧಿಶ, ಕನ್ನಡದ ಖ್ಯಾತ ಸಾಹಿತಿ, ಚಿಂತಕ, ಕನ್ನಡದ ಸಾಕ್ಷಿ ಪ್ರಜ್ಞೆ ಎಂದೇ ನಾಡು ಗುರುತಿಸುವ  ಕೋ. ಚೆನ್ನಬಸಪ್ಪನವರು ಶನಿವಾರ ಬೆಳಗ್ಗೆ 7:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. 

ನ್ಯಾಯವಾದಿಯಾಗಿ ವೃತ್ತಿಜೀವನ ಪ್ರಾರಂಭಿಸಿ ನ್ಯಾಯಾಧೀಶರಾಗಿ ನಿವೃತ್ತರಾದ ಕೋಚೆ ಎಂದೇ ಖ್ಯಾತರಾದ ಕೋಟೆ ಚೆನ್ನಬಸಪ್ಪ ಅವರು ಕನ್ನಡದ ಮಹತ್ವದ ಸಾಹಿತಿ, ಲೇಖಕ ಹಾಗೂ ಚಿಂತಕರಲ್ಲಿ ಒಬ್ಬರು. 

ಸ್ವಾತಂತ್ರ್ಯ ಮತ್ತು ಏಕೀಕರಣ ಹೋರಾಟಗಾರರಾಗಿದ್ದ ಕೋಚೆ ಅವರು ಎಂಯತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಸ್ವಾತಂತ್ರ್ಯ ಮಹೋತ್ಸವ, ಪ್ರಾಣಪಕ್ಷಿ, ಜೀವತೀರ್ಥ ಮುಂತಾದ ಕವನ ಸಂಕಲನಗಳು; ಗಡಿಪಾರು, ನಮ್ಮೂರ ದೀಪ, ಗಾಯಕನಿಲ್ಲದ ಸಂಗೀತ ಮುಂತಾದ  ಕಥಾ ಸಂಕಲನಗಳು; ಹಿಂದಿರುಗಿ ಬರಲಿಲ್ಲ, ನೊಗದ ನೇಣು, ರಕ್ತತರ್ಪಣ, ಬೇಡಿ ಕಳಚಿತು-ದೇಶ ಒಡೆಯಿತು ಮೊದಲಾದ  ಕಾದಂಬರಿಗಳು; ಶ್ರೀ ಅರವಿಂದರು, ಶ್ರೀ ಮಾತಾಜಿ, ಶ್ರೀ ಮೃತ್ಯುಂಜಯಸ್ವಾಮಿಗಳು ಮೊದಲಾದ  ಜೀವನಚರಿತ್ರೆಗಳು; ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ದೃಢಪ್ರತಿಜ್ಞೆ, ಕುವೆಂಪು ವೈಚಾರಿಕತೆ ಮೊದಲಾದ ವಿಮರ್ಶಾ ಗ್ರಂಥಗಳು;  ರಕ್ಷಾಶತಕಂ, ಶ್ರೀ ಕುವೆಂಪು ಭಾಷಣಗಳು, ಬಿನ್ನವತ್ತಳೆಗಳು ಮುಂತಾದ ಸಂಪಾದಿತ ಕೃತಿಗಳು ಪ್ರಮುಖವಾಗಿವೆ.

ಚೆನ್ನಬಸಪ್ಪನವರ ’ದಾಸರಯ್ಯನ ಪಟ್ಟಿ’, ’ಹಿಂದಿರುಗಿ ಬರಲಿಲ್ಲ’, ’ಬೇಡಿಕಳಚಿತು ದೇಶ ಒಡೆಯಿತು’, ’ನ್ಯಾಯಾಧೀಶನ ನೆನಪುಗಳು’ ಮುಂತಾದ ಕೃತಿಗಳು ಸಾಮಾನ್ಯರಿಂದ ವಿದ್ವಾಂಸರೆಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ.

ಮೂಲತಃ ಬಳ್ಳಾರಿಯವರಾದ ಕೋ ಚೆನ್ನಬಸಪ್ಪನವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಉಗ್ರಾಣ ಪ್ರಶಸ್ತಿ, ಸ.ಸ.ಮಾಳವಾಡ ಪ್ರಶಸ್ತಿ, ಚಿಂತನಶ್ರೀ ಪ್ರಶಸ್ತಿ, ಸಂ.ಶಿ. ಭೂಸನೂರ ಮಠ ಪ್ರಶಸ್ತಿ, ಕನ್ನಡಶ್ರೀ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಸಂದಿವೆ.   ಬಿಜಾಪುರದಲ್ಲಿ ಜರುಗಿದ 79ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಗೌರವವನ್ನು ನೀಡುವುದರ ಮೂಲಕ ನಾಡು ಈ ಹಿರಿಯರನ್ನು ಗೌರವಿಸಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...