ಕರ್ನಾಟಕ ಲೋಕಸಭೆ, ವಿಧಾನಸಭೆಗೆ ನ.೩ರಂದು ಉಪಚುನಾವಣೆ ೬ಕ್ಕೆ ಫಲಿತಾಂಶ

Source: sonews | By Staff Correspondent | Published on 6th October 2018, 6:07 PM | State News | National News | Don't Miss |

ನವದೆಹಲಿ: ರಾಜ್ಯದಲ್ಲಿ  ವಿವಿಧ ಕಾರಣಗಳಿಗಾಗಿ  ತೆರವುಗೊಂಡಿದ್ದ  ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರ ಹಾಗೂ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಸಕಭಾ ಕ್ಷೇತ್ರಗಳಿಗೆ ನ.೩ರಂದು ಚುನಾವಣೆ ನಡೆಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ಶನಿವಾರ ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿನ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ಒಂದೇ ಹಂತದಲ್ಲಿ ನಡೆಯಲಿದ್ದ, ನ. ೬ ರಂದು ಫಲಿತಾಂಶ ಹೊರಬೀಳಲಿದೆ.

ಅ.16ರಂದು ನಾಮಪತ್ರ ಸಲ್ಲಿಕೆ ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ ಕ್ಷೇತ್ರಗಳಿಗೆ ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಅ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 17ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು. ಅ. 20ರಂದು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನವಾಗಿದೆ.
 

ಶಿವಮೊಗ್ಗ ಲೋಕಸಭೆ ಕ್ಷೇತ್ರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ 2009ರ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಸಂಸದರಾಗಿ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ರಾಜ್ಯ ರಾಜಕಾರಣಕ್ಕೆ ಮರಳಿದ ಅವರು, ಸ್ವಕ್ಷೇತ್ರವಾದ ಶಿಕಾರಿಪುರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ನ ಜಿ.ಬಿ. ಮಾಲತೇಶ್ ವಿರುದ್ಧ ಜಯಳಿಸಿದ್ದರು. ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಂಡ್ಯ ಲೋಕಸಭೆ ಕ್ಷೇತ್ರ : 2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು. ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ರಮ್ಯಾ ಸೋಲು ಅನುಭವಿಸಿದ್ದರು. ಆದರೆ, 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಬೆಂಬಲಿತ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಸೋಲಿಸಿದ್ದರು. ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
 

ಬಳ್ಳಾರಿ ಲೋಕಸಭೆ ಕ್ಷೇತ್ರ: ಬಳ್ಳಾರಿಯ ಸಂಸದರಾಗಿದ್ದ ಬಿ. ಶ್ರೀರಾಮುಲು, ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿದಿದ್ದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಯೋಗೇಶ್ ಬಾಬು ವಿರುದ್ಧ ಭರ್ಜರಿ ಜಯಗಳಿಸಿದ್ದರು. ಅವರ ರಾಜೀನಾಮೆಯಿಂದ ತೆರವಾಗಿರುವ ಬಳ್ಳಾರಿ ಲೋಕಸಭೆಗೆ ಉಪ ಚುನಾವಣೆ ನಡೆಯಬೇಕಿದೆ.

 

ರಾಮನಗರ ಚುನಾವಣೆ : ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳಿಂದಲೂ ಸ್ಪರ್ಧಿಸಿ ಗೆದ್ದಿದ್ದರು. ರಾಮನಗರದಲ್ಲಿ ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ ಅವರನ್ನು ಸೋಲಿಸಿದ್ದರೆ, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಅವರನ್ನು ಮಣಿಸಿದ್ದರು. ಬಳಿಕ ಅವರು ಸ್ವಕ್ಷೇತ್ರವಾದ ರಾಮನಗರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಜೆಡಿಎಸ್ ಪ್ರಾಬಲ್ಯ ಇರುವ ರಾಮನಗರದಲ್ಲಿ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.

ಜಮಖಂಡಿ ವಿಧಾನಸಭೆ : 
ಸಿದ್ದು ನ್ಯಾಮಗೌಡ ಅವರ ಅಕಾಲಿಕ ಮರಣದಿಂದ ತೆರವಾದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಯನ್ನು ಸಮೀಪದ ಮತಗಳಿಂದ ಸೋಲಿಸಿದ್ದ ಕಾಂಗ್ರೆಸ್‌ನ ಸಿದ್ದು ನ್ಯಾಮಗೌಡ, ಮೇ 28ರಂದು ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ 

ಛತ್ತೀಸ್ ಗಢದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೊದಲ ಹಂತ(18 ವಿಧಾನಸಭಾ ಕ್ಶಶೇತ್ರ) ನವೆಂಬರ್ 12(ಸೋಮವಾರ) ರಂದು ನಡೆಯಲಿದೆ, ಛತ್ತೀಸ್ ಗಢ ಎರಡನೇ ಹಂತ ನವೆಂಬರ್ 20(ಮಂಗಳವಾರ) ರಂದು ನಡೆಯಲಿದೆ.

ರಾಜಸ್ಥಾನ ಮತ್ತು ತೆಲಂಗಾಣಗಳಲ್ಲಿ ಒಂದೇ ಹಂತದ ಮತದಾನ ನಡೆಯಲಿದ್ದು ಡಿಸೆಂಬರ್ 7(ಶುಕ್ರವಾರ)ರಂದು ಚುನಾವಣೆ ನಡೆಯಲಿದೆ. ಎಲ್ಲಾ ರಾಜ್ಯಗಳ ಚುನಾವಣಾ ಫಲಿತಾಂಶವೂ ಡಿಸೆಂಬರ್ 11 ಮಂಗಳವಾರದಂದು ಹೊರಬೀಳಲಿದೆ. ಮಧ್ಯಪ್ರದೇಶ ಮತ್ತು ಮಿಜೋರಾಂಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ನವೆಂಬರ್ 28 ರಂದು ಮತದಾನ ನಡೆಯಲಿದೆ.
 

 

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...