ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ

Source: varthabhavan | By Arshad Koppa | Published on 25th September 2016, 9:07 PM | Coastal News |

ಕಾರವಾರ ಸೆಪ್ಟಂಬರ 24 : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಮತ್ತು ಗಿರಿಜನ ಉಪ ಯೋಜನೆಯಡಿ ಪ.ಪಂಗಡದ ಅಭ್ಯರ್ಥಿಗಳಿಗೆ 2016-17ನೇ ಸಾಲಿನಲ್ಲಿ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.


ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಹಾಗೂ ಗಮಕ ಕಲಾ ಪ್ರಕಾರಗಳಲ್ಲಿ ಅಭ್ಯಾಸ ಮಾಡುತ್ತಿರುವ 15ರಿಂದ 25 ವರ್ಷದ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.20ಸಾವಿರ ಶಿಷ್ಯ ವೇತನ ನೀಡಲಾಗುವುದು.


ಅರ್ಜಿಯನ್ನು ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಯಿಂದ ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 27ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಕಳುಹಿಸಬೇಕು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...