ಕಾರವಾರ:ಫೈರೋಜಾ ಬೇಗಂ ಶೇಖ್‍ ರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Source: so english | By Arshad Koppa | Published on 7th September 2017, 8:31 AM | Coastal News | Special Report |

ಕಾರವಾರ: ಸ.ಕಿ.ಪ್ರಾ.ಕನ್ನಡ ಶಾಲೆ ನಾಗಫೊಂಡ ನಂ-1 ಸದಾಶಿವಗಡ ಕಾರವಾರದ ಸಹ ಶಿಕ್ಷಕಿಯಾದ ಫೈರೋಜಾ ಬೇಗಂ ಶೇಖ್‍ರವರಿಗೆ 2017ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯು ಲಭಿಸಿದ್ದು, ಶಿಕ್ಷಕರ ದಿನಾಚರಣೆಯಂದು ಅಂಕೋಲಾದ ಸ್ವಾತಂತ್ರ್ಯಸಂಗ್ರಾಮ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಸತೀಶ ಸೈಲ್‍ರವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ವಿ.ಸಂಕನೂರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಕೆ.ಪ್ರಕಾಶ ಮತ್ತಿತರರು ಉಪಸ್ಥಿತರಿದ್ದರು. ಫೈರೋಜಾ ಬೇಗಂ ಶೇಖ್‍ರವರು ಸ.ಹಿ.ಪ್ರಾ.ಕ.ಶಾಲೆ ಬಾಳ್ನಿ ಯಲ್ಲಿ 4 ವರ್ಷ, ಸ.ಹಿ.ಪ್ರಾ.ಕ.ಸರ್ವೋದಯನಗರ ಶಾಲೆಯಲ್ಲಿ 14 ವರ್ಷ ಹಾಗೂ ಸದ್ಯ ಸದಾಶಿವಗಡದ ಸ.ಕಿ.ಪ್ರಾ.ಕ.ಶಾಲೆ ನಾಗಫೊಂಡ ನಂ-1 ಶಾಲೆಯಲ್ಲಿ ಕಳೆದ 5 ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಒಟ್ಟು 23 ವರ್ಷ ಸೇವೆಯನ್ನು ಸಂಪೂರ್ಣಗೊಳಿಸಿರುವ ಇವರು ಸಂಘ ಸಂಸ್ಥೆಗಳ ಸಹಕಾರದಿಂದ ಶಾಲೆಗೆ ಬೇರೆ ಬೇರೆ ವಸ್ತುಗಳನ್ನು ಕೊಡುಗೆಯಾಗಿ ಪಡೆದು ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಇವರು ಅನೇಕ ಕಾಲೇಜುಗಳಲ್ಲಿ ಎನ್.ಎಸ್.ಎಸ್.ಕ್ಯಾಂಪ್‍ಗಳಲ್ಲಿ ಬೇರೆ ಬೇರೆ ವಿಷಯಗಳ ಮೇಲೆ ಉಪನ್ಯಾಸಗಳನ್ನು ಸಹ ನೀಡಿರುತ್ತಾರೆ. ಶಿಕ್ಷಕರಿಗಾಗಿ ಏರ್ಪಡಿಸುವ ಸಹಪಠ್ಯ ಚಟುವಟಿಕೆಗಳಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರತಿವರ್ಷ ಭಾಗವಹಿಸಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬಹುಮಾನಗಳ್ನು ಪಡೆದಿರುತ್ತಾರೆ. ಜೊತೆಗೆ 12 ಸಲ ರಕ್ತದಾನ ಮಾಡಿ ದಾಖಲೆ ಮಾಡಿ ಸನ್ಮಾನಿಸಲ್ಪಟ್ಟಿರುತ್ತಾರೆ. ಇವರು 2011ರಲ್ಲಿ ಮಾಡಿದ ಭಾರತ ಜನಗಣತಿ ಕಾರ್ಯಕ್ಕೆ ಕೇಂದ್ರ ಸರಕಾರದಿಂದ ಬೆಳ್ಳಿ ಪದಕವೂ ಲಭಿಸಿರುತ್ತದೆ. ಶಾಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮ್ಕಕಳಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಸಹ ಮಾಡುತ್ತಿದ್ದಾರೆ.
  ಹೀಗೆ ಇವರು ಸೇವೆಯಲ್ಲಿ ಮಾಡಿರುವ ಸಾಧನೆಗೆ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರ ಸಾಧನೆಗೆ ಶಾಲೆಯ ಮುಖ್ಯಾಧ್ಯಾಪಕರಾದ ಕಲ್ಪನಾ ನಾಯ್ಕ ಹಾಗೂ ಎಸ್.ಎಸ್.ಡಿ.ಎಮ್.ಸಿ.ಅಧ್ಯಕ್ಷರು, ಸದಸ್ಯರು ಮತ್ತು ಪಾಲಕರು ಪ್ರಶಂಸೆಯನ್ನು ವ್ಯಕ್ತ ಪಡಿಸಿರುತ್ತಾರೆ.

Read These Next

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...