ದಲಿತರ ಬೇಡಿಕೆ ಈಡೇರಿಕೆಗೆ ಆಗ್ರಹ

Source: s o news | By MV Bhatkal | Published on 6th July 2018, 1:07 PM | Coastal News | Don't Miss |

ಕಾರವಾರ: ಭೂಹೀನ ದಲಿತ ಮತ್ತು ಆದಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಿಲ್ಲಾಡಳಿತದ ಮೂಲಕ ಗುರುವಾರ ಮನವಿ ಸಲ್ಲಿಸಿದರು.

‘ಭೂ ಹೀನರಿಗೆ ಭೂಮಿಯ ಹಕ್ಕು ಕೊಡುವ ಸರ್ಕಾರದ ಕಾರ್ಯಕ್ರಮಗಳು ವರ್ಷದಿಂದ ವರ್ಷಕ್ಕೆ ಕುಂಟುತ್ತಿದೆ. ಬಹುವರ್ಷಗಳಿಂದ ತುಂಡು ಭೂಮಿಗಳಲ್ಲಿ ಉಳುಮೆ ಮಾಡುತ್ತಿರುವವರು ಹಕ್ಕು ಪತ್ರಕ್ಕಾಗಿ ಒತ್ತಾಯಿಸುತ್ತಿದ್ದರೆ, ಆ ವೇಳೆಯಲ್ಲಿ ಭರವಸೆ ನೀಡುವ ಸರ್ಕಾರಗಳು ಅದನ್ನು ಅನುಷ್ಠಾನಗೊಳಿಸುತ್ತಿಲ್ಲ’ ಎಂದು ದೂರಿದರು.

‘ಈಗಿನ ಸರ್ಕಾರವಾದರೂ ಬಡವರಿಗೆ ಶಾಶ್ವತವಾದ ಭೂಮಿ ನೀಡಲು ಯೋಜನೆಯನ್ನು ತರಬೇಕು. ಜತೆಗೆ, ಶಾಶ್ವತ ಜೀವನ ಆಧಾರವಾಗಿರುವ ಭೂಮಿಯನ್ನು ಹಂಚುವ ಯೋಜನೆಯನ್ನು ಜಾರಿಗೆ ತರುವುದು ಸಾಮಾಜಿಕ ನ್ಯಾಯದ ಬದ್ಧತೆಯಾಗಿದೆ’ ಎಂದು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...