ಕಾರವಾರ:ವಿಜ್ಞಾನ ಮಾದರಿ ತಯಾರಿಕಾ ಶಿಬಿರ ಮುಕ್ತಾಯ

Source: so english | By Arshad Koppa | Published on 23rd May 2017, 3:44 PM | Coastal News | Special Report |

ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣ ಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಹಾಗೂ ವಿಜ್ಞಾನ ಕೇಂದ್ರದಲ್ಲಿ ಕಳೆದ 6 ದಿನಗಳಿಂದ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದ ಸಮಾರೋಪ ಕಾರ್ಯಕ್ರವನ್ನು 22.05.2017ರಂದು ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. 

ಸಮಿತಾ ಮತ್ತು ಸಂಗಡಿಗರು ನಾಡಗೀತೆ ಹಾಡಿದರು. ವಿಜ್ಞಾನ ಕೇಂದ್ರದ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ಧೇಶಕರು ಹಾಗೂ ಸರ್ವಶಿಕ್ಷಣ ಆಬಿಯಾನದ ಸಂಯೋಜಕರಾಗಿದ್ದ ಶ್ರೀ ಅನಿಲ ಪವಾರ ಅವರು ಆಗಮಿಸಿ ಜೀವವೈವಿಧ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಪರಿಸರವನ್ನು ಕಾಪಾಡುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು ಅದಕ್ಕೆ ಪಾಲಕರು ಸಹಕರಿಸಬೇಕು ಎಂದರು. 

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕೆ.ಡಿ.ನಾಯ್ಕ, ವಲಯ ಅರಣ್ಯಾಧಿಕಾರಿ, ಕಾರವಾರ ಇವರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಪ್ರತಿಯೊಂದು ವಿದ್ಯಾರ್ಥಿಯು ತಮ್ಮ ಮನೆಯ ಅಥವಾ ಶಾಲಾ ಆವರಣದಲ್ಲಿ ಒಂದು ಗಿಡ ನೆಟ್ಟು ಪರಿಸರದ ರಕ್ಷಣೆಯಲ್ಲಿ ಕೈಜೋಡಿಸಬೇಕು ಎಂದರು. ಇದಕ್ಕೆ ಅರಣ್ಯ ಇಲಾಖೆ ಸಂಪೂರ್ಣ ಸಹಯೋಗ ನೀಡುತ್ತದೆ. ಗಿಡಗಳನ್ನು ಉಚಿತವಾಗಿ ನೀಡುತ್ತದೆ ಎಂದರು. ಇನ್ನೊಬ್ಬ ಮುಖ್ಯ ಅತಿಥಿಗಳಾದ ಶ್ರೀ ಪಿ. ಹೆಚ್. ಪೇಲಣ್ಣವರ, ವಲಯ ಅರಣ್ಯಾಧಿಕಾರಿ ಗೊಪಶಿಟ್ಟಾ ಇವರು ಮಾತನಾಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಧೈರ್ಯದಿಂದ ಮುನ್ನಡೆಯಬೇಕು ಎಂದರು. ಅವರು ಶಿಬಿರಾರ್ಥಿಗಳ ಕಾರ್ಯಕ್ರಮದ ನಿರ್ವಹಣೆಗೆ ಸಂತೋಷ ವ್ಯಕ್ತಪಡಿಸಿದರು. 
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎನ್. ಜಿ. ನಾಯಕ, ನಿವೃತ್ತ ಹಿರಿಯ ಮ್ಯಾನೇಜರ್, ಕೆನರಾ ಬ್ಯಾಂಕ್ ಇವರು ವಿದ್ಯಾರ್ಥಿಗಳ ಜೊತೆ ಕಳೆದ ಆರು ದಿನಗಳ ಶಿಬಿರದ ಅನಿಸಿಕೆಯನ್ನು ತಿಳಿಸಿದರು.

ಜಿಲ್ಲಾ ವಿಜ್ಞಾನ ಕೇಂದ್ರದ ಗೌರವ ಕಾರ್ಯದರ್ಶಿಗಳಾದ ವಿ.ಎನ್.ನಾಯಕ ಅವರು ಪ್ರಾಸ್ತಾವಿಕ ಮಾತನಾಡುತ್ತ ಪೋಷಕರು ವಿದ್ಯಾರ್ಥಿಗಳಿಗೆ ಅವರ ಇಷ್ಟದ ವಿಷಯಗಳನ್ನು ಆಯ್ಕೆ ಮಾಡುವಲ್ಲಿ ಸಹಕರಿಸಬೇಕೆ ಹೊರತು ಅವರಿಗೆ ಯಾವುದರಲ್ಲೂ ಬಲವಂತ ಮಾಡಬಾರದು ಎಂದರು. ಪ್ರತಿಯೊಂದು ವಿದ್ಯಾರ್ಥಿಯಲ್ಲೂ ವಿಜ್ಞಾನಿಯಾಗುವ ಪ್ರತಿಭೆ ಇದ್ದು ಅದಕ್ಕೆ ಪೋಷಕರು ಶಿಕ್ಷಕರು ಸಹಕರಿಸಬೇಕು ಎಂದರು. ಹಿರಿಯ ಸದಸ್ಯರಾದ ಅನಂತ ರಾಯಕರ ಉಪಸ್ಥಿತರಿದ್ದರು. 
ಈ ಕಾರ್ಯಕ್ರಮವನ್ನು ಶಿಬಿರಾರ್ಥಿಗಳೇ ನಡೆಸಿಕೊಟ್ಟರು. ಶ್ರೇಯಸ್ ನಾಯಕ 6 ದಿನಗಳ ಶಿಬಿರದ ವರದಿಯನ್ನು ಓದಿದರು. ಸುರಜ ಕಾಮತ ಮತ್ತು ಬಿ.ಎನ್.ನಮಿತಾ ಅವರು ಜೀವವೈವಿಧ್ಯದ ಬಗ್ಗೆ ಭಾಷಣ ಮಾಡಿದರು. ಸಿಂಧು ನಾಯ್ಕ ಎಲ್ಲರನ್ನು ಸ್ವಾಗತಿಸಿದರು.  ಸಹನಾ ನಾಯ್ಕ ಎಲ್ಲರನ್ನು ವಂದಿಸಿದರು. ಪೂಜಾ ಗಾಂವಕರ ಮತ್ತು ಆರ್ಯಾ ಭಕ್ತಾ ಕಾರ್ಯಕ್ರಮ ನಿರ್ವಹಿಸಿದರು. 
ಜೀವವೈವಿಧ್ಯ ದಿನಾಚರಣೆಯ ಪ್ರಯುಕ್ತ ಹಮ್ಮಕೊಂಡ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಪ್ರಥಮ ಬಹುಮಾನ - ಸುಪ್ರೀಯಾ ತೆಂಡುಲಕರ, ಸೆಂಟ್ ಜೋಸೆಪ್ಸ್ ಸ್ಕೂಲ್, ಕಾರವಾರ
ದ್ವಿತೀಯ ಬಹುಮಾನ – ಅನ್ಯನ ಡಿ. ನಾಯ್ಕ ಬಾಲಮಂದಿರ ಪ್ರೌಢಶಾಲೆ, ಕಾರವಾರ
ತೃತಿಯ ಬಹುಮಾನ – ರಾಜ ಎಸ್. ತಳೆಕರ್, ಸೆಂಟ್ ಮೈಕಲ್ಸ್ ಕಾನ್ವೆಂಟ್ ಹೈಸ್ಕೂಲ್ 
ಸಮಾಧಾನಕರ ಬಹುಮಾನ – ಮೊಹಿತ್ ನಾಗೇಕರ್ ಸೆಂಟ್ ಜೋಸೆಪ್ಸ್ ಸ್ಕೂಲ್, ಕಾರವಾರ
ಈ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು, ಪಾಲಕರು, ವಿಜ್ಞಾನ ಕೇಂದ್ರದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು, ಶಿಕ್ಷಕರು, ಪತ್ರಿಕಾ ಬಾಂಧವರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...