ಕಾರವಾರ: ಪ್ಲಾಸ್ಟಿಕ್ ಧ್ವಜ ನಿಷೇಧಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

Source: varthabhavan | By Arshad Koppa | Published on 10th August 2017, 8:32 AM | Coastal News | Guest Editorial |

ಕಾರವಾರ, ಆ ೧೦: ಆಗಷ್ಟ್ 15 ರ ನಿಮಿತ್ತ ಪ್ಲಾಸ್ಟಿಕ್ ರಾಷ್ಟ್ರಧ್ವಜದ ಮಾರಾಟ ಮತ್ತು ಬಳಕೆ ಮಾಡುವವರ ವಿರುದ್ಧ ಕ್ರಮ ಜರುಗಿಸುವುದು ಮತ್ತು ರಾಷ್ಟ್ರಧ್ವಜದ ಗೌರವ ಕಾಪಾಡುವುದರ ಬಗ್ಗೆ ಕಾರವಾರದಲ್ಲಿ ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಲಾಯಿತು.


ಭಾರತದ ಸ್ವಾತಂತ್ರ್ಯದಿನದಂದು ಎಲ್ಲಾ ಕಡೆ ಧ್ವಜವಂದನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆದರೆ ಅದೇ ದಿನ ಮಧ್ಯಾಹ್ನದಿಂದಲೇ ಮಾರ್ಗಗಳಲ್ಲಿ ಮತ್ತು ಚರಂಡಿಗಳಲ್ಲಿ ಕಾಗದದ ಅಥವಾ ಪ್ಲಾಸ್ಟಿಕಿನ ರಾಷ್ಟ್ರಧ್ವಜಗಳು ಅದೇ ದಿನ  ಛಿದ್ರಛಿದ್ರವಾಗಿ ಬಿದ್ದಿರುತ್ತವೆ. ಅದಲ್ಲದೇ ಪ್ಲಾಸ್ಟಿಕ್ ತಕ್ಷಣ ನಾಶವಾಗದ ಕಾರಣ ಬಹಳ ದಿನಗಳ ತನಕ ರಾಷ್ಟ್ರಧ್ವಜದ ಅವಮಾನವನ್ನು ಕಾಣಬೇಕಾಗುತ್ತದೆ. 
ಹಿಂದೂ ಜನಜಾಗೃತಿ ಸಮಿತಿಯು ಕಳೆದ 15 ವರ್ಷಗಳಿಂದ ರಾಷ್ಟ್ರಧ್ವಜದ ಗೌರವ ಕಾಪಾಡುವ ಅಭಿಯಾನವನ್ನು ಮಾಡುತ್ತಿದೆ. ಈ ಅಭಿಯಾನದ ಮಾಧ್ಯಮದಿಂದ ರಸ್ತೆಬದಿ ಬಿದ್ದಿರುವ ರಾಷ್ಟ್ರಧ್ವಜಗಳನ್ನು ಸಂಗ್ರಹಿಸುವುದು, ಪ್ಲಾಸ್ಟಿಕ್ ಧ್ವಜದ ಬಳಕೆ ಮಾಡದಂತೆ ಸಮಾಜ ಮತ್ತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವುದು, ಸರಕಾರಕ್ಕೆ ಈ ಬಗ್ಗೆ ಮನವಿಪತ್ರ ನೀಡುವುದು, ಕರಪತ್ರ ವಿತರಿಸುವುದು ಮುಂತಾದ ರೀತಿಯಲ್ಲಿ ಅಭಿಯಾನವನ್ನು  ನಡೆಸುತ್ತಿದೆ.
ಕೇಂದ್ರೀಯ ಗೃಹಮಂತ್ರಾಲಯದ ಆದೇಶದಂತೆ ರಾಷ್ಟ್ರಧ್ವಜ ಮತ್ತು ಬಿಲ್ಲೆಗಳಿಗಾಗಿ ಪ್ಲಾಸ್ಟಿಕ್ ಉಪಯೋಗಿಸಬಾರದು ಎಂಬ ನಿಯಮವಿದೆ,  ಈ ನಿರ್ಣಯವನ್ನು ಯೋಗ್ಯ ರೀತಿಯಲ್ಲಿ ಕಾರ್ಯರೂಪಕ್ಕೆ ತರುವ ಅವಶ್ಯಕತೆಯಿದೆ. ಭಾರತೀಯ ಸಂವಿಧಾನದಲ್ಲಿನ ಕಲಮ್ 51(ಅ) ಇದಕ್ಕನುಸಾರ ರಾಷ್ಟ್ರಧ್ವಜದ ಗೌರವ ಕಾಪಾಡುವುದು ನಾಗರಿಕರ ಹಾಗೂ ಸರಕಾರದ ಮೂಲಭೂತ ಕರ್ತವ್ಯಗಳಾಗಿವೆ. ರಾಷ್ಟ್ರಧ್ವಜದ ಅವಮಾನ, ರಾಷ್ಟ್ರೀಯ ಗೌರವದ ಪ್ರತೀಕಗಳ ದುರುಪಯೋಗವನ್ನು ತಡೆಯುವ ಕಾಯ್ದೆ 1950, ಕಲಮ್ 2 ಮತ್ತು 5 ಕ್ಕನುಸಾರ ಹಾಗೂ ರಾಷ್ಟ್ರಗೌರವ ಅವಮಾನ ನಿರ್ಬಂಧ ಅದಿನಿಯಮ 1971ರ ಕಲಂ 2 ಕ್ಕನುಸಾರ ಹಾಗೂ ಬೋಧಚಿಹ್ನೆ ಹಾಗೂ ಹೆಸರುಗಳನ್ನು (ಅಯೋಗ್ಯವಾಗಿ ಉಪಯೋಗಿಸಲು ನಿರ್ಬಂಧ) ಅದಿನಿಯಮ 1950 ಇತ್ಯಾದಿ ಈ ಮೂರು ಕಾಯಿದೆಗನುಸಾರ ಇದು ದಂಡನಾತ್ಮಕ ಅಪರಾಧವಾಗಿದೆ. 

ಹಾಗಾಗಿ ರಾಷ್ಟ್ರಧ್ವಜದ ಅವಮಾನವಾಗಬಾರದೆಂದು ಸರಕಾರವು ತೆಗೆದುಕೊಂಡ ನಿರ್ಣಯವನ್ನು ಕಾರ್ಯರೂಪಕ್ಕೆ ತರುವುದಕ್ಕಾಗಿ ಪ್ಲಾಸ್ಟಿಕಿನ ರಾಷ್ಟ್ರಧ್ವಜ, ಬಿಲ್ಲೆ, ಹಾಗೂ ಇತರ ವಸ್ತುಗಳನ್ನು ಉತ್ಪಾದನೆ ಮಾಡುವ ಉತ್ಪಾದಕರು ಹಾಗೂ ವಿತರಕರು ಮತ್ತು ಮಾರಾಟಗಾರರು ಒಂದು ವೇಳೆ ಈ ರೀತಿಯ ವಸ್ತುಗಳನ್ನು ವಿತರಣೆ ಅಥವಾ ಮಾರಾಟಕ್ಕೆ ಇಟ್ಟಲ್ಲಿ ಅವರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಬೇಕು. ಮಾತ್ರವಲ್ಲದೇ ಕಾಯಿದೆಯ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರ ವಿರುದ್ಧ ಕಾನೂನು  ಕಾರ್ಯಾಚರಣೆ ನಡೆಸಬೇಕೆಂದು ಸರಕಾರಕ್ಕೆ ಮನವಿಯನ್ನು ನೀಡುವುದರ ಜೊತೆಗೆ ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರವ್ಯಾಪಿ ಅಭಿಯಾನವನ್ನು ನಡೆಸುತ್ತಿದೆ. ಈ ಸಂದರ್ಭದಲ್ಲಿ ಬಾಬು ಅಂಬಿ, ಗಿರೀಶ ಕುಡಾಲಕರ, ನಾಗರಾಜ ಶೇಟ, ಹೀರೆಮಠ, ಜಗದೀಶ, ಅಶೋಕ ವೇರ್ಣೆಕರ, ಪ್ರಕಾಶ ಜನ್ನು, ಪ್ರಶಾಂತ, ಬಿ.ಜಿ.ಮೋಹನ, ರೋಶನ ಇತರರು ಉಪಸ್ಥಿತರಿದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...