ಕಾರವಾರ: ಪೊಲೀಸ್ ಹುತಾತ್ಮರ ದಿನದ ಆಚರಣೆ

Source: S.O. News Service | By MV Bhatkal | Published on 21st October 2018, 8:02 PM | Coastal News | Don't Miss |

ಕಾರವಾರ: ಲಡಾಕ್ ಗಡಿಯಲ್ಲಿ ಚೀನಿಯರ ಆಕ್ರಮಣದಿಂದ ಹುತಾತ್ಮರಾದ ಪೊಲೀಸರ ನೆನಪಿಗಾಗಿ ಕಾರವಾರದಲ್ಲಿ ಭಾನುವಾರ ಪೊಲೀಸ್ ಹುತಾತ್ಮ ದಿನವನ್ನು ಆಚರಿಸಲಾಯಿತು.
ಕೋಡಿಬಾಗದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹುತಾತ್ಮರ ಪುತ್ಥಳಿಗೆ ಪುಷ್ಪಗುಚ್ಛ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.


ಬಳಿಕ ಮಾತನಾಡಿದ ಅವರು, ಯೋಧರಂತೆ ಪೊಲೀಸರು ಸಾರ್ವಜನಿಕರ ಸೇವೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿ ಇಟ್ಟಿದ್ದಾರೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಪೊಲೀಸ್ ಇಲಾಖೆಯಲ್ಲಿ ನಮಗೆ ಬಂದಿರುವ ಮಾಹಿತಿಯಂತೆ ಶೇ 34ರಷ್ಟು ಹುದ್ದೆಗಳು ಖಾಲಿ ಇವೆ. ಹೀಗಾಗಿ ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ಯಾವುದಾದರು ಹವ್ಯಾಸಗಳನ್ನು ಬೆಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಸೇರಿದಂತೆ ಗಣ್ಯರು ಹುತಾತ್ಮರ ಪುತ್ಥಳಿಗಳಿಗೆ ಪುಷ್ಪಗುಚ್ಛ ಇರಿಸಿ ನಮನ ಸಲ್ಲಿಸಿದರು. ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯದಲ್ಲಿರುವಾಗ ಮರಣ ಹೊಂದಿದ 435 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಗೂ ಕರ್ತವ್ಯ ನಿರತರಾಗಿದ್ದ ವೇಳೆ ಹುತಾತ್ಮರಾದ ಜಿಲ್ಲೆಯ ಪೊಲೀಸ್ ಸಿಬ್ಬಂದಿಗೆ ಇದೇ ಸಂದರ್ಭದಲ್ಲಿ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಡಿಎಆರ್ ಸಿಬ್ಬಂದಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಕವಾಯತು ನಡೆಸುವುದರ ಮೂಲಕ ಮೃತರಿಗೆ ಗೌರವ ಸಲ್ಲಿಸಿದರು. ಮೃತ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...