ಕಾರವಾರ: ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ 

Source: varthabhavan | By Arshad Koppa | Published on 22nd September 2017, 3:17 PM | Coastal News |

ಕಾರವಾರ ಸೆಪ್ಟಂಬರ್ 21 : 2017-18 ನೇ ಸಾಲಿಗೆ "ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", ವಿದ್ಯಾಸಿರಿ-"ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclassess.kar.nic.in ಮತ್ತು ದೂರವಾಣಿ ಸಂಖ್ಯೆ:08382-226588 ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next