ಕಾರವಾರ:ವಸತಿ ನಿಲಯಗಳ ನಿರ್ವಹಣೆ ಸರಿಯಾಗಿ ನಿರ್ವಹಿಸಿ : ಜಯಶ್ರೀ ಮೋಗೇರ 

Source: varthabhavan | By Arshad Koppa | Published on 12th October 2017, 7:43 AM | Coastal News | Special Report |

ಕಾರವಾರ ಅಕ್ಟೋಬರ 11  : ಹೊನ್ನಾವರ ತಾಲೂಕು ಕಡತೋಕಾದ ಸರಕಾರಿ ವಿದ್ಯಾರ್ಥಿನಿಲಯದಲ್ಲಿ ಮೂಲಭೂತಗಳು ಸೌಕರ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲದೇ ಇರುವದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ   ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ತಿಳಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಅಲ್ಲದೇ ಜಿಲ್ಲೆಯ ಎಲ್ಲಾ ವಸತಿ ನಿಲಯಗಳಿಗೆ ಆಗಾಗ ಬೇಟಿ ನೀಡಿ ಮುಖ್ಯವಾಗಿ ವಿದ್ಯಾರ್ಥಿಗಳ ಆಹಾರ, ಸ್ನಾನಕ್ಕೆ ಬಿಸಿ ನೀರು, ಮತ್ತು ಇತರೆ ಸೌಕರ್ಯಗಳ ಬಗ್ಗೆ ವಿಚಾರಿಸಿ ಸೌಲಭ್ಯ ಒದಗಿಸುವ ಕಾರ್ಯ ನಿರ್ವಹಿಸಿ ಎಂದು ಅವರು ಹೇಳಿದರು.
ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಕೆ.ಡಿ.ಪಿ. ಸಭೆ ಮತ್ತು ಸಾಮಾನ್ಯ ಸಭೆಗೆ ನಿರಂತರವಾಗಿ ಗೈರಾಗಿದ್ದು ಗಂಭೀರವಾಗಿ ಪರಿಗಣಿಸಿ ನೋಟಿಸ್ ನೀಡಿದ್ದರೂ ಕೂಡಾ  ಪುನ: ಇಲಾಖೆಯ ಸಿಬ್ಬಂದಿಯನ್ನು ಈ ಸಭೆಗೆ ಕಳುಹಿಸಿದ್ದರಿಂದ ಸಂಬಂಧಿಸಿದ ಸಚಿವರ ಗಮನಕ್ಕೆ ತರಲಾಗುವದು   ಎಂದು ಸೂಚಿಸಿದರು.
ಹೊರಮೂಲ ಸಿಬ್ಬಂದಿಗೆ ಸೌಲಭ್ಯ ನೀಡಿ : ಹೆಚ್ಚಿನ ಇಲಾಖೆಗಳಲ್ಲಿ ವಿವಿಧ ಏಜನ್ಸಿಗಳ ಮೂಲಕ ಹೊರಮೂಲ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು ಅವರಿಗೆ ಸರಿಯಾಗಿ ಮಾಸಿಕ ವೇತನ, ಪಿ.ಎಫ್ ನೀಡದೆ ಏಜನ್ಸಿ ಮಾಲಿಕರು ಸತಾಯಿಸುತ್ತಾರೆಂಬ ಸಾಕಷ್ಟು ದೂರುಗಳು ಕೇಳಿ ಬಂದಿರುವದರಿಂದ  ಕಾರ್ಮಿಕ ಇಲಾಖೆ ವರದಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಲ್ ಚಂದ್ರಶೇಖರ ನಾಯಕ ತಿಳಿಸಿದರು.  
ವಿಶ್ವಾಸ ಕಿರಣ : ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಾರಿಯ ಮಧ್ಯಂತರ ಶೈಕ್ಷಣಿಕ ರಜೆಯಲ್ಲಿ 9 ಮತ್ತು 10ನೇ ತರಗತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕಲಿಕೆಯಲ್ಲಿ ತೀರ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ವಿಶ್ವಾಸ ಕಿರಣ ಎಂಬ ಕ್ರೀಯಾ ಯೋಜನೆಯನ್ನು ರೂಪಿಸಿದೆ. ಈ ಕ್ರಿಯಾ ಯೋಜನೆಯಲ್ಲಿ ಗಣಿತ, ಇಂಗ್ಲೀಷ, ಮತ್ತು ವಿಜ್ಞಾನ ವಿಷಯಗಳ ಕಲಿಕಾ ಪಾಠಗಳನ್ನು ಸಂಪನ್ಮೂಲ ಶಿಕ್ಷಕರಿಂದ ಕಲಿಸಲಾಗುತ್ತದೆ. ಪ್ರತಿ ತಾಲೂಕಿಗೆ 3 ಕೇಂದ್ರಗಳನ್ನು ತೆರೆಯಲಾಗಿದೆ. ಶಿರಸಿ ಮತ್ತು ಕಾರವಾರ ಶೈಕ್ಷಣಿಕ ಜಿಲ್ಲೆಗಳೆರಡರಲ್ಲೂ ಅಕ್ಟೋಬರ 11 ರಿಂದ 25 ರವರೆಗೆ ಪ್ರತಿ ದಿನ 3 ಗಂಟೆ ಮಕ್ಕಳಿಗೆ ಪಾಠಗಳನ್ನು ಭೋದಿಸಲಾಗುತ್ತದೆ ಎಂದು ಕಾರವಾರ ಡಿ.ಡಿ,ಪಿ. ಐ ಪ್ರಕಾಶ ತಿಳಿಸಿದರು.  ಮಾತೃಪೂರ್ಣ ಯೋಜನೆ : ಮಾತೃ ಪೂರ್ಣ ಯೋಜನೆಯು ಅಕ್ಟೋಬರ 2 ರಂದು ಉದ್ಘಾಟನೆಗೊಂಡಿದ್ದು, ಗರ್ಭಿಣಿ, ಬಾಣಂತಿಯರಿಗೆ ಊಟವನ್ನು ನೀಡಲಾಗುತ್ತಿದೆ. ಉಳಿದ ತಾಲೂಕುಗಳಿಗೆ ಹೊಲಿಸಿದಾಗ ಜೋಯಿಡಾ ಮತ್ತು ಹಳಿಯಾಳ ತಾಲೂಕುಗಳಲ್ಲಿ ಗರ್ಭಿಣಿಯರು ಊಟಕ್ಕೆ ಬರುತ್ತಿದ್ದಾರೆ. ಉಳಿದ ತಾಲೂಕುಗಳಲ್ಲಿ ಗರ್ಭಿಣಿ ಮತ್ತು ಭಾಣಂತಿಯರಿಗೆ ಯೋಜನೆಯ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. 
 ಅಕ್ಟೋಬರ 23 ನವ್ಹಂಬರ 5 ರವರೆಗೆ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನವನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿದೆ. ಮತ್ತು ಸಾಂಕ್ರಾಮಿಕ ರೋಗಗಳು ಹತೋಟಿಯಲ್ಲಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹೇಳಿದರು.
ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಸವರಾಜ ದೊಡ್ಮನಿ, ಲಕ್ಷಣ ತಿಪ್ಪಣ್ಣ ಪಾಟೀಲ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...