ಕಾರವಾರ: ವಿಶ್ವ ಕ್ಷಯರೋಗ ದಿನಾಚರಣೆ-ಆರೋಗ್ಯವೇ ಭಾಗ್ಯ : ಲಿಲಾಬಾಯಿ ರಾಣೇಕರ 

Source: varthabhavan | By Arshad Koppa | Published on 24th March 2017, 7:50 PM | State News |

ಕಾರವಾರ ಮಾರ್ಚ 24 : ಕ್ಷಯರೋಗವು ಒಂದು ಸಾಂಕ್ರಾಮಿಕ ಖಾಯಿಲೆಯಾಗಿರುವದರಿಂದ ಜನರು ಆರೋಗ್ಯದ ಬಗ್ಗೆ ಸದಾ ಜಾಗೃತರಾಗಿ ಕ್ಷಯರೋಗವನ್ನು ನಿರಂತರವಾಗಿ ನಿಯಂತ್ರಣಕ್ಕೆ ತಂದು ಆರೋಗ್ಯದ ಕಾಳಜಿ ತೆಗೆದುಕೊಳ್ಳಬೇಕು ಎಂದು ನಗರಸಭೆ ಉಪಾದ್ಯಕ್ಷೆ ಲಿಲಾಬಾಯಿ ರಾಣೆಕರ ಹೇಳಿದರು.
  ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕಟುಂ¨ ಕಲ್ಯಾಣ ಇಲಾಖೆ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ಕಿಮ್ಸ್, ಛತ್ರಪತಿ ಶಿವಾಜಿ ನರ್ಸಿಗ್ ವಿದ್ಯಾಲಯ, ಬಾಪೂಜಿ ನರ್ಸಿಂಗ್ ವಿದ್ಯಾಲಯ, ವಿಶ್ವದರ್ಶನ ನರ್ಸಿಂಗ್ ವಿದ್ಯಾಲಯ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ  ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  ಸಾರ್ವಜನಿಕರು ಕ್ಷಯರೋಗದ ಲಕ್ಷಣಗಳು ಕಂಡು ಬಂದ ತಕ್ಷಣ ವಿಳಂಬ ಮಾಡದೆ ವೈದ್ಯರಲ್ಲಿ ತೋರಿಸಿ ಕ್ಷಯ ರೋಗವನ್ನು ಆರಂಭ ಹಂತದಲ್ಲೆ ಕೊನೆಗೊಳಸಬೇಕು ಎಂದು ಅವರು ಹೇಳಿದರು. 
 ಡಾ.ಸುರೇಶ ಭಟ್ ಪ್ರಾಸ್ತಾವಿಕಾಗಿ ಮಾತನಾಡಿ ಕ್ಷಯ ರೋಗಿಗಳಲ್ಲಿ ತಮಗೆ ಕ್ಷಯ ರೋಗವಿದೆ ಎಂದು ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ, ಈ ಕಾಯಿಲೆಗೆ ಸಂಬಂಧಿಸಿದಂತೆ ಜನರ ಮನಸ್ಥಿತಿ ಬದಲಾಗಬೇಕಿದೆ. ಕ್ಷಯರೋಗದ ಪರೀಕ್ಷೆ ಹಾಗೂ ಚಿಕಿತ್ಸೆ ಮತ್ತು ಔಷದಗಳು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುತ್ತವೆ, ಪ್ರತಿಯೊಬ್ಬ ರೋಗಿಯು ಇದರ ಲಾಭ ಪಡೆದುಕೊಳ್ಳಬೇಕು. ಎಲ್ಲರೂ ಮನಸ್ಸು ಮಾಡಿದರೆ ಕ್ಷಯರೋಗ ನಿರ್ಮೂಲನೆ ಕಷ್ಟವೆನಲ್ಲ ಎಂದು ಹೇಳಿದರು. 


 ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಮಹಾಬಲೆಶ್ವರ ಹೆಗಡೆ ಮಾತನಾಡಿ ಕ್ಷಯರೋಗದ ಲಕ್ಷಣ, ಪತ್ತೆ, ಚಿಕಿತ್ಸೆ,  ಡೊಟ್ಸ ಚಿಕಿತೆ ವಿಧಾನ, ಹಾಗೂ ಕ್ಷಯರೋಗ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಕುರಿತು ಮಾಹಿತಿ ನೀಡಿದರು. 
 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ.ಎನ್.ಅಶೋಕಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾರ್ವಜನಿಕರಲ್ಲಿ ಕ್ಷಯರೋಗದ ಕುರಿತು ಜಾಗೃತಿ ಮೂಡಿರುವದಿಲ್ಲ. 2016 ರಲ್ಲಿ ಜಿಲ್ಲೆಯಲ್ಲಿ ಒಟ್ಟು 972 ಕ್ಷಯರೋಗದ ಪ್ರಕರಣಗಳು ಪತ್ತೆಯಾಗಿ 68 ಜನ ಕ್ಷಯರೋಗದಿಂದ ಮರಣ ಹೊಂದಿರುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಕ್ಷಯರೋಗದ ಬಗ್ಗೆ ತಿಳಿದುಕೊಂಡು ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದು ಕ್ಷಯರೋಗ ನಿರ್ಮೂಲನೆ ಮಾಡಬೇಕು ಎಂದು ಹೀಳಿದರು.
.ಜಾಗೃತಿ ಜಾಥಾ ಚಾಲನೆ : ಅಪರ ಜಿಲ್ಲಾಧಿಕಾರಿ ಹೆಚ್ ಪ್ರಸನ್ನ ಮತ್ತು ನಗರಸಭೆ ಅಧ್ಯಕ್ಷೆ ಲೀಲಾಬಾಯಿ ಠಾಣೇಕರ್ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. 
“ಎಲ್ಲರೂ ಒಟ್ಟಾಗಿ ಕ್ಷಯರೋಗವನ್ನು ಕೊನೆಗೊಳಿಸೋಣ” ಎಂಬ ಘೋಷಣೆಯೊಂದಿಗೆ ಜಾಥಾ ಮೆರವಣಿಗೆಯ ಜಿಲ್ಲಾದಿಕಾರಿಗಳ ಕಚೇರಿ ಆವರಣದಿಂದ ಹೊರಟು ನಗರದ ಪ್ರಮುಖ ಬೀದಿಗಳ ಮೂಲಕ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. 
 ಈ ಸಂದರ್ಭದಲ್ಲಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶೋಕ ಕುಮಾರ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...