ಹದಿಹರೆಯದವರು ಮಾದಕ ವ್ಯಸನಿಗಳಾಗದಂತೆ ತಡೆಯಲು ಮನೆಯ ಪರಿಸರ ಆರೋಗ್ಯಕರವಾಗಿರಬೇಕು : ಲಿಲಾಭಾಯಿ ಠಾಣೆಕರ

Source: sonews | By Staff Correspondent | Published on 6th July 2018, 5:51 PM | Coastal News | Don't Miss |

ಕಾರವಾರ; ಇತ್ತಿಚಿನ ದಿನಗಳಲ್ಲಿ ಹೆಣ್ಣು-ಗಂಡು ಎಂಬ ಬೇದವಿಲ್ಲದೇ 16 ರಿಂದ 20 ವರ್ಷ ವಯಸ್ಸಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವ ಹಿನ್ನಲೆಯಲ್ಲಿ, ಪಾಲಕರು ಕುಟುಂಬದಲ್ಲಿ ಸೌಹಾರ್ಧತೆ ಬೆಳೆಸಿ ಮನೆಯ ಪರಿಸರ ಆರೋಗ್ಯಕರವಾಗಿಟ್ಟುಕೊಳ್ಳಬೇಕು ಎಂದು ನಗರಸಭೆ ಉಪಾದ್ಯಕ್ಷೆ ಲಿಲಾಬಾಯಿ ಠಾಣೆಕರ ಹೇಳಿದರು.       

ಅವರು ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ “ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ” ನಿಮಿತ್ತ ಹಮ್ಮಿಕೊಳ್ಳಲಾದ ವಿಚಾರ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಹಾಗೂ ಹದಿಹರೆಯದವರಲ್ಲಿ ಮಾದಕದ್ರವ್ಯಗಳ ಸೇವನೆಯು ಹೆಚ್ಚಾಗುತ್ತಿದೆ. ಕುಟುಂಬ ಪ್ರೀತಿಯಿಂದ ವಂಚಿತರಾದವರೇ ಹೆಚ್ಚಾಗಿ ಡ್ರಗ್ಸ್ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಮನೆಯಲ್ಲಿ ಪ್ರೀತಿಯಿಂದ ವ್ಯವಹರಿಸುವದು ಹಾಗೂ ಅದರ ಜೊತೆಗೆ ಹಿರಿಯರ ಮಾರ್ಗದರ್ಶನ ದೊರೆತರೆ ಪರಿಪೂರ್ಣ ವ್ಯಕ್ತಿಗಳಾಗಿ ಮಕ್ಕಳು ರೂಪುಗೊಳ್ಳುತ್ತಾರೆ. ಇಲ್ಲದಿದ್ದರೆ ಮಾದಕದ್ರವ್ಯ ವ್ಯಸನಿಗಳ ಸಹವಾಸದಿಂದ ಇವರು ವ್ಯಸನಿಗಳಾಗುವ ಹಾಗೂ ಸಮಾಜ ವಿರೋಧಿ ಶಕ್ತಿಗಳ ಕಳ್ಳ ಸಾಗಾಣಿಕೆಯ ಜಾಲದಲ್ಲಿ ಸೇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಮನೆಯ ಪರಿಸರ ಆರೋಗ್ಯಕರವಾಗಿರಬೇಕು. ವಿದ್ಯಾರ್ಥಿಗಳು ಕೂಡಾ ತಂದೆ-ತಾಯಿಗಳ ಮಾತು ಕೇಳಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾರಿ ಬೆಳೆಯಬೇಕು ಎಂದರು.
  
ಜಿಲ್ಲಾ ಆರೋಗ್ಯ ಮತ್ತು ಕುಟುಂ ಕಲ್ಯಾಣ ಅಧಿಕಾರಿ ಡಾ.ಜಿ.ಎನ್.ಅಶೋಕ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ ವಿಶ್ವದ ಶಾಂತಿ, ನೆಮ್ಮದಿಗೆ ಮಾದಕದ್ರವ್ಯಗಳ ತಡೆ ಅಗತ್ಯವಾಗಿದೆ. ನಮ್ಮ ದೇಶದಲ್ಲಿ ಸುಮಾರು 8 ಕೋಟಿ ಜನ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ, ಇದರಲ್ಲಿ 6 ಕೋಟಿ ಜನ ಮದ್ಯ ವ್ಯಸಗಳಾಗಿದ್ದಾರೆ, 82 ಲಕ್ಷ ಜನ ಗಾಂಜಾ ವ್ಯಸನೀಗಳಾಗುತ್ತಿದ್ದಾರೆ. ಈ ನಿಟ್ಟನಲ್ಲಿ ಎಲ್ಲರೂ ಕೈ ಜೋಡಿಸಿ ಕೆಲಸ ಮಾಡುವುದು ಅತಿ ಅವಶ್ಯವಾಗಿದೆ. ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲೆ ಕಲ್ಪನಾ ಕೆರವಡಿಕರ ಮಾತನಾಡಿ ಮಾದಕ ವಸ್ತುಗಳ ಸೇವನೆ ಹಲವಾರು ಹೇಯ ಕೃತ್ಯಗಳಿಗೆ ಪ್ರೇರೆಪಿಸುತ್ತದೆ. ವ್ಯಸನಕ್ಕೆ ಒಳಗಾದ ವ್ಯಕ್ತಿಯನ್ನು ಕುಟುಂಬ, ಸಮಾಜ, ದೇಶಕ್ಕೆ ಮಾರಕನನ್ನಾಗಿ ಮಾಡುತ್ತದೆ. ಇದರ ಬಗ್ಗೆ ಕೇವಲ ಅರಿವು ಮೂಡಿಸುವುದಲ್ಲ. ಮಾದಕ ವಸ್ತುಗಳ ವಿರುದ್ದ ಹೋರಾಡಬೇಕು, ಇದರ ವಿರುದ್ದ ಜನರ ಚಳುವಳಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು. 

ವಿಚಾರ ಸಂಕೀರಣದಲ್ಲಿ ಡಾ.ಸರ್ವೇಶಕುಮಾರ ಹಳಕಟ್ಟಿ ಉಪನ್ಯಾಸ ನೀಡಿದರು. ಡಾ.ಪ್ತೀತಿ  ತಲ್ಲೂರ ಸ್ವಾಗತಿಸಿದರು, ಡಾ.ಶಂಕರರಾವ್ ವಂದನಾರ್ಪಣೆ ಸಲ್ಲಿಸಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...