ಹೊನ್ನಾವರ ತಾಲೂಕಿನಲ್ಲಿ 17 ಡೆಂಗಿ ಪ್ರಕರಣ ಪತ್ತೆ: ಡಾ.ರಮೇಶ್ ರಾವ್

Source: sonews | By Staff Correspondent | Published on 23rd June 2018, 8:43 PM | Coastal News | State News | Don't Miss |

ಕಾರವಾರ :ಹೊನ್ನಾವರ ತಾಲೂಕಿನ ಮಾಗೋಡು, ಹಾಮಕ್ಕಿ, ಚಿತ್ತಾರ ಗ್ರಾಮಗಳ ವ್ಯಾಪ್ತಿಯಲ್ಲಿ ಡೆಂಗಿ ರೋಗವು ಕಾಣಿಸಿಕೊಳ್ಳುತ್ತಿದ್ದು ಈವರೆಗೆ ಹೊನ್ನಾವರ ತಾಲೂಕಿನಲ್ಲಿ 17 ಖಚಿತ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ನಿಯಂತ್ರಾಣಾಧಿಕಾರಿ ಕ್ಯಾಪ್ಟನ್ ಡಾ.ರಮೇಶ್‍ರಾವ್ ತಿಳಿಸಿದ್ದಾರೆ.

ಈಗಾಗಲೇ ಆರೋಗ್ಯ ಇಲಾಖೆಯ ಎಲ್ಲ ಕ್ಷೇತ್ರ ಸಿಬ್ಬಂದಿಗಳು ಮನೆ ಮನೆ ಭೇಟಿ ಮಾಡಿ ಜ್ವರ ಸಮೀಕ್ಷೆ, ಈಡಿಸ್ ಲಾರ್ವ ಸಮೀಕ್ಷೆ ಹಾಗೂ ಅದನ್ನು ತಡೆಗಟ್ಟಲು ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿರುತ್ತಾರೆ ಎಂದು ಅವರು ತಿಳಿಸಿದರು.

ಪ್ರಕರಣಗಳು ಕಂಡು ಬರುತ್ತಿರುವ ಪ್ರದೇಶಗಳಲ್ಲಿ ಈಗಾಗಲೇ ಒಳಾಂಗಣ ಧೂಮೀಕರಣ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ಜ್ವರ ಕಂಡು ಬಂದಲ್ಲಿ ಕೂಡಲೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ ಈಗಾಗಲೇ ಡೆಂಗಿ ರೋಗ ಪ್ರಕರಣ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್‍ಗಳನ್ನು ಮಾಡಲಾಗಿದೆ ಹಾಗೂ ಔಷಧಗಳನ್ನು ಸರಬರಾಜು ಮಾಡಲಾಗಿದೆ ಎಂದು ಅವರು ಹೇಳಿದರು.

ಸಾರ್ವಜನಿಕರು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ ಈಡಿಸ್ ಲಾರ್ವ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು. ಅಲ್ಲದೆ, ಮನೆಯ ಸುತ್ತಮುತ್ತ ಅಡ್ಡಾಡುವಾಗ ಮೈತುಂಬಾ ಬಟ್ಟೆ ಹಾಕುವುದು, ಮಲಗುವಾಗ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು ಮುಂತಾದ ಕ್ರಮಗಳು ರೋಗ ನಿಯಂತ್ರಣಕ್ಕೆ ಸಹಕಾರಿಯಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ತಿಳಿಸಿದರು.
 
Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...