ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರ ಪರಿಷ್ಕøತ ಜಿಲ್ಲಾ ಪ್ರವಾಸ

Source: sonews | By Staff Correspondent | Published on 26th June 2018, 8:20 PM | Coastal News |

ಕಾರವಾರ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಕುಮಾರಿ ನಾಗಲಕ್ಷ್ಮಿ ಬಾಯಿ ಅವರು ಜುಲೈ 9 ಮತ್ತು 10 ರಂದು ಉ.ಕ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜುಲೃ 9 ರಂದು ಸಂಜೆ 5 ಗಂಟೆಗೆ ಕಾರವಾರ ಸರಕಾರಿ ಅತಿಥಿ ಗೃಹದಲ್ಲಿ ಮಹಿಳೆಯರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜು.10 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವರು. ಎಂದು ಅಧ್ಯಕ್ಷರ ಆಪ್ತ ಸಹಾಯಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆಯಿಂದ ಮಾಹಿತಿ 
ಕಾರವಾರ: ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಐಕ್ಯ ಎಂಬ ಸಂಸ್ಥೆಯು ಆಶಾ ಕಾರ್ಯಕರ್ತೆಯರ ಮೂಲಕ ಕಟ್ಟಡ ಕಾರ್ಮಿಕರಲ್ಲದವರನ್ನು ಸಹ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಾಯ್ದೆಯಡಿ ಕಟ್ಟಡ ಕಾರ್ಮಿಕರೆಂದು ನೋಂದಾಯಿಸುತ್ತಿರುವುದು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಗಮನಕ್ಕೆ ಬಂದಿರುತ್ತದೆ.
ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮದ್ಯವರ್ತಿಗಳು ಕೂಡಾ ನೋಂದಣಿ ಹಾಗೂ ನವಿಕರಣ ಶುಲ್ಕವನ್ನು ಕಾರ್ಮಿಕರಿಂದ ಹೆಚ್ಚಾಗಿ ಪಡೆದು ಅರ್ಜಿಗಳನ್ನು ಸರಿಯಾಗಿ ಕಾರ್ಮಿಕ ಇಲಾಖೆಗೆ ತಲುಪಿಸದ ಹಿನ್ನಲೆಯಲ್ಲಿ ಕಾರ್ಮಿಕರು ಇಲಾಖೆಯಿಂದಲೇ ಮಾಹಿತಿ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ದ್ವೀತಿಯ ಭಾಷೆ ಪರೀಕ್ಷೆಗೆ 65 ವಿದ್ಯಾರ್ಥಿಗಳು ಗೈರು
ಕಾರವಾರ: ಕಾರವಾರ ಶೈಕ್ಷಣಿಕ ಜಿಲ್ಲೆಯ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ  ಜೂನ್ 26 ಮಂಗಳವಾರದಂದು ನಡೆದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ದ್ವೀತಿಯ ಭಾಷೆ ವಿಷಯ ಪತ್ರಿಕೆಯ ಪರೀಕ್ಷೆಯು ಸುಗಮವಾಗಿ ನಡೆದಿದ್ದು, ಒಟ್ಟು 65 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಕಾರವಾರ 34 ಅಂಕೋಲಾದಲ್ಲಿ 9 ಕುಮಟಾದಲ್ಲಿ 12 ಹೊನ್ನಾವರದಲ್ಲಿ 4 ಹಾಗೂ ಭಟ್ಕಳದಲ್ಲಿ 6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.
 

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...