ಅನ್ನಭಾಗ್ಯ ಹೆಚ್ಚುವರಿ ಅಕ್ಕಿ ವಿತರಣೆ ಯೋಜನೆಗೆ ಸಚಿವರಿಂದ ಚಾಲನೆ

Source: S O News service | By Staff Correspondent | Published on 17th April 2017, 6:28 PM | Coastal News | State News | Don't Miss |

ಹಸಿವು ಮುಕ್ತ ಕರ್ನಾಟಕ ಗುರಿ’

ಕಾರವಾರ: ಬಡತನ ರೇಖೆಗಿಂತ ಕೆಳಗಿನ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಹೆಚ್ಚುವರಿಯಾಗಿ ಎರಡು ಕೆಜಿ ಅಕ್ಕಿ ವಿತರಿಸುವ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಚಾಲನೆ ನೀಡಿದರು.
ಹಳಿಯಾಳದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ವಿತರಿಸಿ ಮಾತನಾಡಿದ ಅವರು ಈ ವರ್ಷದ ಬಜೆಟ್‌ನಲ್ಲಿ ಘೋಷಿಸಿದಂತೆ ಎಪ್ರಿಲ್ ಒಂದರಿಂದ ಪ್ರತಿಯೊಬ್ಬ ಬಿಪಿ‌ಎಲ್ ಸದಸ್ಯನಿಗೆ ೨ಕೆಜಿ ಹೆಚ್ಚುವರಿ ಸೇರಿದಂತೆ ೭ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರತಿಯೊಬ್ಬರು ಹೊಟ್ಟೆ ತುಂಬಾ ಉಣ್ಣುವ ಮೂಲಕ ಸ್ವಾವಲಂಬಿ ಹಸಿವುಮುಕ್ತ ರಾಜ್ಯ ನಿರ್ಮಾಣ ಸರ್ಕಾರದ ಗುರಿ. ಇನ್ನು ಮುಂದೆ ಕುಟುಂಬದ ಪ್ರತಿ ಸದಸ್ಯರಿಗ ತಲಾ ೭ಕೆಜಿ ಅಕ್ಕಿ ದೊರೆಯಲಿದೆ. ಅಡುಗೆ ಅನಿಲ ಸಂಪರ್ಕ ಹೊಂದಿದ ಕುಟುಂಬಗಳಿಗೆ ಈ ಹಿಂದೆ ಸೀಮೆ ಎಣ್ಣೆ ನೀಡಲಾಗುತ್ತಿರಲಿಲ್ಲ. ಈಗ ಪ್ರತಿ ತಿಂಗಳು ಒಂದು ಲೀಟರ್ ಸೀಮೆ‌ಎಣ್ಣೆ ವಿತರಿಸಲಾಗುವುದು ಎಂದರು.
ಪಡಿತರ ಅಕ್ಕಿಯ ಲಾಭ ಪ್ರತಿಯೊಬ್ಬರಿಗೂ ದೊರೆಯಬೇಕು. ಅಕ್ಕಿಯನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದು ಪಾಪಕಾರ್ಯ. ಯಾರೂ ಸರ್ಕಾರ ನೀಡುವ ಅಕ್ಕಿಯನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಬಾರದು ಎಂದು ಸಚಿವರು ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಬಿ.ರಘುನಾಥ, ಜಿಲ್ಲೆಯಲ್ಲಿ ೧೦೦೯೦ ಅಂತ್ಯೋದಯ ಕಾರ್ಡ್‌ಗಳು, ೯,೬೪೭೦೧ ಬಿಪಿ‌ಎಲ್ ಸದಸ್ಯರಿಗೆ ೨೫೦೮೮೩ ಬಿಪಿ‌ಎಲ್ ಕಾರ್ಡುಗಳು ಮತ್ತು ೮೨೩೪೭ ಎಪಿ‌ಎಲ್ ಸದಸ್ಯರಿಗೆ ೧೪೪೩೫ ಎಪಿ‌ಎಲ್ ಕಾರ್ಡುಗಳಿವೆ. ಅಂತ್ಯೋದಯ ಪಡಿತರ ಚೀಟಿಗಳಿಗೆ ತಲಾ ೩೫ಕೆಜಿ ಅಕ್ಕಿ ಹಾಗೂ ಬಿಪಿ‌ಎಲ್ ಕಾರ್ಡುಗಳ ಸದಸ್ಯರಿಗೆ ತಲಾ ೭ಕೆಜಿ ಅಕ್ಕಿಯನ್ನು ಜಿಲ್ಲೆಯಾದ್ಯಂತ ವಿತರಿಸಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಉಪವಿಭಾಗಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ಶಂಕರ ರೇಣಕೆ,  ಪುರಸಭೆ ಅಧ್ಯಕ್ಷ ಉಮೇಶ ಬೋಳಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...