ಅಚ್ಚುಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಶಾಲೆಗಳಿಂದ ಅರ್ಜಿ ಆಹ್ವಾನ

Source: sonews | By Staff Correspondent | Published on 25th June 2018, 11:02 PM | Coastal News |

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರೌಢಶಾಲೆಗಳಲ್ಲಿ ಅಚ್ಚುಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಸ್ನೆ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಸರಕಾರಿ, ಸನುದಾನಿತ ಹಾಗೂ ಖಾಸಗಿ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮ ಏರ್ಪಡಿಸುವ ಶಾಲೆಗಳಿಗೆ ಪ್ರಾಧಿಕಾರವು 5 ಸಾವಿರ ರೂ. ಗರಿಷ್ಠ ಮಿತಿಯ ವಾಸ್ತವಿಕ ವೆಚ್ಚವನ್ನು ಭರಿಸುವುದು. ಅರ್ಜಿ ಸಲ್ಲಿಸಬಯಸುವ ಶಾಲಾ ಮುಖ್ಯಸ್ಥರು ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾಧಿ ವಿವಿರಗಳೊಂದಿಗೆ ಅರ್ಜಿಯನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು.

ಕಾರ್ಯಕ್ರಮ ಏರ್ಪಡಿಸುವ ಮುನ್ನ ಪ್ರಾಧಿಕಾರದಿಂದ ಪುರ್ವಾನುಮೋದನೆ ಪಡೆಯುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com   ಸಂಪರ್ಕಿಸಲು ಕೋರಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...