ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿ ಅಹ್ವಾನ 

Source: sonews | By Staff Correspondent | Published on 25th June 2018, 11:54 PM | Coastal News | Don't Miss |

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕನಿಷ್ಠ 5 ರಿಂದ 15 ವಿದ್ಯಾರ್ಥಿಗಳನ್ನೋಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿಯನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com  ಸಂಪರ್ಕಿಸಲು ಕೋರಿದೆ. 

ಸೊಗಸು ಬಹುಮಾನ ಅರ್ಜಿ ಅಹ್ವಾನ
ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ವರ್ಷ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ ಮುಖಪುಟ,ವಿನ್ಯಾಸ ಗುಣಮಟ್ಟವನ್ನು ಪರಿಗಣಿಸಿ ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಕಲಾವಿದರು, ಲೇಖಕರು, ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿದಾರರು ಪುಸ್ತಕದ ಹೆಸರು, ಲೇಖಕರ ಹೆಸರು ಪ್ರಕಟವಾದ ವರ್ಷ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು  ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com   ಸಂಪರ್ಕಿಸಲು ಕೋರಿದೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...