ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಕಲ ಸಿದ್ಧತೆ; ಜಿಲ್ಲೆಯಲ್ಲಿ 9999 ವಿದ್ಯಾರ್ಥಿಗಳು

Source: sonews | By Staff Correspondent | Published on 22nd March 2018, 12:40 AM | Coastal News | Don't Miss |

ಕಾರವಾರ  : ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆಗಳು ಇದೇ ಮಾರ್ಚ 23 ರಿಂದ ಏಪ್ರಿಲ್ 7 ರವರೆಗೆ ನಡೆಯಲಿದ್ದು. ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 9999 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಒಟ್ಟು 38 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಕಾಶ ಪಿ.ಕೆ. ತಿಳಿಸಿದರು. 

ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಕಾರವಾರದಲ್ಲಿ 11, ಅಂಕೋಲಾದಲ್ಲಿ 4, ಕುಮಟಾದಲ್ಲಿ 6, ಹೊನ್ನಾವರ 9 ಹಾಗೂ ಭಟ್ಕಳದಲ್ಲಿ 8 ಪರೀಕ್ಷಾ ಕೇಂದ್ರಗಳಿವೆ. 9249 ಹೊಸ ವಿದ್ಯಾರ್ಥಿಗಳು, 508 ಪುನರಾವರ್ತಿತ ವಿದ್ಯಾರ್ಥಿಗಳು, 242 ಮಂದಿ ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 9999 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಘೋಷಿಸಿದ್ದು, ಈ ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಿದ್ದಾರೆ  ಎಂದು ಹೇಳಿದರು.
       
ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಕೆ: ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ 38 ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಅಥವಾ ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ.   ಗೋವಾ ರಾಜ್ಯದಿಂದ 72 ಗಡಿನಾಡಕನ್ನಡ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದು, ಇವರಿಗೆ ಉಳಿದುಕೊಳ್ಳಲು ಉಚಿತ ವಸತಿಗೃಹ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಪ್ರತಿ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಪರೀಕ್ಷಾ ಕೇಂದ್ರದಲ್ಲಿನ ಮೂಲಭೂತ ಸೌಕರ್ಯಗಳು, ಗಾಳಿ, ಬೆಳಕು, ಶೌಚಾಲಯ, ಆಸನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ. ಪರೀಕ್ಷಾಕೊಠಡಿ ಮೇಲ್ವಿಚಾಕರನ್ನು ಹಾಗೂ ಮಾರ್ಗಾಧಿಕಾರಿಗಳನ್ನು ಪರೀಕ್ಷಾ ಮಂಡಳಿಯ ನೀಯಮದಂತೆ ನೇಮಕ ಮಾಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
    
ಪೊಲೀಸ್ ಬಂದೋಬಸ್ತ :
ಜಿಲ್ಲೆಯಲ್ಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದ್ದು ಪ್ರಶ್ನೆ ಪತ್ರಿಕೆ ವಾಹನಗಳಲ್ಲಿ ಸಾಗಿಸುವಾಗ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಯನ್ನು  ಕಡ್ಡಾಯವಾಗಿ ನಿಯೋಜಿಸಲು ಕ್ರಮ ವಹಿಸಲಾಗಿದೆ ಎಂದರು.
ಕೆ.ಎಸ್.ಆರ್.ಟಿ.ಸಿ. ವ್ಯವಸ್ಥೆ. ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಬಸ್ ಪಾಸನಂತೆ ತೋರಿಸುವ ಮೂಲಕ ಉಚಿತವಾಗಿ ಪ್ರಯಾಣಿಸಬಹುದಾಗಿದೆ.  ಎಂದು ತಿಳಿಸಿದರು. 


ಮಾರ್ಚ 22 ರಂದು ದೇವರ ದಾಸಿಮಯ್ಯ ಜಯಂತಿ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಮಾರ್ಚ22 ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
ಬಹೃತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು.  ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.  ಶಾಸಕ ಸತೀಶ್ ಸೈಲ್ ಅಧ್ಯಕ್ಷತೆ ವಹಿಸುವರು. ಶಾಸಕರಾದ ಶಿವರಾಮ ಹೆಬ್ಬಾರ, ವಿಶ್ವೇಶ್ವರ ಹೆಗಡೆ ಕಾಗೇರಿ, ಮಂಕಾಳು ವೈದ್ಯ, ಶಾರದಾ ಮೋಹನ ಶೆಟ್ಟಿ, ಜಿಲ್ಲಾ ಪಂಚಾಯತ ಅದ್ಯಕ್ಷರಾದ ಜಯಶ್ರೀ ಮೊಗೇರ, ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು. 

ಮಾರ್ಚ 24 ರಂದು ವಿಶ್ವ ಕ್ಷಯರೋಗ ಜಾಥಾ
ಕಾರವಾರ : ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಮಾರ್ಚ 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಜಾಗೃತಿ ಜಾಥಾ ಕಾರ್ಯಕ್ರಮ ಹಾಗೂ 11.00 ಘಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...