ಕ್ಷಿಪ್ರ ಕಾರ್ಯಾಚರಣೆ ಯುದ್ಧನೌಕೆ ‘ಐ‌ಎನ್‌ಎಸ್ ತಿಲ್ಲಾಂಚಾಂಗ್’ ಲೋಕಾರ್ಪಣೆ

Source: S O News service | By Staff Correspondent | Published on 9th March 2017, 11:19 PM | Coastal News | State News | National News | Don't Miss |

ಕಾರವಾರ : ಕ್ಷಿಪ್ರ ಕಾರ್ಯಾಚರಣೆ ಸಾಮರ್ಥ್ಯ ಹೊಂದಿರುವ ‘ತಿಲ್ಲಾಂಚಾಂಗ್’ ಯುದ್ಧನೌಕೆಯನ್ನು ಭಾರತೀಯ ನೌಕಾಪಡೆಗೆ ಗುರುವಾರ ಕಾರವಾರದ ನೌಕಾನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಸೇರ್ಪಡೆ ಮಾಡಲಾಯಿತು.

ಸಂಪೂರ್ಣ ಸ್ವದೇಶಿ ನಿರ್ಮಿತವಾಗಿರುವ ವಾಟರ್ ಜೆಟ್ ತಂತ್ರಜ್ಞಾನ ಹೊಂದಿರುವ ಈ ಯುದ್ಧನೌಕೆಯನ್ನು ಪಶ್ಚಿಮ ನೌಕಾದಳದ ಫ್ಲಾಗ್ ಆಫೀಸರ್ ಕಮಾಂಡಿಂಗ್ ವೈಸ್ ಅಡ್ಮಿರಲ್ ಗಿರೀಶ್ ಲೂತ್ರಾ ಅವರು ಲೋಕಾರ್ಪಣೆ ಮಾಡಿದರು.

ಕರ್ನಾಟಕ ಕರಾವಳಿದ ತೀರ ಪ್ರದೇಶ ಹಾಗೂ ಸಮುದ್ರ ಭಾಗದಲ್ಲಿ ಗಸ್ತು ಕಾರ್ಯಕ್ಕಾಗಿ ಈ ಯುದ್ಧನೌಕೆಯನ್ನು ನಿಯೋಜಿಸಲಾಗುತ್ತಿದ್ದು, ಕಾರವಾರ ನೌಕಾನೆಲೆಯಲ್ಲಿ ಕೇಂದ್ರಸ್ಥಾನವನ್ನು ಹೊಂದಿರುತ್ತದೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸನ್ನದ್ಧವಾಗಿರುವ ಈ ಯುದ್ಧನೌಕೆಯಲ್ಲಿ ನೌಕಾಪಡೆಯ ಅಧಿಕಾರಿಗಳು ಸೇರಿದಂತೆ ೫೦ಮಂದಿ ನೌಕಾ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಕನಿಷ್ಟ ನೀರಿನಲ್ಲಿ ಕೂಡಾ ಸಂಚರಿಸುವ ಸಾಮರ್ಥ್ಯವನ್ನು ಹೊಂದಿರುವುದು ‘ತಿಲ್ಲಾಂಚಾಂಗ್’ ವಿಶೇಷ. 

ಜಿ‌ಆರ್‌ಎಸ್‌ಸಿ ಕೊಲ್ಕತ್ತಾ ಸಂಸ್ಥೆ ಈ ಯುದ್ಧನೌಕೆಯನ್ನು ಸಿದ್ಧಪಡಿಸಿದ್ದು, ಈ ಸರಣಿಯಲ್ಲಿ ೪ಯುದ್ಧನೌಕೆಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ೨ನೌಕೆಗಳು ವಿಶಾಖಪಟ್ಟಣದಲ್ಲಿ ಕಾರ್ಯಾಚರಿಸುತ್ತಿವೆ. ಪಶ್ಚಿಮ ಕರಾವಳಿಗೆ ನೀಡಿರುವ ಪ್ರಥಮ ಯುದ್ಧನೌಕೆ ಇದಾಗಿದೆ. ಈ ಯುದ್ಧನೌಕೆಯಲ್ಲಿ ಪ್ರೊಪೆಲ್ಲರ್ ತಂತ್ರಜ್ಞಾನದ ಬದಲಾಗಿ ೩ಬಲಿಷ್ಟ ವಾಟರ್ ಜೆಟ್ ಇಂಜಿನ್‌ಗಳನ್ನು ಅಳವಡಿಸಲಾಗಿದೆ. ಈ ವಾಟರ್ ಜೆಟ್‌ಗಳು ನೀರನ್ನು ಸೆಳೆದುಕೊಂಡು ನೌಕೆಯನ್ನು ವೇಗವಾಗಿ ಮುನ್ನಡೆಸಿಕೊಂಡು ಹೋಗುತ್ತದೆ. 

ಕಮಾಂಡರ್ ಅದಿತಿ ಪಟ್ನಾಯಕ್ ‘ಐ‌ಎನ್‌ಎಸ್ ತಿಲ್ಲಾಂಚಾಂಗ್’ ಕಮಾಂಡರ್ ಆಗಿ ಕಾರ್ಯನಿರ್ವಹಿಸಲಿದ್ದು, ಕರಾವಳಿ ಮತ್ತು ಸಮುದ್ರದಲ್ಲಿ ಕಣ್ಗಾವಲು, ನುಸುಳುಕೋರರು ಅಥವಾ ಕಳ್ಳಸಾಗಾಣಿಕೆಗಾರರ ಮೇಲೆ ನಿಗಾ ಮತ್ತು ತಡೆ, ಇ‌ಇಝಡ್ ನಿಯಂತ್ರಣ, ಕಾನೂನು ಪರಿಪಾಲನೆ ಮಾತ್ರವಲ್ಲದೆ ಮಿಲಿಟರಿಯೇತರ ಕಾರ್ಯಗಳಾದ ರಕ್ಷಣಾ ಕಾರ್ಯಾಚರಣೆ, ಮಾನವೀಯ ನೆರವುಗಳು, ವಿಪತ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳಿಗೆ ಈ ಯುದ್ಧನೌಕೆ ಸನ್ನದ್ಧವಾಗಿರುತ್ತದೆ ಎಂದು ಕರ್ನಾಟಕ ನೌಕಾ ವಲಯದ ರಿಯರ್ ಅಡ್ಮಿರಲ್ ಕೆ.ಜೆ.ಕುಮಾರ್ ಈ ಸಂದರ್ಭದಲ್ಲಿ ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಮುಖ್ಯ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಜಿ‌ಆರ್‌ಎಸ್‌ಇ ಸಂಸ್ಥೆಯ ಚೇರ್‌ಮನ್ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ವಿ.ಕೆ.ಸಕ್ಸೇನಾ, ನೌಕಾನೆಲೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...