ಪ್ರತಿಯೊಬ್ಬರು ಯೋಗ ಮಾಡಬೇಕು : ರೂಪಾಲಿ ನಾಯ್ಕ 

Source: sonews | By Staff Correspondent | Published on 21st June 2018, 6:57 PM | Coastal News | Don't Miss |

ಕಾರವಾರ: ಆತ್ಮವನ್ನು ಶಾಂತವಾಗಿಟ್ಟುಕೊಳ್ಳಲು ಯೋಗ ಸಹಕಾರಿಯಾಗಿದ್ದು ಪ್ರತಿಯೋಬ್ಬರು ಯೋಗಾಭ್ಯಾಸ ರೂಡಿಸಿಕೊಳ್ಳಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. 
  
ಅವರು ಗುರುವಾರ ಬೆಳಗ್ಗೆ 6.30ಕ್ಕೆ ಬಾಡ ಗುರುಮಠದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ 4ನೇ ಅಂತತಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಗ ದಿನಾಚೆಣೆಯಾಗಬಾರದು, ಯೋಗವು ದಿನವೂ ಆಗಬೇಕು. ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೋಳಿಸಬಾರದು. ಅಂತರಂಗ ಮತ್ತು ಬಹಿರಂಗ ಶುದ್ದಿಗೆ ಯೋಗ ಸಹಕಾರಿಯಾಗಿರುತ್ತದೆ. ಮುಂದಿನ ದಿನಗಳಲ್ಲಿ ಯೋಗ ಶಾಲೆಗಳನ್ನು ಪ್ರಾರಂಬಿಸಲು ಚಿಂತಿಸಲಾಗುವುದು ಎಂದು ತಿಳಿಸಿದರು.
  
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹಾಯಕ ಆಯುಕ್ತ ಅಭಿಜೀನ ಮಾತನಾಡಿ ಎಲ್ಲರಿಗೂ ಮಾನಸಿಕ ನೆಮ್ಮದಧಿ ನೀಡಲು ಯೋಗ ಸಹಕಾರಿಯಾಗಿದೆ. ಭಯೋತ್ಪಾದನೆ ಹೆಚ್ಚುತ್ತಿರುವ ಸಂಧರ್ಭದಲ್ಲಿ ಎಲ್ಲ ರಾಷ್ಟ್ರಗಳನ್ನು ಒಟ್ಟುಗೂಡಿಸಿ ಶಾಂತಿ ಮಂತ್ರದತ್ತ ಕೊಂಡೋಯ್ಯಲು ಅಂತರಾಷ್ಟೀಯ ಯೋಗ ದಿನಚಾರಣೆ ಆಚರಿಸಲಾಗುತ್ತದೆ. ಇದು ಭವಿಷ್ಯತ್ತಿಗೆ ಸಹಕಾರಿಯಾಗಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. 
  
ಆಯುರ್ವೇದ ವೈದ್ಯ ಡಾ. ಜಗದೀಶ ಯಾಜಿ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಯೋಗ ಒಂದು ಪುರಾತನವಾದ ಭಾರತೀಯ ಚಿಕಿತ್ಸಾ ಪದ್ದತಿಯಾಗಿದೆ. ಇದಕ್ಕೆ ಸಾವಿರಾರಿ ವರ್ಷಗಳ ಇತಿಹಾಸವಿದೆ. ಪ್ರತಿಯೊಬ್ಬ ಮನುಷ್ಯನು ದೈಹಿಕಾಗಿ ಮತ್ತು ಮಾನಸಿಕವಾಗಿ ಚೈತನ್ಯ ಪೂರ್ಣನಾಗಲು ಯೋಗ ಒಂದು ಉತ್ತಮ ಸಾಧನವಾಗಿದೆ. ದೇಹ ಮತ್ತು ಮನಸ್ಸನ್ನು ಒಂದು ಮಾಡುವುದೇ ಯೋಗ. ಯೋಗದಿಂದ ಸರ್ವತೋಮುಖ ಅಭಿವೃದ್ಧಿಯೊಂದಿಗೆ ವ್ಯಕ್ತಿತ್ವ ವಿಕಸಗೊಳ್ಳುತ್ತದೆ ಎಂದರು. 

ಪತಂಜಲಿ ಯೋಗಪೀಠದವರು ಸಾರ್ವಜನಕರಿಗೆ ಭುಜಂಗಾಸನ, ಪ್ರಾಣಯಾಮ, ವಕ್ರಾಸನ ಗೋಮುಖಾಸನ ಶವಾಸನ ಸೇರಿದಂತೆ ವಿವಿಧ ಆಸನಗಳನ್ನು ಮಾಡುವದನ್ನು ಕಲಿಸಿಕೊಟ್ಟರು. ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಯುವಜನ ಸಬಲೀಕರಣ ಇಲಾಖೆ ಕ್ರೀಡಾ ತರಬೇತಿ ವಿದ್ಯಾರ್ಥಿಗಳು, ಶಾಲಾ ವಿದ್ಯರ್ಥಿಗಳು ಶಿಕ್ಷಕರು ಸೇರಿ 400ಕ್ಕೂ ಹೆಚ್ಚಿನ ಜನರು ಸಾಮೂಹಿಕ ಯೋಗಾಭ್ಯಾಸ ಮಾಡಿದರು.
 
ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಸಿ.ಆರ್. ಬಸವರಾಜಯ್ಯ ಸ್ವಾಗತಿಸಿದರು. ಉಮ್ಮಚಗಿ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈಧ್ಯ ಡಾ.ಯೋಗೇಶ ಮಡಗಾಂಕರ ವಂದನಾರ್ಪಣೆ ಮಾಡಿದರು. ಡಾ. ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...