ನ.18ರಂದು ಕೈಗಾ ಅಣುವಿಕಿರಣ ಅವಘಡ ಅಣಕು ಪ್ರದರ್ಶನ: ಸಂಜಯಕುಮಾರ್

Source: sonews | By Staff Correspondent | Published on 17th November 2017, 11:57 PM | Coastal News | State News | Don't Miss |

ಕಾರವಾರ : ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಕೈಗಾ ಎನ್‍ಪಿಸಿಎಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೈಗಾ ಅಣು ವಿದ್ಯುತ್ ಸ್ಥಾವರದ ಸ್ಥಾನಿಕ ಪ್ರಭಾರ ನಿರ್ದೇಶಕ ಸಂಜಯ್‍ಕುಮಾರ್ ತಿಳಿಸಿದ್ದಾರೆ.
ಪರಮಾಣು ವಿದ್ಯುತ್ ಸ್ಥಾವರ ಅತ್ಯಂತ ಸುರಕ್ಷೆ ಹಾಗೂ ಪರಿಸರ ಪ್ರೇಮಿಯಾಗಿದ್ದು ಯಾವುದೇ ಆತಂಕಕ್ಕೆ ಅವಕಾಶ ಇರುವುದಿಲ್ಲ. ಆದರೂ ಪರಮಾಣು ವಿದ್ಯುತ್ ನಿಯಂತ್ರಣ ಮಂಡಳಿ ಮಾರ್ಗಸೂಚಿಯಂತೆ ಪ್ರತಿ ಎರಡು ವರ್ಷಗಳಿಗೊಮ್ಮೆ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಬೇಕಿರುವುದರಿಂದ ನವೆಂಬರ್ 18ರಂದು ಶನಿವಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪ್ರತಿಮೂರು ತಿಂಗಳಿಗೊಮ್ಮೆ ಪ್ಲಾಂಟ್‍ನಲ್ಲಿ ಹಾಗೂ ಪ್ರತಿ ಆರು ತಿಂಗಳಿಗೊಮ್ಮೆ ವಿದ್ಯುತ್ ಸ್ಥಾವರದ ಒಳಭಾಗದಲ್ಲಿ ಇಂತಹ ಪ್ರಕ್ರಿಯೆ ನಡೆಸಬೇಕಿದೆ. ಸ್ಥಾವರದ ಎಲ್ಲ ಘಟಕಗಳು, ವ್ಯವಸ್ಥೆಗಳು ಸುಸ್ಥಿತಿಯಲ್ಲಿವೆ ಎಂಬುದನ್ನು ಖಾತರಿಸಪಡಿಸಿಕೊಳ್ಳುವುದು ಇದರ ಪ್ರಮುಖ ಉದ್ದೇಶ. ಅಂತೆಯೇ ನ.18ರಂದು ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಪ್ರದರ್ಶನದಲ್ಲಿ ಜಿಲ್ಲಾಡಳಿತ ಅವಘಡ ಸಂದರ್ಭದಲ್ಲಿ ಕೈಗೊಳ್ಳುವ ಸುರಕ್ಷತಾ ಕ್ರಮಗಳ ಗಮನಿಸುತ್ತದೆ ಎಂದರು.
ನ.18ರಂದು ಮುಂಜಾನೆಯಿಂದ ಅಣಕು ಪ್ರದರ್ಶನದ ಕಾರ್ಯಾಚರಣೆ ಆರಂಭವಾಗಲಿದ್ದು ಮಧ್ಯಾಹ್ನ 12.30ಕ್ಕೆ ಪೂರ್ಣಗೊಳ್ಳಲಿದೆ. ಮುಂಜಾನೆ ಸ್ಥಾವರದಲ್ಲಿ ಅಣು ಸೋರುವಿಕೆಯ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗುವುದು. ಈ ಹಂತದಲ್ಲಿ ಜಿಲ್ಲಾಧಿಕಾರಿಗಳು ತುರ್ತು ಕಾರ್ಯಾಚರಣೆಯನ್ನು ಘೋಷಿಸುವರು. ಈ ಹಂತದಲ್ಲಿ ಸೆಕ್ಟರ್ 4ರ ವ್ಯಾಪ್ತಿಯಲ್ಲಿ ಬರುವ ಕುಚೇಗಾರ ಗ್ರಾಮದ ಸಾರ್ವಜನಿಕರನ್ನು ಕೇರವಾಡಿ ಸರ್ಕಾರಿ ಪ್ರೌಢಶಾಲೆಗೆ ಸ್ಥಳಾಂತರಿಸಲಾಗುವುದು. ಕಾರ್ಯಾಚರಣೆಯಲ್ಲಿ ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಅಣಕು ತುರ್ತು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಣು ಸ್ಥಾವರದ ಅಧಿಕಾರಿಗಳಾದ ಜೆ.ಆರ್.ದೇಶಪಾಂಡೆ, ಪಿ.ಜಿ.ರಾಯಚೂರು, ಸುಬ್ರಮಣ್ಯ, ಮತ್ತಿತರರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...