ಮಾರ್ಚ 17ರಂದು ಕುವೆಂಪು ಓದು-ಕಮ್ಮಟ

Source: sonews | By Staff Correspondent | Published on 15th March 2018, 12:50 AM | Coastal News | Don't Miss |

 

ಕಾರವಾರ: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕುವೆಂಪು ಭಾಷಾಭಾರತಿ ಪ್ರಾಧಿಕಾರ ಬೆಂಗಳೂರು ಮತ್ತು ಬಿ.ಜಿ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸದಾಶಿವಗಡ,ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ಓದು-ಕಮ್ಮಟವನ್ನು ಮಾರ್ಚ 17ರಂದು ಬೆಳಗ್ಗೆ 9.30ಕ್ಕೆ ಕಾರವಾರ ಬಿ.ಜಿ.ವಿ.ಎಸ್ ಮಹಾವಿದ್ಯಾಲಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 

ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಬಾಡ, ಪ್ರಾಚಾರ್ಯ ಡಾ. ಶಿವಾನಂದ ನಾಯಕ ಕಾರ್ಯಕ್ರಮ ಉದ್ಘಾಟಿಸುವರು. ಕುವೆಂಪು ಭಾಷಾಭಾರತಿ ಪ್ರಾಧಿಕಾರ ಸದಸ್ಯ ಡಾ. ಎಂ.ಜಿ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಾಜಿ ಸಚಿವ, ಬಿ.ಜಿ.ವಿ.ಎಸ್ ಅಧ್ಯಕ್ಷ ಅಧ್ಯಕ್ಷತೆ ವಹಿಸುವರು. ಕುವೆಂಪು ಕವಿತೆಗಳ ವಿಶ್ಲೇಷಣೆಯನ್ನು ಕವಯಿತ್ರಿ ಮತ್ತು ಅಂಕಣಕಾರರಾದ ಶ್ರೀದೇವಿ ಕೆರೆಮನೆ ನೇರವೆರಿಸುವರು. 


ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ಅರ್ಜಿ ಆಹ್ವಾನ

ಕಾರವಾರ:  ಕರ್ನಾಟಕ ಶಿಲ್ಪ ಕಲಾ ಅಕಾಡೆಮಿಯು 2017-18ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು  ಪರಿಶಿಷ್ಟ ಪಂಗಡದ  ಅಭ್ಯರ್ಥಿಗಳಿಗೆ ಶಿಲ್ಪಕಲಾಅಧ್ಯಯನ ಫೆಲೋಶಿಫ್‍ಗಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 7 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ರಿಜಿಸ್ಟ್ರಾರ್ ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ ಜೆ.ಸಿ ರಸ್ತೆ ಬೆಂಗಳೂರು-02 ಇಲ್ಲಿಗೆ ನೇರವಾಗಿ ಸಲ್ಲಿಸಬೇಕು ಎಂದು ಶಿಲ್ಪ ಕಲಾ ಅಕಾಡೆಮಿ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...