ಮೇ ೧೫ರಿಂದ ಕೌಶಲ್ಯ ಅಭಿವೃದ್ಧಿ ತರಬೇತಿ ನೋಂದಣಿಗೆ ಚಾಲನೆ

Source: S O News service | By sub editor | Published on 13th May 2017, 4:45 PM | State News | Technology | Don't Miss |

ಕಾರವಾರ: ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದ ವೆಬ್‌ಪೋರ್ಟಲ್ (www.kaushalkar.com)  ವಿನ್ಯಾಸಗೊಳಿಸಿದ್ದು, ಮೇ ೧೫ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು.

ಜಿಲ್ಲೆಯಲ್ಲಿ ಬೆಳಿಗ್ಗೆ ೧೧ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ವೆಬ್‌ಪೋರ್ಟಲ್‌ಗೆ ಚಾಲನೆ ನೀಡುವರು. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ ತರಬೇತಿ ಪಡೆಯಲು ತಮ್ಮ ಹೆಸರನ್ನು ಸ್ವಯಂ ನೋಂದಾಯಿಸಿಕೊಳ್ಳಲು ನೆರವಾಗುತ್ತದೆ.

ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಯೋಜನೆ ಅಡಿಯಲ್ಲಿ ವಿವಿಧ ಕೌಶಲ್ಯ ತರಬೇತಿಗಳ ಉಪಕ್ರಮಗಳನ್ನು ಒಂದೆಡೆ ತರಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಎಂಬ ಹೊಸ ಇಲಾಖೆಯನ್ನು ಆರಂಭಿಸಲಾಗಿದೆ. ಮುಖ್ಯ ಮಂತ್ರಿಗಳ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಆಯೋಜಿಸಿರುವ ನಿರುದ್ಯೋಗಿ ಯುವಜನರ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮಕ್ಕೆ ಮೇ ೧೫ರಂದು ಚಾಲನೆ ನೀಡಲಾಗುತ್ತಿದೆ.

ಈ ಯೋಜನೆ ಅಡಿಯಲ್ಲಿ ಪ್ರತ್ಯೇಕ ಉದ್ಯೋಗಗಳಿಗೆ ಕೌಶಲ್ಯ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ತಮ್ಮ ಹೆಸರನ್ನು ಜಾಲ ತಾಣದ ಪೋರ್ಟಲ್ (www.kaushalkar.com) ನಲ್ಲಿ ಸ್ವಯಂ ನೋಂದಾಯಿಸಬಹುದು.  ಸದರಿ ಜಾಲತಾಣವನ್ನು ಅಭ್ಯರ್ಥಿಗಳ ಸಾಮರ್ಥ್ಯವನ್ನು ಮತ್ತು ಇವರುಗಳ ಅವಶ್ಯಕತೆಗಳನ್ನು ಗುರುತಿಸುವಂತೆ ವಿನ್ಯಾಸಗೊಳಿಸಲಾಗಿದೆ ಅಲ್ಲದೆ, ಈ ಜಾಲ ತಾಣವು   ಪಾಲುದಾರರು, ತರಬೇತಿ ನೀಡುವವರು ಮತ್ತು ಉದ್ಯೋಗದಾತರ ಸಂಸ್ಥೆಗಳಿಗೆ ತಮ್ಮ ಅವಶ್ಯಕತೆಗಳನ್ನು ವೆಬ್‌ಪೋರ್ಟಲ್‌ನಲ್ಲಿ  ದಾಖಲಿಸಲು ನೆರವಾಗುತ್ತದೆ ಮತ್ತು ರಾಜ್ಯಾದ್ಯಂತ ಅನೇಕ ಭಾಗಗಳಲ್ಲಿ ನೀಡಲಾಗುತ್ತಿರುವ ವಿವಿಧ ಕೌಶಲ್ಯ ತರಬೇತಿ ಯೋಜನೆಗಳ ಸಂಪೂರ್ಣ ಮಾಹಿತಿ ದೊರಕಿಸಿಕೊಡಲು ನೆರವಾಗುತ್ತದೆ.   

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಈ ವಿಶೇಷ ಕೌಶಲ್ಯ ತರಬೇತಿ ನೈಪುಣ್ಯತೆಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಮೇ೧೫ರಿಂದ ೨೨ರ ವರೆಗೆ ತಾಲ್ಲೂಕು ಕಚೇರಿಗಳಲ್ಲಿ ನಡೆಯು ಕೌಶಲ್ಯ ಶಿಬಿರದಲ್ಲಿ  ಅಲ್ಲದೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ತಾಲ್ಲೂಕು ಕಚೇರಿ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳಲ್ಲಿ ವಿಶೇಷ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಂತರ ಈ ನೋಂದಣಿಯು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳಲ್ಲಿ ಮುಂದುವರಿಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಎಲ್.ಚಂದ್ರಶೇಖರ ನಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್ ತಿಳಿಸಿದ್ದಾರೆ.


 

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ಶಿರಾಲಿ ಹೆದ್ದಾರಿ ಅಗಲಿಕರಣ;ಸಾರ್ವಜನಿಕರ ಬೇಡಿಯಂತೆ 30 ರ ಬದಲು 45ಮೀಟರ್ ವಿಸ್ತರಣೆ-ಕೇಂದ್ರ ಸಚಿವ ಅನಂತ್ ಭರವಸೆ

ಭಟ್ಕಳ: ಶಿರಾಲಿ ಭಾಗದ ಗ್ರಾಮಸ್ಥರ ಬೇಡಿಕೆಯಂತೆ ರಾ.ಹೆ.66 ರ ಅಗಲೀಕರಣವನ್ನು 30ಮೀಟರ್ ಬದಲು 45ಮೀಟರ್ ಗೆ ವಿಸ್ತರಿಸಲು ಅಗತ್ಯ ಕ್ರಮಗಳನ್ನು ...

ಮಾನವೀಯತೆಯ ಸೌಧದಡಿ ಸಮಾನತೆಯ ಸಮಾಜ ಕಟ್ಟಿದ ಕಾಯಕ ಯೋಗಿ ಡಾ.ಶಿವಕುಮಾರ ಸ್ವಾಮೀಜಿ ಇನ್ನಿಲ್ಲ

ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬೆಳಗ್ಗೆ ...

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ತ್ರಿವಿಧ ದಾಸೋಹಿ ಡಾ.ಶಿವಕುಮಾರ್ ಶಿವಯೋಗಿಗಳ ನಿಧನಕ್ಕೆ ರಾಬ್ತಾ ಮಿಲ್ಲತ್ ತೀವ್ರ ಸಂತಾಪ

ಭಟ್ಕಳ: ತ್ರಿವಿಧ ದಾಸೋಹಿ ಜ್ಞಾನಯೋಗಿ ಸಿದ್ದಗಂಗಾ ಶ್ರೀಗಳ ನಿಧನಕ್ಕೆ ರಾಬ್ತಾ-ಇ-ಮಿಲ್ಲತ್ ಸಂಸ್ಥೆಯ ಜಿಲ್ಲಾಧ್ಯಕ್ಷ ನ್ಯಾಯಾವಾದಿ ...

ಮಾನವೀಯತೆಯ ಸೌಧದಡಿ ಸಮಾನತೆಯ ಸಮಾಜ ಕಟ್ಟಿದ ಕಾಯಕ ಯೋಗಿ ಡಾ.ಶಿವಕುಮಾರ ಸ್ವಾಮೀಜಿ ಇನ್ನಿಲ್ಲ

ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬೆಳಗ್ಗೆ ...