ಜನವರಿ 12 ರಂದು ಯುವ ಸಪ್ತಾಹ ಕಾರ್ಯಕ್ರಮ

Source: sonews | By sub editor | Published on 11th January 2018, 6:22 PM | Coastal News |

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ   ಸ್ವಾಮಿ ವಿವೇಕಾನಂದರ ಜನ್ಮೋತ್ವವದ ಅಂಗವಾಗಿ ಜನವರಿ 12 ರಂದು  ಬೆಳಿಗ್ಗೆ 10-30 ಕ್ಕೆ ಮಾರುತಿ ಮಂಗಲ ಕಾರ್ಯಾಲಯದಲ್ಲಿ ಯುವ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9.30 ಕ್ಕೆ ತಾಲೂಕ ಕ್ರೀಡಾಂಗಣದಿಂದ (ಮಾಲಾದೇವಿ ಮೈದಾನ) ಮಾರುತಿ ಮಂಗಲ ಮಂಟಪದವರೆಗೆ ಜಾಥಾ  ಹಮ್ಮಿಕೊಳ್ಳಲಾಗಿದ್ದು. 10.30 ಗಂಟೆಗೆ  ಮಾರುತಿ ಮಂಗಲ ಮಂಟಪದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಆರ್. ವಿ.ದೇಶಪಾಂಡೆ ಉದ್ಘಾಟಿಸಲಿದ್ದಾರೆ.  ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಉಪಸ್ಥಿತರಿರುವರು. ಕಾರವಾರ ಮತ್ತು ಅಂಕೋಲಾ ಶಾಸಕ ಸತೀಶ ಕೃಷ್ಣಾ ಸೈಲ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸುವರು.  ಕಾರವಾರ ಸರ್ಕಾರಿ ಮಹಾವಿದ್ಯಾಲಯ ಉಪನ್ಯಾಸಕ ಡಾ. ಗಿರಿ ಯವರು  “ಯುವ ಜನತೆಗೆ ಸ್ವಾಮಿ ವಿವೇಕಾನಂದರ ಸಂದೇಶಗಳು” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. 


ಉಳವಿ ಜಾತ್ರಾ ಮಹೋತ್ಸವ
ಕಾರವಾರ : ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕಿನ ಶ್ರೀಕ್ಷೇತ್ರ ಉಳವಿ ಚನ್ನಬಸವೇಶ್ವರ ಜಾತ್ರಾ ಮಹೋತ್ಸವ ಜನವರಿ 24 ರಿಂದ ಫೆಬ್ರವರಿ 03 ರವರೆಗೆ ನಡೆಯಲಿದೆ.  
ಜಾತ್ರಾ ಮಹೋತ್ಸವ ಅಂಗವಾಗಿ ಫೆಬ್ರವರಿ 01 ರಂದು ಸಂಜೆ 4 ಗಂಟೆಗೆ ಮಹಾರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಆರ್. ವಿ.ದೇಶಪಾಂಡೆ ಚಾಲನೆ ನೀಡುವರು.
ಅಂದು ಜಲಸಂಪನ್ಮೂಲ ಸಚಿವರಾದ ಎಂ.ಬಿ ಪಾಟೀಲ, ರುದ್ರಪ್ಪಾ ಲಮಾಣಿ, ಶಾಸಕ ವೀಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪೋಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೋಗೇರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಗಣ್ಯರು  ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಉಳವಿ ಶ್ರೀ ಚನ್ನಬಸವೇಶ್ವರ ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ. 


ಜನವರಿ 18 ರಂದು ಜಿ.ಪಂ. ಕೆ.ಡಿ.ಪಿ. ಸಭೆ
ಕಾರವಾರ: ಜನವರಿ 18 ರಂದು ಬೆಳಿಗ್ಗೆ 10 ಗಂಟೆಗೆ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ  ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಯಲಿದೆ.
ದಿನಾಂಕ 11-08-2017ರ ಸಭೆಯ ನಡಾವಳಿಯ ಮೇಲಿನ ಅನುಪಾಲನಾ ವರದಿ ಪರಿಶೀಲನೆ, 2017 ಡಿಸೆಂಬರ್ ಅಂತ್ಯದವರೆಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಲಿದ್ದು ಇಲಾಖ ಮುಖ್ಯಸ್ಥರು ವಿವರಗಳೊಂದಿಗೆ ಸಭೆಗೆ ಹಾಜರಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಲ್. ಚಂದ್ರಶೇಖರ ನಾಯಕ ತಿಳಿಸಿದ್ದಾರೆ.
 

ಉದ್ಯೋಗಮೇಳ
ಕಾರವಾರ  : ಯೋಜನಾ ಉದ್ಯೋಗ ವಿನಿಮಯ ಕೇಂದ್ರದ  ವತಿಯಿಂದ ಜನವರಿ  31 ರಂದು ಬೆಳಗ್ಗೆ 10.00 ಗಂಟೆÉಯಿಂದ ಮದ್ಯಾಹ್ನ 4.00 ಗಂಟೆಯವರೆಗೆ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಡಿಗ್ರಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ  ಉದ್ಯೋಗಮೇಳವನ್ನು ಆಯೋಜಿಸಲಾಗಿದೆ, ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.  ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಯೋಜನಾ ಉದ್ಯೋಗ ವಿನಿಯಮ ಕಚೇರಿಯನ್ನು ಖುದ್ದಾಗಿ  ಅಥವಾ ದೂರವಾಣಿ ಸಂಖ್ಯೆ 9481403800 ನ್ನು ಸಂಪರ್ಕಿಸಬಹುದಾಗಿದೆ ಎಂದು ಯೋಜನಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Read These Next

ಭಟ್ಕಳಕ್ಕೆ ಆಗಮಿಸಿದ ಗಾಂಧಿ ಸ್ಪಬ್ಧ ಚಿತ್ರಕ್ಕೆ ತಾಲೂಕಾಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ಸ್ವಾಗತ

ಭಟ್ಕಳ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ...