ಜನತಾ ಚಲನಚಿತ್ರಮಂದಿರಗಳ ನಿರ್ಮಾಣ ಪ್ರೋತ್ಸಾಹಧನ : ಅರ್ಜಿ ಆಹ್ವಾನ 

Source: sonews | By Staff Correspondent | Published on 25th May 2017, 6:31 PM | Coastal News | State News | Don't Miss |

ಕಾರವಾರ  : ೨೦೧೬-೧೭ ಸಾಲಿನ ಆಯವ್ಯದಲ್ಲಿ ಸರಕಾರ ಜನತಾ ಚಿತ್ರ ಮಂದಿರಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲು ಘೋಷಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನಿಸಿದೆ.
ಜನತಾ ಚಿತ್ರಮಂದಿರವನ್ನು ಹೊಸದಾಗಿ ನಿರ್ಮಿಸಲು ಇಚ್ಚಿಸುವರು ಅಥವಾ ಹಾಲಿ ಚಿತ್ರಮಂದಿರವನ್ನು ಜನತಾ ಚಿತ್ರಮಂದಿರವಾಗಿ ಪರಿವರ್ತಿಸಲು ಇಚ್ಚಿಸುವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರ ಕಛೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. 
ರಾಜ್ಯದ ಯಾವುದೇ ಭಾಗದಲ್ಲಿ ಕನಿಷ್ಠ ೨೦೦ ಆಸನಗಳುಳ್ಳ, ಏಕಪರದೆಯ ಅಥವಾ ಕನಿಷ್ಠ ೧೫೦ ಆಸನಗಳನ್ನು ಒಳಗೊಂಡ ಬಹು ಪರದೆಯ ಆಧುನಿಕ ತಂತ್ರಜ್ಞಾನ ಸೌಲಭ್ಯಗಳನ್ನು ಒಳಗೊಂಡ ಚಿತ್ರಮಂದಿರಗಳನ್ನು ನಿರ್ಮಿಸಿ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು ಪೂರ್ಣ ಪ್ರಮಾಣದಲ್ಲಿ ಪ್ರದರ್ಶನಕ್ಕೆ ಮುಕ್ತಗೊಳಿಸಿದ ಚಿತ್ರಮಂದಿಗಳು ಪ್ರೋತ್ಸಾಹಧನಕ್ಕೆ ಅರ್ಹತೆ ಹೊಂದಿರುತ್ತವೆ. ಜನತಾ ಚಿತ್ರಮಂದಿರ ನಿರ್ಮಾಣಕ್ಕೆ ಸರಕಾರದಿಂದ ಪ್ರೋತ್ಸಾಹಧನ ಪಡೆದ ಚಿತ್ರಮಂದಿರಗಳಲ್ಲಿ, ಪ್ರೋತ್ಸಾಧನ ಪಡೆದ ದಿನದಿಂದ ಶೇ.೧೦೦%ರಷ್ಟು ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶಿಸತಕ್ಕದ್ದು. ಒಂದು ಚಿತ್ರಮಂದಿರಕ್ಕೆ ಒಂದು ಬಾರಿ ಮಾತ್ರ ಸಹಾಯಧನ ಮಂಜೂರು ಮಾಡಲಾಗುವದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ ೧೭ ಭಗವಾನ ಮಹಾವೀರ ರಸ್ತೆ, ಬೆಂಗಳೂರು ಇವರನ್ನು ಸಂಪರ್ಕಿಸುವದು. 

ವಸತಿ ನಿಲಯ ಅರ್ಜಿ ಆಹ್ವಾನ
ಕಾರವಾರ  :  ೨೦೧೭-೧೮ ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಪಿ.ಯು.ಸಿ., ಪದವಿ, ಡಿಪ್ಲೋಮಾ, ಐ.ಟಿ.ಐ ಇತ್ಯಾದಿ ಕೋರ್ಸಗಳನ್ನು ಓದುತ್ತಿರುವ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೨೦ ಕೊನೆಯ ದಿನವಾಗಿರುತ್ತದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಪರ್ಕಿಸುವದು. ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ತಾಲೂಕು ವಿಸ್ತರಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೋರಲಾಗಿದೆ.

ಮೇ ೨೭ ರಂದು ನಗರಸಭಾ ಸಾಮಾನ್ಯ ಸಭೆ 
ಕಾರವಾರ  : ಮೇ ೨೭ ರಂದು ಬೆಳಗ್ಗೆ ೧೧ ಗಂಟೆಗೆ ನಗರಸಭಾ ಸಭಾಂಗಣದಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

 ಸರಕಾರಿ ನೌಕರರ ಕ್ರೀಡಾಕೂಟ ಮುಂದೂಡಿಕೆ 
ಕಾರವಾರ:  ಜೂನ ೩ ಮತ್ತು ೪ ರಂದು ಹೊನ್ನಾವರದ ಸೈಂಟ್ ಮಾರ್ಥೋi ಪ್ರೌಡಶಾಲಾ ಮೈದಾನದಲ್ಲಿ ಸಂಘಟಿಸಲಾಗಿದ್ದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವನ್ನು ಮುಂದೂಡಿಲಾಗಿದೆ ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...