ಉದ್ಯೋಗ ವಿನಿಮಯ ಕಚೇರಿಯಲ್ಲಿ 158 ಅಭ್ಯರ್ಥಿಗಳು ನೋಂದಣಿ

Source: sonews | By Staff Correspondent | Published on 10th July 2018, 12:07 AM | Coastal News |

ಕಾರವಾರ: ಉದ್ಯೋಗ ವಿನಿಮಯ ಕಚೇರಿಯಲ್ಲಿ ಕಳೆದ ಜೂನ್ ತಿಂಗಳಿನಲ್ಲಿ 158 ಅಭ್ಯರ್ಥಿಗಳು ನೋಂದಣಿ ಮಾಡಿದ್ದಾರೆ.
ಮೇ ತಿಂಗಳನಲ್ಲಿ 124 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಉದ್ಯೋಗದ ನಿರೀಕ್ಷೆಯಲ್ಲಿ 9431 ಅಭ್ಯರ್ಥಿಗಳು ಇದ್ದಾರೆ. ಅವರಲ್ಲಿ 3064 ಮಹಿಳಾ ಅಭ್ಯರ್ಥಿಗಳು ಇದ್ದು, 1832 ಪರಿಶಿಷ್ಟ ಜಾತಿ, 776 ಪರಿಶಿಷ್ಟ ವರ್ಗ, 980 ಅಂಗವಿಕಲ ಅಭ್ಯರ್ಥಿಗಳು ಇದ್ದಾರೆ ಎಂದು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ
ಕಾರವಾರ:  ಶೇಜವಾಡ ಕಾರವಾರ 110 ಕೆ.ವಿ ಉಪಕೇಂದ್ರದ ವಿದ್ಯುತ್ ಉಪಕರಣಗಳ ನಿರ್ವಹಣಾ ಕಾರ್ಯ ನಡೆಯುವುದರಿಂದ  ಜುಲೈ 11 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಕಾರವಾರ ನಗರ, ಹಣಕೊಣ, ಕದ್ರಾ ಮತ್ತು ಸಿದ್ದರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...