ಸ್ವಯಂ ಉದ್ಯೋಗ ಆನ್‌ಲೈನ್ ಅರ್ಜಿ ಆಹ್ವಾನ

Source: sonews | By Staff Correspondent | Published on 27th May 2017, 8:20 PM | Coastal News | Don't Miss |

 

ಕಾರವಾರ:  “ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ   ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‌ಲೈನ್  ಅರ್ಜಿ ಆಹ್ವಾನಿಸಲಾಗಿದೆ.  

ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.೧೦.೦೦ ಲಕ್ಷ ಆಗಿರುತ್ತದೆ. ಸಾಮಾನ್ಯ  ಅಭ್ಯರ್ಥಿಗಳಿಗೆ  ೨೧ ರಿಂದ ೩೫ ವರ್ಷ ವಯೋಮಿತಿ, ಪ.ಜಾತಿ/ಪ.ಪಂ. ಮಹಿಳೆ, ಓ.ಬಿ.ಸಿ., ಅಲ್ಪಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಗರಿಷ್ಠ ೪೫ ವರ್ಷ ವಯೋಮಿತಿ. ಅಭ್ಯರ್ಥಿಗಳು ೮ ನೇ ತರಗತಿ ಪಾಸಾಗಿರಬೇಕು.  ಅರ್ಜಿಯನ್ನು   ನಲ್ಲಿ ಆನ್‌ಲೈನ್ ಮೂಲಕ ಭರ್ತಿ ಮಾಡಲು  ಜೂನ ೧೨ ಕೊನೆಯ ದಿನ ಆಗಿರುತ್ತದೆ.  ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ದ್ವಿ-ಪ್ರತಿಯಲ್ಲಿ ವೆಬ್‌ಸೈಟ್‌ನಲ್ಲಿ ಸೂಚಿಸಿದ ಎಲ್ಲಾ ದಾಖಲೆಗಳನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿರವಾಡ, ಕಾರವಾರ ಅಥವಾ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಡಾ|| ಪಿಕಳೆ ರಸ್ತೆ, ಕಾರವಾರ ರವರಿಗೆ ಜೂನ ೧೭ ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ  ಕೈಗಾರಿಕಾ ಕೇಂದ್ರ, ಶಿರವಾಡ, ಕಾರವಾರ ಕಛೇರಿ  ದೂರವಾಣಿ ಸಂಖ್ಯೆ ೦೮೩೮೨- ೨೮೨೩೦೨, ೨೮೨೩೬೭, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಾರವಾರ ಕಛೇರಿ,  ದೂರವಾಣಿ ಸಂಖ್ಯೆ: ೦೮೩೮೨-೨೨೬೫೦೬ ಅಥವಾ ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು  ಸಂಪರ್ಕಿಸಬಹುದಾಗಿದೆ‌ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. 

                     ಸಹಾಯಧನ ಅರ್ಜಿ ಆಹ್ವಾನ 
ಕಾರವಾರ  : ೨೦೧೭-೧೮ನೇ ಸಾಲಿಗೆ ಅಲ್ಪಸಂಖ್ಯಾತರ ಸ್ವಯಂ ಸೇವಾ ಸಂಸ್ಥೆಗಳಿಂದ ನಡೆಸಲ್ಪಡುತ್ತಿರುವ ಅನಾಥಾಲಯ, ವೃದ್ಧಾಶ್ರಮ, ಏಡ್ಸ್ ಸೋಂಕಿತ ರೋಗಿಗಳು ಮತ್ತು ಮಾನಸಿಕ ಹಾಗೂ ದೈಹಿಕ ವಿಕಲಚೇತನರ ಆಶ್ರಮಧಾಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. 

ನಿಗದಿತ ಅರ್ಜಿ ನಮೂನೆ ಹಾಗೂ ಇತರೆ ವಿವರಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ ಸೈಟ್  ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ ಕಾರವಾರ, ದೂರವಾಣಿ ಸಂಖ್ಯೆ ೦೮೩೮೨-೨೨೦೩೩೬ ಸಂಪರ್ಕಿಸಬಹುದು. 

ಅರ್ಜಿ ಆಹ್ವಾನ 
ಕಾರವಾರ: ಕಾನೂನು ಪದವೀಧರರಿಗೆ ವಕೀಲ ವೃತ್ತಿ ಸೇವೆಗೆ ಸಂಬಂಧಿಸಿದಂತೆ ನ್ಯಾಯಾಡಳಿತದಲ್ಲಿ ೪ ವರ್ಷಗಳ ತರಬೇತಿಗಾಗಿ ಹಿಂದುಳಿದ ವರ್ಗಗಳ ಕಾನೂನು ಪದವಿಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಹಿಂದುಳಿದ ವರ್ಗಗಳ ಕಾನೂನು ಪದವೀಧರರು ಅರ್ಜಿಯನ್ನು ಜೂನ ೧೦ ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ಉತ್ತರ ಕನ್ನಡ, ಕಾರವಾರ ರವರಿಗೆ ಸಲ್ಲಿಸಬಹುದಾಗಿದೆ.

 ಅವದಿ ವಿಸ್ತರಣೆ
ಕಾರವಾರ: ಕಾರವಾರದ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ೨೦೧೭-೧೮ ನೇ ಸಾಲಿಗೆ ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವದಿಯನ್ನು ಮೇ ೩೧ ರವರೆಗೆ ವಿಸ್ತರಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.                    

Read These Next

ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...