ಶರಣರ ಆದರ್ಶಗಳ ಪಾಲನೆ ಬಹುಮುಖ್ಯ: ಎಸ್.ಎಸ್.ನಕುಲ್

Source: sonews | By Staff Correspondent | Published on 27th July 2018, 10:34 PM | Coastal News | Don't Miss |

ಕಾರವಾರ ಶರಣರ ಆದರ್ಶಗಳನ್ನು ಪಾಲಿಸುವ ಮೂಲಕ ಸಾರ್ಥಕ ಬದುಕು ಕಟ್ಟಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ.
    
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    
ಎಲ್ಲ ಶರಣರೂ ತಮ್ಮ ವಚನಗಳ ಮೂಲಕ ತಮ್ಮ ಅನುಭವಗಳನ್ನು ಉಲ್ಲೇಖಿಸಿ ಸಾರ್ಥಕ ಬದುಕಿನ ಸಾರವನ್ನು ಹೇಳಿದ್ದಾರೆ. ಈ ಹಿನ್ನೆಲೆಯ ಶರಣ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ತಮ್ಮ ತಮ್ಮ ಸುಂದರ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
    
ಅಂತೆಯೇ ಶಿವಶರಣ ಅಡಪದ ಅಪ್ಪಣ್ಣ ಅವರೂ 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದುಕೊಂಡು ತಮ್ಮ ವಚನಗಳ ಮೂಲಕ ಅನೇಕ ಜೀವನಮೌಲ್ಯಗಳ ಕೊಡುಗೆಯನ್ನು ಮನುಕುಲಕ್ಕೆ ನೀಡಿದ್ದಾರೆ ಎಂದರು.
    
ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಹಿಟ್ನಾಳ್, ಭಾರತ ಚುನಾವಣಾ ಆಯೋಗದ ಅಧಿಕಾರಿಗಳಾದ ಸೂರ್ಯಸೇನ್, ಡಾ.ರಮೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಉಪಸ್ಥಿತರಿದ್ದರು.
    
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...