ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರಕ್ಕೆ ಚಾಲನೆ  

Source: S O News service | By Staff Correspondent | Published on 18th January 2017, 11:27 PM | Coastal News | State News | Don't Miss |

ಕಾರವಾರ:  ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ದೀಪಬೆಳಗುವ ಮೂಲಕ ಚಾಲನೆ ನೀಡಿ, ಶಿಲ್ಪಕಲಾವಿದರನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರವಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಶಿಲ್ಪಕಲಾ ಶಿಬಿರವನ್ನು ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ಸಂಯೋಜನೆಯಲ್ಲಿ ಆಯೋಜಿಸಲಾಗಿದೆ. ಕಡಲತೀರದಲ್ಲಿ ರಾಕ್ ಗಾರ್ಡನ್ ರೂಪಿಸಲಾಗುತ್ತಿದೆ. ರಾಕ್ ಗಾರ್ಡನ್‌ಗೆ ಪೂರಕವಾಗಿ ಜಿಲ್ಲೆಯ ಬುಡಕಟ್ಟು ಜನಾಂಗಗಳಾದ ಹಾಲಕ್ಕಿ, ಕುಣಬಿ,ಕುಂಬ್ರಿ ಮರಾಠಿ, ಗೌಳಿ, ಗೊಂಡ,ಸಿದ್ದಿ ಸಮುದಾಯಗಳ ಸಂಭ್ರಮದ ಮತ್ತು ಸಾಂಸ್ಕೃತಿಕ ನೃತ್ಯಕಲೆಗಳ ಶಿಲ್ಪಗಳನ್ನು ನಿರ್ಮಾಣ ಮಾಡಲು ಕಲಾವಿದರು ಪ್ರತಿಭೆಯನ್ನು ಮೆರೆಯಬೇಕು. ಕಾರವಾರ ರಾಕ್ ಗಾರ್ಡನ್‌ನನ್ನು ದೇಶ ಮಟ್ಟದ ಎಲ್ಲಾ ಬುಡಕಟ್ಟು ಸಮುದಾಯಗಳ ಕಲೆಗಳನ್ನು ಮತ್ತು ಜನಜೀವನವನ್ನು ಪ್ರತಿಬಿಂಬಿಸುವಂತೆ ರೂಪಿಸುವ ಕನಸಿದೆ. ಇದು ನಿರಂತರವಾಗಿ ನಡೆಯುವ ಯೋಜನೆ. ಎರಡನೇ ಹಂತದಲ್ಲಿ ಜಿಲ್ಲೆಯ ಕಲಾವಿದರಿಗೆ ಒತ್ತು ನೀಡಿ ಅವರಿಂದ ಶಿಲ್ಪಗಳನ್ನು ರೂಪಿಸುವ ಯೋಜನೆ ಇದೆ. ಶಿಲ್ಪಕಲಾ ಅಕಾಡೆಮಿಯಲ್ಲಿ ಲಭ್ಯವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನ ಬಳಸಿ ವಿಶೇಷವಾಗಿ ಆಯ್ದ ಕಲಾವಿದರನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಯಿಸಲಾಗಿದೆ. ಅಲ್ಲದೇ ಕಡಲತೀರದಲ್ಲಿನ ಆರು ಎಕರೆ ಭೂಮಿಯನ್ನು ರಾಕ್ ಗಾರ್ಡನ್‌ಗೆ ಮೀಸಲಿಟ್ಟಿದ್ದು, ಕೋಸ್ಟಗಾರ್ಡಗೆ ನೀಡಿದ ಭೂಮಿಯನ್ನು ವಾಪಾಸ್ ಪಡೆಯಲಾಗಿದೆ ಎಂದರು. 

ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾದ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ಅವರು ಮಾತನಾಡಿ ಕಲಾವಿದನಿಗೆ ಅಹಂಕಾರ ಇರಬಾರದು. ಪ್ರಶಸ್ತಿಗಳ ಹಿಂದೆ, ಪದವಿಯ ಹಿಂದೆ ಬೀಳಬಾರದು. ಪ್ರಶಸ್ತಿಗಾಗಿ ಹುದ್ದೆಗಾಗಿ ಲಾಬಿ ಮಾಡುವವ ತನ್ನಲ್ಲಿರುವ ಕಲೆಯನ್ನು ಮರೆತು ಬಿಡುತ್ತಾನೆ. ವಿನಯವೇ ಕಲಾವಿದರ ಮೊದಲ ಲಕ್ಷಣ ಎಂದರು. ಹಾಗೆಯೇ ಕಲಾವಿದರನ್ನು ಸಹ ಸಮಾಜ ಮತ್ತು ಅಧಿಕಾರಿ ವರ್ಗದವರು ಗೌರವದಿಂದ ನಡೆಸಿಕೊಳ್ಳಬೇಕು. ಕಲಾವಿದರು ಶ್ರಮಜೀವಿಗಳಾಗಿರುತ್ತಾರೆ, ಸರಸ್ವತಿಪುತ್ರರಾದ ಶಿಲ್ಪಕಲಾವಿದರಿಗೆ ಬದುಕಿನಲ್ಲಿ ಸಾಕಷ್ಟು ಅವಕಾಶಗಳಿವೆ. ಅವರು ಅವಕಾಶಕ್ಕಾಗಿ ಕಾಯಬೇಕು ಎಂದರು. 

ಶಿಬಿರದ ಉದ್ದೇಶವನ್ನು ಶಿಲ್ಪಕಲಾ ಅಕಾಡೆಮಿಯ ಸದಸ್ಯ ಸಂಚಾಲಕ ಡಾ.ವಿರೂಪಾಕ್ಷ ಬಿ.ಬಡಿಗೇರ ವಿವರಿಸುತ್ತಾ ನಾಡಿನ ವಿವಿದೆಡೆ ೫೦ ಶಿಲ್ಪಕಲಾ ಶಿಬಿರಗಳು ನಡೆದಿವೆ. ವಿವಿಧ ಜಿಲ್ಲೆಗಳಲ್ಲಿನ ಶಿಲ್ಪಕಲಾ ಕಲಾವಿದರಿಗೆ ಅಕಾಡೆಮಿ ಅವಕಾಶ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇಲ್ಲಿನ ಬುಡಕಟ್ಟು ಜನಾಂಗದ ಸಂಭ್ರಮವನ್ನು ಶಿಲ್ಪಗಳಲ್ಲಿ ಮೂಡಿಸಲು ಪ್ರಯತ್ನಿಸಲಾಗುವುದು ಎಂದರು.
ಆರಂಭದಲ್ಲಿ ಸಹಾಯಕ ಕಮಿಷನರ್ ಶಿವಾನಂದ ಕರಾಳೆ ಸ್ವಾಗತಿಸಿದರು. ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಶಿಬಿರ ನಿರ್ದೇಶಕ ಕುಮಾರ್ ಬಾಬು ಘಸ್ತಿ, ವಿಶೇಷ ಜಿಲ್ಲಾಧಿಕಾರಿ ಹಾಗೂ ಹುಬ್ಬಳ್ಳಿ-ಅಂಕೋಲಾ ಭೂಸ್ವಾಧೀನಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಲ್. ಚಂದ್ರಶೇಖರ ನಾಯಕ ಉಪಸ್ಥಿತರಿದ್ದರು ಕಾರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಾಜ ಹರಪನಹಳ್ಳಿ ಕಾರ್ಯಕ್ರಮ ನಿರೂಪಿಸಿದರೆ, ತಹಶೀಲ್ದಾರ ಜಿ.ಎನ್.ನಾಯ್ಕ ವಂದಿಸಿದರು. 

ಕಾಳಿನದಿ ನೀರಾವರಿ ಯೋಜನೆ ಅನುಷ್ಠಾನ ಸಭೆ 
ಕಾರವಾರ: ಹಳಿಯಾಳ ತಾಲೂಕಿನ ಕೆರೆ ಮತ್ತು ಬಾಂದಾರುಗಳಿಗೆ ನೀರು ತುಂಬುವ ಯೋಜನೆಗೆ ಶೀಘ್ರ ಅನುಷ್ಠಾನ ನೀಡುವ ಸಂಬಂದ ಜಿಲ್ಲಾ ಉಸ್ತುವಾರಿ, ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ನೀರಾವರಿ ಸಚಿವ ಎಮ್.ಬಿ.ಪಾಟೀಲ ಮತ್ತು ಸಂಭಂದಪಟ್ಟ ಅಧೀಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿದರು

ವಸತಿ ಯೋಜನೆಗೆ ಅರ್ಜಿ ಆಹ್ವಾನ
ಕಾರವಾರ: ಅಂಕೋಲಾ ತಾಲೂಕಿನ ವಸತಿರಹಿತ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಮಹಿಳಾ ಫಲಾನುಭವಿಗಳಿಗೆ ಮನೆಗಳನ್ನು ಒದಗಿಸಲು ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  
ವಿವಿಧ ಯೋಜನೆಗಳ ಅಡಿಯಲ್ಲಿ ವಸತಿ ನಿರ್ಮಾಣಕ್ಕಾಗಿ ಫಲಾನುಭವಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಬಗ್ಗೆ ಕಂದಾಯ ಇಲಾಖೆಯಿಂದ ನೀಡಿದ ಪ್ರಮಾಣ ಪತ್ರ ಹೊಂದಿರಬೇಕು. ಗಂಡ/ಹೆಂಡತಿ/ಕುಟುಂದ ಹೆಸರಿನಲ್ಲಿ ಸ್ವಂತ ನಿವೇಶನ ಹೊಂದಿರಬೇಕು. ವಾರ್ಷಿಕ ವರಮಾನ ೩೨ ಸಾವಿರ ಮೀರಿರಬಾರದು. ಹಾಗೂ ಇತರೆ ದಾಖಲೆಗಳೊಂದಿಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ರವರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಂಕೋಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೇಳಿದ್ದಾರೆ.

ಜ.೨೭ ರಂದು ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಸಭೆ 
ಕಾರವಾರ: ಬನವಾಸಿ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನುs ಜನವರಿ ೨೭ ರಂದು ಮದ್ಯಾಹ್ನ ೩ ಗಂಟೆಗೆ ಶಿರಸಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದ್ದಾರೆ. 
ಸಾರ್ವಜನಿಕರು ಹಾಗೂ ಸಾಹಿತ್ಯಕಾರರು ಸದರಿ ಸಭೆಗೆ ಆಗಮಿಸಿ ತಮ್ಮ ಸಲಹಾ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ. 

ಆನ್-ಲೈನ್ ಅರ್ಜಿ ಅಹ್ವಾನ 
ಕಾರವಾರ: ೨೦೧೭-೧೮ನೇ ಸಾಲಿನಲ್ಲಿ ಹೊಸದಾಗಿ ಶಾಶ್ವತ ಅನುದಾನ ರಹಿತವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. 
 ಜ.೩೧ ರೊಳಗೆ ಶಾಲೆಗಳ ಆಡಳಿತ ಮಂಡಳಿಯವರು ಆನ್-ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಆಯಾ ತಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಉಪನಿರ್ದೇಶಕರು ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಕೃಷ್ಣ ನಾಯಕ ತಿಳಿಸಿದ್ದಾರೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...