ಕೈಗಾ ಸುತ್ತಮುತ್ತ ಕ್ಯಾನ್ಸರ್ ಭಯ ಇಲ್ಲ: ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟನೆ

Source: sonews | By Staff Correspondent | Published on 23rd June 2018, 8:47 PM | Coastal News | State News | Don't Miss |

ಕಾರವಾರ: ಕೈಗಾ ಸುತ್ತಮುತ್ತ ಕ್ಯಾನ್ಸರ್ ಹೆಚ್ಚಾಗುತ್ತಿದೆ ಎಂಬ ಮಾಧ್ಯಮ ವರದಿಗಳಲ್ಲಿ ಹುರುಳಿಲ್ಲ ಎಂದಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಕ್ಯಾನ್ಸರ್‍ನ ಯಾವುದೇ ಭಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿಗೆ ಕೆಲವು ಮಾಧ್ಯಮಗಳಲ್ಲಿ ಟಾಟಾ ಮೆಮೋರಿಯಲ್ ಸೆಂಟರ್‍ನವರು ಮಾಡಿದ ಕಾರವಾರ ಕ್ಯಾನ್ಸರ್ ರಿಜಿಸ್ಟ್ರಿ 2010-13ರ ವರದಿಗೆಯನ್ನು ತಪ್ಪಾಗಿ ಗ್ರಹಿಸಿ ಮಾಡಿದ ವರದಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು ಶೇ.200ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ ಎಂಬ ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲ ಹಾಗೂ ಕ್ಯಾನ್ಸರ್ ಸಂಬಂಧಿಸಿದಂತೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟಾಟಾ ಮೆಮೊರಿಯಲ್ ಸೆಂಟರ್‍ನ ಮುಖ್ಯಸ್ಥ ಡಾ.ಗಣೇಶ್ ಬಿ ಅವರು ವರದಿ ಕುರಿತು ಸ್ಪಷ್ಟನೆ ನೀಡಿದ್ದು, ತಮ್ಮ ಸಂಸ್ಥೆಯ ಅಧ್ಯಯನ ವರದಿಯಲ್ಲಿ ಎಲ್ಲಿಯೂ ಶೇ.200ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ ಎಂದಾಗಲಿ ಅಥವಾ ಕೈಗಾ ಸುತ್ತಮುತ್ತ ಗ್ರಾಮಗಳಲ್ಲೇ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ ಎಂದಾಗಲಿ ಉಲ್ಲೇಖಿಸಿರುವುದಿಲ್ಲ ಎಂಬ ಬಗ್ಗೆ ಸ್ಪಷ್ಟನೆಯನ್ನು ನೀಡಿರುತ್ತಾರೆ ಎಂದು ಅವರು ತಿಳಿಸಿದರು.

ಟಾಟಾ ಮೆಮೊರಿಯಲ್ ಸೆಂಟರ್‍ನವರು 2010ರಿಂದ 2013ರವರೆಗೆ ಮೊದಲ ಹಂತದಲ್ಲಿ ಕಾರವಾರ ತಾಲೂಕಿನಲ್ಲಿ ಕ್ಯಾನ್ಸರ್ ಪ್ರಕರಣಗಳ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿರುತ್ತಾರೆ. ಇದು ಕ್ಯಾನ್ಸರ್ ಪ್ರಕರಣ ಪತ್ತೆಯಾದ ಆಸ್ಪತ್ರೆ ಮತ್ತು ರೋಗ ಲಕ್ಷಣ ಇರುವ ರೋಗಿಗಳ ಆಯ್ದ ಪ್ರಕರಣಗಳಿಂದ ಪ್ರಾಥಮಿಕ ಹಂತದ ಮಾಹಿತಿ ಸಂಗ್ರಹಿಸಿದ ಮಾಹಿತಿಯಾಗಿರುತ್ತದೆ. ಈ ಅಧ್ಯಯನ ವರದಿಯಲ್ಲಿ 316 ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಇದು ಕಾರವಾರ ತಾಲೂಕಿನ ಮಾಹಿತಿಯಾಗಿದ್ದು ಕೈಗಾ ಸುತ್ತಮುತ್ತ ಎಂದಾಗಲಿ ಅಥವಾ ಶೇ.200ರಷ್ಟು ಪ್ರಕರಣಗಳು ಹೆಚ್ಚಾಗಿವೆ ಎಂದಾಗಲಿ ಅಧ್ಯಯನ ವರದಿಯಲ್ಲಿ ಹೇಳಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಕ್ಯಾನ್ಸರ್ ಕುರಿತು ಯಾವುದೇ ಭೀತಿಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಇದೇ ಸಂಸ್ಥೆ ಎರಡನೇ ಹಂತದಲ್ಲಿ ಅಂಕೋಲ, ಯಲ್ಲಾಪುರ, ಜೋಯಿಡಾ ಹಾಗೂ ಕಾರವಾರ ತಾಲೂಕಿನಲ್ಲಿ ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡಿದ್ದು ಆ ವರದಿ ನಂತರವೇ ಈ ಹಿಂದಿಗಿಂತ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆಯೇ ಅಥವಾ ಕಡಿಮೆಯಾಗಿವೆ ಅಥವಾ ಯಾವ ಕಾರಣಕ್ಕೆ ಕ್ಯಾನ್ಸರ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ ಎಂಬ ಅಧ್ಯಯನ ವರದಿಯನ್ನು ಅದು ನೀಡಲಿದೆ. ಆದರೆ ಪ್ರಸ್ತುತ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದರು.

ಅಲ್ಲದೆ ಕೈಗಾದಿಂದ ಹೊರ ಸೂಸುವ ವಿಕಿರಣಗಳಿಂದಾಗಿ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುವ ಬಗ್ಗೆಯೂ ಅಧ್ಯಯನ ವರದಿ ಹೇಳಿಲ್ಲ. ಈ ಸಂಬಂಧ ವರದಿಯೇ ಹೇಳಿರುವಂತೆ ವಿವಿಧ ರಾಜ್ಯ ಮತ್ತು ದೇಶಗಳಲ್ಲಿ ಕ್ಯಾನ್ಸರ್ ಪ್ರಕರಣ ಪ್ರಮಾಣವನ್ನು ಹೋಲಿಸಿದಾಗ ಕಾರವಾರ ಕೊನೆಯಿಂದ ಎರಡನೇ ಸ್ಥಾನದಲ್ಲಿದೆ. ಅತ್ಯಂತ ಕಡಿಮೆ ಪ್ರಕರಣಗಳು ಇಲ್ಲಿವೆ ಎಂಬುದು ಸ್ಪಷ್ಟವಾಗಿದೆ ಎಂದೂ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಟಾಟಾ ಮೆಮೋರಿಯಲ್ ಸೆಂಟರ್‍ನ ವೈದ್ಯಕೀಯ ಪ್ರತಿನಿಧಿ ಡಾ.ಚೇತನ ಉಪಸ್ಥಿತರಿದ್ದರು.
    
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...