ಟೈರ್ ರಿಮೋಡ್ ಘಟಕದಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ಹಾನಿ

Source: sonews | By Staff Correspondent | Published on 14th January 2018, 5:40 PM | Coastal News | Don't Miss |

ಕಾರವಾರ: ಟೈರ್ ರಿಮೋಡ್ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುತ್ತಲೂ ಬೆಂಕಿ ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡ ಕಾತ್ಯಾಯನಿ ಟೈರ್ ರಿಮೋಡ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಒಳಗಡೆ ಇದ್ದ ಲಕ್ಷಾಂತರ ಮೌಲ್ಯದ ಮಷೀನರಿಗಳು ಹಾಗು ಟೈರ್ ಗಳು ಹೊತ್ತು ಉರಿದು ಸುಟ್ಟು ಕರಕಲಾಗಿದೆ. ಕಾರ್ಮಿಕರು ಹೊರಗಡೆ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳಿಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಹರಸಾಹಸ ಪಟ್ಟರು. ಬೆಂಕಿಯ ಜ್ವಾಲೆ ತೀವ್ರತೆ ಪಡೆಯುತ್ತಿದ್ದಂತೆ ಹತ್ತಿರದಲ್ಲಿದ್ದ ಸ್ಥಳೀಯರು ಕೂಡಾ ಕಂಗಾಲಾಗಿದ್ದಾರೆ. ವಿಷಯ ತಿಳಿದ ಅಂಕೋಲಾ ಪೋಲಿಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...