ಏಕೀಕೃತ ವಿದ್ಯಾರ್ಥಿವೇತನ

Source: sonews | By Staff Correspondent | Published on 7th September 2018, 11:43 PM | Coastal News | Don't Miss |

ಕಾರವಾರ : STATE SCHOLARSHIP PORTAL ತಂತ್ರಾಂಶದ ಮೂಲಕ  2018-19 ನೇ ಸಾಲಿಗೆ ಏಕೀಕೃತ ವಿದ್ಯಾರ್ಥಿವೇತನ ಜಾರಿಗೊಳಿಸಲಾಗಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (http://ssp.karnataka.gov.in) ಮುಖಾಂತರ ವಿದ್ಯಾರ್ಥಿ ವೇತನವನ್ನು ಕಲ್ಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 
ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಸೆಪ್ಟಂಬರ 30  ಅಂತಿಮ ದಿನವಾಗಿರುತ್ತದೆ. ಈಗಾಗಲೇ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ತಾಲೂಕಾ ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕಾ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ, ತಾಲೂಕಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರವರು ತಾಲೂಕು ನೋಡಲ್ ಅಧಿಕಾರಿಗಳಾಗಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟು 189685 (ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 85987, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 103698) ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿದ್ದು, ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೂ (ಶೇ 65% ಕ್ಕಿಂತ ಹೆಚ್ಚು) ವಿದ್ಯಾರ್ಥಿವೇತನ ಕಲ್ಪಿಸುವ ಗುರಿಯನ್ನು ಹೊಂದಿದೆ. 
ಪ್ರತಿ ತಾಲೂಕಿಗೆ 10 ಇಂಟರನೆಟ್ ಸೌಲಭ್ಯ ಹೊಂದಿರುವ ಕಂಪ್ಯೂಟರಗಳನ್ನು ಒಳಗೊಂಡ ನೋಂದಣಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. (ವಸತಿ ನಿಲಯ, ಹಿಂದುಳಿದ ವರ್ಗಗಳ/ಸಮಾಜ ಕಲ್ಯಾಣ ಇಲಾಖೆಯ ತಾಲೂಕಾ ಕಛೇರಿ, ಪ್ರೌಢಶಾಲೆ, ಮೂರಾರ್ಜಿ ವಸತಿ ಶಾಲೆ) ವಿದ್ಯಾರ್ಥಿಗಳು ಗಣಕಯಂತ್ರ ಸೌಲಭ್ಯ ಹೊಂದಿದ ಖಾಸಗಿ ಕೇಂದ್ರಗಳಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...