ಮಹಿಳಾ ಸಾಂತ್ವನ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ : ಎಲ್ ಚಂದ್ರಶೇಖರ ನಾಯಕ 

Source: sonews | By Staff Correspondent | Published on 20th March 2018, 12:25 AM | Coastal News | Don't Miss |

ಕಾರವಾರ: ಜಿಲ್ಲೆಯ  ಎಲ್ಲಾ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕಹೇಳಿದರು

ಅವರು ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ವರದಕ್ಷಿಣೆ ನಿಷೇದ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ, ಸಾಂತ್ವನ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ಅಲ್ಲಿರುವ ಸಿಬ್ಬಂದಿಗಳು ಆಸಕ್ತಿ ಮತ್ತು ದಕ್ಷತೆಯಿಂದ ಪ್ರಾಮಾಣಿಕವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು, ಜಿಲ್ಲಾ ಆಸ್ಪತ್ರೆಯಲ್ಲಿರುವ ಮಹಿಳಾ ಚಿಕಿತ್ಸಾ ಘಟಕದಲ್ಲಿ ಮಹಿಳಾ ಪೋಲಿಸ ಪೇದೆ ಮತ್ತು ವಕೀಲರನ್ನು ನಿಯೋಜಿಸಿ  ಎಂದು ಸೂಚಿಸಿದರು.

ಶಾಲೆಗಳಲ್ಲಿರುವ ಸುರಕ್ಷಾ ಸಮಿತಿಗಳು ಆಯ್ದ ಅರ್ಹ ಶಿಕ್ಷಕಿಯೊಬ್ಬರನ್ನು ಕೌನ್ಸಲರನ್ನಾಗಿ ಮಾಡಿ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ದೌಜ್ರ್ಯನ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಸುರಕ್ಷಾ ಸಮಿತಿಗಳು ಇನ್ನು ಮುಂದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕಾರವಾರ ಡಿ.ಡಿ,ಪಿ.ಐ ಅವರಿಗೆ ಸಿ.ಇ.ಒ ಸೂಚಿಸಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಮಾತನಾಡಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳು ಜಿಲ್ಲೆಯ 11 ತಾಲೂಕುಗಳಲ್ಲಿಯೂ ಕಾರ್ಯನಿರ್ವಹಿಸುತ್ತಿವೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರನ್ನು ಇಟ್ಟುಕೊಳ್ಳಲು ಸ್ವಾಧಾರ ಕೇಂದ್ರ ಪ್ರಾರಂಬಿಸಲು ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಮತ್ತು ಇಂದಿನಿಂದ ಜಿಲ್ಲೆಯ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಗೆಳತಿ ಸಹಾಯ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಗ್ರಾಮ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಕಾವಲು ಸಭೆಗಳನ್ನು ನಡೆಸಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತ್‍ಗಳಲ್ಲಿ ಸಮಿತಿ ರಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಹೆಣ್ಣು ಮಕ್ಕಳು ಕಾಣೆಯಾದರೆ ಕೂಡಲೇ ಸ್ಥಳಿಯ ಪೊಲೀಸ್ ಠಾಣೆಗೆ, ಸಾಂತ್ವನ ಕೇಂದ್ರ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಮಾಹಿತಿ ನೀಡಲು ಸೂಚನೆ ನೀಡಲಾಗುತ್ತಿದೆ ಎಂದು ವಿವರಿಸಿದರು. 
 

ಸಭೆಯಲ್ಲಿ ಪೊಲೀಸ್ ಅಧಿಕಾರಿ, ವಕಿಲರು ಮತ್ತು ವಿವಿಧ ಸ್ವಯಂ ಸೇವಾ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

   ಮಾ.20 ರಂದು ನೂತನ ಬಸ್ ನಿಲ್ದಾಣಗಳ ಶಂಕುಸ್ಥಾಪನಾ ಸಮಾರಂಭ
ಕಾರವಾರ:  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ನೂತನ ಬಸ್ ನಿಲ್ದಾನಗಳ  ಶಂಕುಸ್ಥಾಪನಾ ಸಮಾರಂಭವು  ಮಾರ್ಚ 20 ರಂದು ಬೆಳಗ್ಗೆ 10.30 ಕ್ಕೆ ಯಲ್ಲಾಪುರದಲ್ಲಿ ಮತ್ತು ಮದ್ಯಾಹ್ನ  12.30 ಕ್ಕೆ ಮುಂಡಗೋಡ ಬಸ್ ನಿಲ್ದಾಣದಲ್ಲಿ  ನಡೆಯಲಿದೆ.

ಸಾರಿಗೆ ಸಚಿವ ಎಚ್.ಎಮ್. ರೇವಣ್ಣ ಶಂಕುಸ್ಥಾಪನೆ ನೇರವೆರಿಸುವರು. ಶಾಸಕ ಶಿವರಾಮ ಹೆಬ್ಬಾರ ರವರು ಅಧ್ಯಕ್ಷತೆ ವಹಿಸುವರು . ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ರವರು  ಉಪಸ್ಥಿತಿವಹಿಸುವರು ಕೇಂದ್ರ ಸಚಿವಅನಂತಕುಮಾರ ಹೆಗಡೆ, ವಾಕರಸಾಸಂಸ್ಥೆ ಕೇಂದ್ರಕಚೇರಿ ಹುಬ್ಬಳ್ಳಿಯ ಅಧ್ಯಕ್ಷ ಸದಾನಂದಡಂಗರನವರ, ವಾಕರಸಾಸಂಸ್ಥೆಕೇಂದ್ರಕಚೇರಿ ಹುಬ್ಬಳ್ಳಿ,  ವ್ಯವಸ್ಥಾಪಕ ನಿರ್ದೇಶಕ ಪಾಂಡುರಂಗ ಬಿ. ನಾಯಕ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
 

Read These Next

ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...