ಕಾರವಾರ: "ಮಹಿಳಾ ಸಶಕ್ತತೆ ಜಾಗೃತಿ ಕಾರ್ಯಕ್ರಮ"

Source: so english | By Arshad Koppa | Published on 21st March 2017, 7:59 AM | Coastal News | Special Report |

`ಜನ ಶಿಕ್ಷಣ ಸಂಸ್ಥಾನ ಕಾರವಾರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ "ಮಹಿಳಾ ಸಶಕ್ತತೆ ಜಾಗೃತಿ ಕಾರ್ಯಕ್ರಮ"ವು ಮುರ್ಡೇಶ್ವರದ ಓಲಗಮಂಟಪದಲ್ಲಿ 18.3.2017ರ ಶನಿವಾರ ಜರುಗಿತು. ಕಾರ್ಯಕ್ರಮವನ್ನು ಮುರ್ಢೇಶ್ವರ ಪಂಚಾಯತ್ ಅಧ್ಯಕ್ಷೆ ನಾಗರತ್ನ ಪಡಿಯಾರ ಉದ್ಘಾಟಿಸಿ ಮಹಿಳೆಯರು ಆತ್ಮವಿಶ್ವಾಸದಿಂದ ತನ್ನ ಪ್ರಗತಿಗೆ ಮುನ್ನಡೆಯಬೇಕು. ಮಹಿಳೆಯರು ಸಶಕ್ತರಾಗಲು ಪುರುಷರೂ ಮುಕ್ತ ಮನಸಿನಿಂದ ಪ್ರೋತ್ಸಾಹಿಸಬೇಕೆಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೀನಾವೈದ್ಯ ಇಂಟರನ್ಯಾಶನಲ್ ಪಬ್ಲಿಕ್ ಸ್ಕೂಲಿನ ಆಡಳಿತ ನಿರ್ದೇಶಕಿ ಪುಷ್ಪಲತಾ ಎಂ.ಎಸ್. ಮಾತನಾಡಿ ನಮ್ಮ ನೆಲ ಜಲವನ್ನು ನಾವು ಸ್ತ್ರೀ ಎಂದು ಮಾತೃಸ್ಥಾನ ನೀಡಿದ್ದೇವೆ. ಸಮಾನತೆಯ ಹಕ್ಕು  ಇದ್ದರೂ ಕೂಡ ಇಂದು ಮಹಿಳೆ ಶೊಷಿತಳಾಗುತ್ತಿದ್ದಾಳೆ. ಪುರುಷರು ಮಹಿಳೆಯರೆಲ್ಲರೂ ತಮ್ಮ ಮನಸ್ಥಿತಿಯಲ್ಲಿ ಪರಿವರ್ತನೆ ತಂದುಕೊಂಡಾಗ ಮಹಿಳೆಯ ಸಬಲೀಕರಣ ಸಾಧ್ಯ ಎಂದು ನುಡಿದರು. ಇನ್ನೋರ್ವ ಅತಿಥಿಯಾಗಿ ಪಾಲ್ಗೊಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜಕಿ ಶ್ರೀಮತಿ ಯಲ್ಲಮ್ಮ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಶಿಕ್ಷನ ಸಂಸ್ಥಾನದ ಶಸಿಕಾಂತ ನಾಯ್ಕ ಮಾತನಾಡಿ ಸಂಸ್ಥೆಯಿಂದ ನೀಡಲಾಗುವ ವಿವಿಧ ವೃತ್ತಿತರಭೇತಿಯ ಜೊತೆಯಲ್ಲಿ ಬದುಕಿನ ನಿರ್ವಹಣೆಯ ಕೌಶಲವನ್ನೂ ಅರಿತುಕೊಂಡು ಮಹಿಳೆ ಶಕ್ತಳಾಗಬೇಕಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಜನಶಿಕ್ಷಣ ಸಂಸ್ಥಾನ ನೀಡುವ ವೃತ್ತಿತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.ಕಾರ್ಯಕ್ರಮದ ವೇದಿಕೆಯಲ್ಲಿ ಪಂಚಾಯತ ಸದಸ್ಯರಾದ ನಯನಾ ನಾಯ್ಕ, ಪಾವತಿ ಹರಿಕಾಂತ, ಮಂಜುಳಾ ನಾಯ್ಕ, ಉಪಸ್ಥಿತರಿದ್ದರು.ವೇದಿಕೆಯಲ್ಲಿ ಉಪಸ್ಥಿತರಿದ್ದ ತಾಲೂಕಾ ಕನ್ನಡ ಸಾಃಇತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಎಮ್.ಪಿ. ಬಂಢಾರಿ ಪ್ರಾಸ್ತಾವಿಕ ನುಡಿಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು. ಕುಮಾರಿ ಅಶ್ವಿನಿ ಪಟಗಾರ ಪ್ರಾರ್ಥಿಸಿದರೆ ಜನಶಿಕ್ಷಣ ಸಂಸ್ಥಾನದ ಉಷಾ ದುರ್ಗೇಕರ ವಂದಿಸಿದರು. ರೇಶ್ಮಾ ನಾಯ್ಕ ನಿರೂಪಿಸಿದರು. ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಉಪಸ್ಥಿತರಿದ್ದರು

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...