ಕಾರವಾರ:ಜುಲೈ 20  ರಂದು ಡಾ. ಬಿ.ಆರ್.ಅಂಬೇಡ್ಕರ್ ರವರಿಗೆ ಗೌರವ ನಮನ

Source: varthabhavan | By Arshad Koppa | Published on 20th July 2017, 8:38 AM | Coastal News | Special Report |

ಕಾರವಾರ ಜುಲೈ 19 : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20  ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ’’ ತಮಗಿದೋ ನಮ್ಮ ಗೌರವ’’ ಕಾರ್ಯಕ್ರಮ ಆಚರಿಸಲಾಗುವುದು.
         

ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಉದ್ಘಾಟಿಸುವರು. ಕಾರವಾರ-ಅಂಕೋಲಾ ಕ್ಷೇತ್ರ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಅನಂತ ಕುಮಾರ ಹೆಗಡೆ , ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರ ಶಾಸಕಿ ಶಾರದಾ ಶೆಟ್ಟಿ ಜಿಲ್ಲಾ ಪಂಚಾಯತ್ ಅದ್ಯಕ್ಷೆ ಜಯಶ್ರೀ ಮೋಗೇರ, ಸೇರಿದಂತೆ ಜನಪ್ರತಿನಿಧಿಗಳು  ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಭಾಗವಹಿಸುವರು. ಡಾ: ಬಿ.ಆರ್.ಅಂಬೇಡ್ಕರ್ ಕುರಿತು ಡಾ.ವಿಠ್ಠಲ ಭಂಡಾರಿ ಉಪನ್ಯಾಸ ನೀಡುವರು. 


ಅಪಘಾತ ಪೀಡಿತರಿಗೆ ಸಹಾಯ ನೀಡಿದ ಸೇವಾಕರ್ತರಿಗೆ ಜೀವರಕ್ಷಕ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ 


ಕಾರವಾರ ಜುಲೈ 19 : ಅಪಘಾತ ಸಂದರ್ಭಗಳಲ್ಲಿ ಗಾಯಾಳುಗಳಿಗೆ ಸಹಾಯ ಮಾಡಿದ ಸೇವಾಕರ್ತರನ್ನು/ಉಪಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಜೀವ ರಕ್ಷಕ ಪ್ರಶಸ್ತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ. 
 ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆಯನ್ನು ಸುವರ್ಣ ಅರೋಗ್ಯ ಸುರಕ್ಷಾ ಟ್ರಸ್ಟ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉತ್ತರ ಕನ್ನಡ ಜಿಲ್ಲೆ ದಾರವಾಣ  ಸಂಖ್ಯೆ 8105795644, 8861005501 ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...