ಮಾದಕಯುಕ್ತ ಮಾತ್ರೆ ಮಾರಾಟ; ಮಂಗಳೂರು ಮೂಲದ ಯುವಕನ ಬಂಧನ

Source: S O News service | By Staff Correspondent | Published on 2nd February 2017, 8:24 PM | Coastal News | National News | Don't Miss |

ಕಾಸರಗೋಡು   : ಮಾದಕ ಯುಕ್ತ ಮಾತ್ರೆಗಳನ್ನು ಮಾರಾಟ ಮಾಡುತ್ತಿರುವ ಆರೋಪದಡಿ ಕಾಸರಗೋಡು ಪೊಲೀಸರು ಮಂಗಳೂರು ಮೂಲದ ಯುವಕನನ್ನು ಬಂಧಿಸಿದ್ದು ಈತ ವಿದ್ಯಾರ್ಥಿಗಳನ್ನು ಕೇಂದ್ರವಾಗಿಟ್ಟು ಈ ಕಾರ್ಯ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. 

 

ಬಂಧಿತನನ್ನು ಯುವಕ ಮಂಗಳೂರು ಮೂಲದ  ಬೆಂಗರೆಯ ನಿವಾಸಿ ಮುಹಮ್ಮದ್ ಝಾಕೀರ್ ( 22) ಎಂದು ಗುರುತಿಸಲಾಗಿದೆ. 

ಮಂಗಳೂರು - ತಿರುವನಂತಪುರ  ಎಕ್ಸ್ ಪ್ರೆಸ್ ರೈಲಿನಲ್ಲಿ  ಕಾಸರಗೋಡು ರೈಲು ನಿಲ್ದಾಣದಲ್ಲಿ ಬಂದಿಳಿದ ಈತನನ್ನು  ಅಬಕಾರಿ ದಳ  ಮತ್ತು  ರೈಲ್ವೆ ಭದ್ರತಾ  ಪಡೆ ಸಿಬ್ಬಂದಿಗಳು ಬಂಧಿಸಿದರು. 

ಈತ ಕಾಸರಗೋಡಿನ ಹಲವು ಶಾಲೆ ಮತ್ತು  ಯುವಕರನ್ನು  ಕೇಂದ್ರೀಕರಿಸಿ  ಮಾತ್ರೆಗಳನ್ನು  ಮಾರಾಟ ಮಾಡುತ್ತಿದ್ದನು. ಕೇರಳ ದಲ್ಲಿ  ನಿಷೇಧಿಸಿದ ನೈಟ್ರೊ ವೈಟ್ ,ನೈಟ್ರೊ ನೈಥ೦ ಮಾತ್ರೆಗಳನ್ನು  ವಶಕ್ಕೆ ತೆಗೆದುಕೊಳ್ಳಲಾಗಿದೆ. 

ಒಂದು  ಮಾತ್ರೆಗೆ  200 ರೂ . ವಸೂಲು ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...